ಕಲ್ಪ ಮೀಡಿಯಾ ಹೌಸ್ | ವಾಷಿಂಗ್ಟನ್ |
ದಕ್ಷಿಣ ಕ್ಯಾಲಿಫೋರ್ನಿಯಾದ #SouthernCalifornia ಸುಂದರ ನಗರ ಎಂದೇ ಖ್ಯಾತವಾಗಿರುವ ಲಾಸ್ ಏಂಜಲೀಸ್ #LodAngeles ವ್ಯಾಪ್ತಿಯಲ್ಲಿ ಭೀಕರ ಕಾಡ್ಗಿಚ್ಚು ಹೊತ್ತಿಕೊಂಡಿದ್ದು, 15 ಸಾವಿರಕ್ಕೂ ಅಧಿಕ ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ.
ಈ ವಾರದ ಆರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ಕಾಣಿಸಿಕೊಂಡಿದ್ದ ಕಾಡ್ಗಿಚ್ಚು ಮಂಗಳವಾರದ ನಂತರ ವ್ಯಾಪಕವಾಗಿದೆ. ಅಲ್ಲದೇ, ಜನವಸತಿ ಪ್ರದೇಶಗಳಿಗೂ ಸಹ ಬೆಂಕಿ ವ್ಯಾಪಿಸಿದೆ. ಪರಿಣಾಮವಾಗಿ 1000 ಕಟ್ಟಡ ಬೆಂಕಿಗೆ ಆಹುತಿಯಾಗಿದ್ದು, ಐವರು ಸಜೀವವಾಗಿ ದಹನಗೊಂಡಿದ್ದಾರೆ.
Also Read>> ತಿರುಪತಿ ಕಾಲ್ತುಳಿತ | ಒಟ್ಟು 6 ಭಕ್ತರ ಸಾವು | ಪ್ರಧಾನಿ ಸಂತಾಪ | ಈಗ ಹೇಗಿದೆ ಪರಿಸ್ಥಿತಿ?
ಸುಮಾರು 15,832 ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದ್ದು, ಬೆಂಕಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಸುಮಾರು 1 ಲಕ್ಷ ಮಂದಿಯನ್ನು ಸ್ಥಳಾಂತರಿಸಲಾಗಿದೆ. ಇನ್ನೂ ಕೆಲವೆಡೆ ಅಸಂಖ್ಯಾತ ಐಷಾರಾಮಿ ಮನೆಗಳು ಬೆಂಕಿ ಹೊತ್ತಿಕೊಳ್ಳುವ ಭೀತಿಯಲ್ಲಿವೆ ಎಂದು ವರದಿಯಾಗಿದೆ.
ಸಣ್ಣ ಪ್ರಮಾಣದಲ್ಲಿ ಹೊತ್ತಿಕೊಡ್ಡಿಂದ್ದ ಕಾಡ್ಗಿಚ್ಚು ಮಂಗಳವಾರದ ವೇಳೆಗೆ ಜನನಿಬಿಡ ಪ್ರದೇಶಗಳಿಗೆ ವ್ಯಾಪಿಸಿದೆ. ನಿಯಂತ್ರಣಕ್ಕೆ ಬಾರದ ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಸಮರೋಪಾದಿ ಕಾರ್ಯಾಚರಣೆ ನಡೆಸುತ್ತಿದೆ.
ಬುಧವಾರ ಅಗ್ನಿಶಾಮಕ ದಳದ ಬೆಂಕಿ ನಂದಿಸುವ ಕಾರ್ಯ ಬಹುತೇಕ ಯಶಸ್ವಿಯಾಗುವ ಸಾಧ್ಯತೆಗಳಿತ್ತು. ಈ ವೇಳೆ ಚಂಡಮಾರುತ ಗಾಳಿ ಬೀಸಿದ್ದರಿಂದ ಬೆಂಕಿ ಕೆನ್ನಾಲಿಗೆ ಮತ್ತಷ್ಟು ವ್ಯಾಪಿಸಿತು ಎಂದು ವರದಿ ಹೇಳಿದೆ.
ಇನ್ನೂ ಲಾಸ್ ಏಂಜಲೀಸ್’ನಲ್ಲಿ ಹಬ್ಬಿದ ಕಾಡ್ಗಿಚ್ಚಿನಿಂದ ಸುಮಾರು 50 ಶತಕೋಟಿ ಡಾಲರ್ (42,000 ಕೋಟಿ ರೂ.) ಸಂಪತ್ತು ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post