ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೆಲವು ವ್ಯಕ್ತಿಗಳು ಸೂಡಾ ನಿವೇಶನ #SudaSite ಮಂಜೂರು ಮಾಡಿಕೊಡುವುದಾಗಿ ಹಣದ ಬೇಡಿಕೆ ಇಡುತ್ತಿದ್ದು ಇಂತಹ ಯಾವುದೇ ಆಮಿಷಕ್ಕೆ ಸಾರ್ವಜನಿಕರು ಒಳಗಾಗದೇ ಇರುವಂತೆ ಸೂಡಾ ತಿಳಿಸಿದೆ.
ಈ ಕುರಿತಂತೆ ಸೂಡಾ ಅಧ್ಯಕ್ಷರಾದ ಎಚ್.ಎಸ್. ಸುಂದರೇಶ್ ಮತ್ತು ಆಯುಕ್ತರಾದ ವಿಶ್ವನಾಥ ಮುದಜ್ಜಿ ಅವರುಗಳು ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
Also Read>> ಬೆಂಗಳೂರು | ಹಸುಗಳ ಕೆಚ್ಚಲು ಕೊಯ್ದ ಪ್ರಕರಣ | ಆರೋಪಿ ಶೇಕ್ ನಸ್ರು ಅಂದರ್ | ಇವನೇ ನೋಡಿ ಆ ಕ್ರೂರಿ
ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದಿಂದ #SUDA ಊರಗಡೂರು ವಸತಿ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಕುರಿತು ಪ್ರಕಟಣೆ ಹೊರಡಿಸಿ 2024 ರ ಡಿ.05 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು.
ಅರ್ಜಿ ಸಲ್ಲಿಸುವ ಅವಧಿ ಈಗಾಗಲೇ ಮುಗಿದಿರುತ್ತದೆ. ನಿವೇಶನ ಹಂಚಿಕೆ ಕೋರಿ ಸಲ್ಲಿಸಿರುವ ಅರ್ಜಿಗಳನ್ನು ಪ್ರಾಧಿಕಾರದಿಂದ ಕರ್ನಾಟಕ ನಗರಾಭಿವೃದ್ದಿ ಪ್ರಾಧಿಕಾರಗಳ ನಿವೇಶನ ಹಂಚಿಕೆ ನಿಯಮದಂತೆ ಪರಿಶೀಲಿಸಲು ಕ್ರಮ ವಹಿಸಲಾಗುವುದು.
Also Read>> ಶಿವಮೊಗ್ಗ | ಜಿಲ್ಲಾ ಲಿಪಿಕ ನೌಕರರ ಸಂಘಕ್ಕೆ ಅಧ್ಯಕ್ಷರಾಗಿ ಟಿ. ಪ್ರಕಾಶ್ ಅವಿರೋಧ ಆಯ್ಕೆ
ಆದರೆ ಕೆಲವು ವ್ಯಕ್ತಿಗಳು ಸಾರ್ವಜನಿಕರಿಗೆ ನಿವೇಶನಗಳನ್ನು ಮಂಜೂರಾತಿ ಮಾಡಿಕೊಡುವುದಾಗಿ ಹಣದ ಬೇಡಿಕೆ ಇಡುತ್ತಿರುವುದು ಪ್ರಾಧಿಕಾರದ ಗಮನಕ್ಕೆ ಬಂದಿರುತ್ತದೆ. ಇಂತಹ ಹಣ/ಯಾವುದೇ ಆಮಿಷಗಳಿಗೆ ಒಳಗಾಗದೇ ಇರಲು ಪ್ರಾಧಿಕಾರ ತಿಳಿಸಿದೆ. ಒಂದು ವೇಳೆ ಇಂತಹ ಯಾವುದೇ ಆಮಿಷಗಳಿಗೆ ತಾವು ಒಳಗಾದಲ್ಲಿ ಈ ಪ್ರಾಧಿಕಾರವು ಜವಾಬ್ದಾರಿಯಾಗಿರುವುದಿಲ್ಲವೆಂದು ಈ ಮೂಲಕ ತಿಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post