No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Tuesday, June 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನಿಮ್ಮ ಹಾರೈಕೆ ಪ್ರೀತಿಯೇ ನನಗೆ ಶ್ರೀರಕ್ಷೆ | ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ವಿಕಲಚೇತನ ಉದ್ಯೋಗಿಗಳೊಂದಿಗೆ ಹೆಚ್‌ಡಿಕೆ ಸಂಕ್ರಾಂತಿ ಆಚರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 15, 2025
in ಬೆಂಗಳೂರು ನಗರ
0
ನಿಮ್ಮ ಹಾರೈಕೆ ಪ್ರೀತಿಯೇ ನನಗೆ ಶ್ರೀರಕ್ಷೆ | ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೂರಾರು ವಿಕಲಚೇತನ ಉದ್ಯೋಗಿಗಳು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ #H D Kumaraswamy ಅವರೊಂದಿಗೆ 6ನೇ ವರ್ಷದ ಸಂಕ್ರಾಂತಿ ಹಬ್ಬ ಆಚರಿಸಿದರು.

2019ರಿಂದಲೂ 600ಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳು ಕುಮಾರಸ್ವಾಮಿ ಅವರೊಂದಿಗೆ ಪ್ರತೀ ವರ್ಷ ತಪ್ಪದೇ ಸಂಕ್ರಾಂತಿ ಹಬ್ಬ #Sankranthi ಆಚರಿಸಿಕೊಂಡು ಬರುತ್ತಿದ್ದಾರೆ.
ತಮ್ಮ ಕುಟುಂಬ ಸಮೇತವಾಗಿ ಕುಮಾರಸ್ವಾಮಿ ಅವರೊಂದಿಗೆ ಸಂಕ್ರಾಂತಿ ಹಬ್ಬ ಆಚರಿಸಿಕೊಳ್ಳಲು ಈ ಸಿಬ್ಬಂದಿ, ರಾಜ್ಯದ ಎಲ್ಲಾ ಭಾಗಗಳಿಂದ ಬಂದಿದ್ದರು ಹಾಗೂ ಹಬ್ಬದ ದಿನ ಕುಮಾರಸ್ವಾಮಿ ಅವರು ಎಲ್ಲಿರುತ್ತಾರೋ ಅಲ್ಲಿಗೆ ಬಂದು ತಮ್ಮ ಮಕ್ಕಳ ಜತೆ ಸೇರಿಕೊಂಡು ಹಬ್ಬ ಆಚರಿಸುತ್ತಾರೆ. ಕಳೆದ ಆರು ವರ್ಷಗಳಿಂದ ಅವರು ಇದನ್ನು ನಿರಂತರವಾಗಿ ಮುಂದುವರಿಸಿಕೊಂಡು ಬಂದಿದ್ದಾರೆ. ಈ ಹಬ್ಬಕ್ಕೆ ಉದ್ಯೋಗಿಗಳೆಲ್ಲ ಮಂಗಳವಾರ ಸಚಿವರ ಬೆಂಗಳೂರಿನ ಜೆ.ಪಿ.ನಗರದ ನಿವಾಸಕ್ಕೆ ಬಂದು ಹಬ್ಬ ಆಚರಿಸಿದರು.

ನಿಮ್ಮ ಹಾರೈಕೆ ಪ್ರೀತಿಯೇ ನನಗೆ ಶ್ರೀರಕ್ಷೆ ಎಂದು ಭಾವುಕರಾದ ಸಚಿವರು:

ಈ ಸಂದರ್ಭದಲ್ಲಿ ಎಲ್ಲರಿಗೂ ಶುಭ ಕೋರಿದ ಸಚಿವ ಕುಮಾರಸ್ವಾಮಿ ಅವರು; ನಿಮ್ಮ ಪ್ರೀತಿ ವಿಶ್ವಾಸಕ್ಕೆ ನಾನು ಋಣಿ ಆಗಿದ್ದೇನೆ. ನಿಮ್ಮ ಹೃದಯದಲಿ ಸ್ಥಾನ ಕೊಟ್ಟಿದ್ದಕ್ಕೆ ನಾನು ಆಭಾರಿ. ನಿಮ್ಮ ಹಾರೈಕೆ ಪ್ರೀತಿಯೇ ನನಗೆ ಶ್ರೀರಕ್ಷೆ ಎಂದು ಭಾವುಕರಾದರು.

Also read: ದುರಂತ | ಹೃದಯಾಘಾತದಿಂದ 17 ವರ್ಷದ ವಿದ್ಯಾರ್ಥಿ ಸಾವು

ಅವಕಾಶ ಸಿಕ್ಕಿದಾಗ ನನ್ನ ಕೈಲಾದಷ್ಟು ಸಹಾಯ ಮಾಡಿದ್ದೇನೆ. ವಿಕಲಚೇತನರಿಗೆ ಸಾಧ್ಯವಾದಷ್ಟು ನೆರವು ಕೊಟ್ಟಿದ್ದೇನೆ. ಮುಂದೆಯೂ ದೈಹಿಕವಾಗಿ ಶಕ್ತಿ ಇಲ್ಲದ ಯಾರೇ ಇದ್ದರೂ ಅವರಿಗಾಗಿ ನನ್ನ ಹೃದಯ ಮಿಡಿಯುತ್ತದೆ. ಪ್ರಾಮಾಣಿಕವಾಗಿ ಅಂತಹವರ ಒಳಿತಿಗಾಗಿ ಪ್ರಯತ್ನ ಮಾಡುತ್ತೇನೆ ಎಂದರು ಅವರು.

ವಿಕಲಚೇತನರು, ದೈಹಿಕವಾಗಿ ಆಶಕ್ತರ ಬಗ್ಗೆ ನಮಗೆ ಅನುಕಂಪಕ್ಕಿಂತ ಮಿಗಿಲಾಗಿ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಕೆಲಸ ಆಗಬೇಕಿದೆ. ನನಗೆ ಅವಕಾಶ ಸಿಕ್ಕಿದಾಗ ನಾನು ಇಂಥವರ ಪರವಾಗಿ ಕೆಲಸ ಮಾಡುತ್ತೇನೆ. ನನ್ನ ಪಾಲಿಗೆ ಇವರು ದೇವರ ಸಮಾನರು ಎಂದು ಸಚಿವರು ಹೇಳಿದರು.

ಸಮಾಜದಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ವಿಕಲಚೇತನರು ಕಷ್ಟದಲ್ಲಿ ಇದ್ದಾರೆ. ದೊಡ್ಡ ಪ್ರಮಾಣದಲ್ಲಿ ಅವರಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕಿದೆ. ಮುಂದಿನ ಜನರು, ದೇವರು ಅವಕಾಶ ಕೊಡಬಹುದು ಎಂದು ನಂಬಿದ್ದೇನೆ.
ನಿಮ್ಮ ಮಕ್ಕಳಿಗೆ ಶುಭವಾಗಲಿ, ಅವರನ್ನು ಚೆನ್ನಾಗಿ ಓದಿಸಿ ಎಂದು ಕಿವಿಮಾತು ಹೇಳಿದರು.
ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಿ:

ವಿಕಲಚೇತನರು, ದೈಹಿಕವಾಗಿ ಶಕ್ತಿ ಇಲ್ಲದವರು ಧೃತಿಗೆಡಬೇಡಿ. ಅಂಗವೈಕಲ್ಯ ಬಂತು ಎಂದು ಹೆದರಬೇಡಿ.. ದೇವರಿದ್ದಾನೆ, ನಿಮಗೂ ಅವಕಾಶ ಬಂದೆ ಬರುತ್ತದೆ, ನಾನು ಸದಾ ನಿಮ್ಮೊಂದಿಗೆ ಇದ್ದೇನೆ. ಇವತ್ತು ಭಾರತ ಯಾರೂ ಊಹೆ ಮಾಡದ ರೀತಿಯಲ್ಲಿ ಪ್ರಗತಿ ಹೊಂದುತ್ತಿದೆ. ಅವಕಾಶಗಳು ಹೆಚ್ಚುತ್ತಿವೆ, ಯಾರು ದೃತಿಗೆಡಬಾರದು. ಕಷ್ಟಗಳು ಬಂದರೆ ಧೈರ್ಯವಾಗಿ ಎದುರಿಸಿ, ಯಾವುದೇ ಸಮಸ್ಯೆ ಬಂದರೂ ಕೆಚ್ಚೆದೆಯಿಂದ ಎದುರಿಸಿ. ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಿ. ಕೌಟುಂಬಿಕವಾಗಿ ಒಳ್ಳೆಯ ಬಾಂಧವ್ಯ ರೂಢಿಸಿಕೊಳ್ಳಿ ಎಂದು ಸಚಿವರು ಹೇಳಿದರು.

ಸಮಾಜದಲ್ಲಿ ಕೆಟ್ಟ ವಾತಾವರಣ ಸೃಷ್ಟಿ ಆಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ ಸಚಿವರು; ಬೆಂಗಳೂರಿನಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆ ನಡೆದಿದೆ. ಆ ದೃಶ್ಯವನ್ನು ನಾನು ವಿದ್ಯುನ್ಮಾನ ಮಾಧ್ಯಮಗಳಲ್ಲಿ ನೋಡಿ ತೀವ್ರ ಆಘಾತಕ್ಕೆ ಒಳಗಾದೆ. ಮನಸ್ಸಿಗೆ ಬಹಳ ನೋವಾಯಿತು. ಇಂಥ ಪರಿಸಿತಿಯಿಂದ ಸಮಾಜವನ್ನು ಹೊರಕ್ಕೆ ತರಬೇಕಿದೆ.

ವಿಕಲಚೇತನರಿಗೆ ಹೆಚ್ಚು ಉದ್ಯೋಗಾವಕಾಶ ನೀಡಲು ಮನವಿ:

ಈ ಸಂದರ್ಭದಲ್ಲಿ ಸಚಿವ ಕುಮಾರಸ್ವಾಮಿ ಅವರಿಗೆ ಅಹವಾಲು ಸಲ್ಲಿಸಿದ ವಿಕಲಚೇತನ ಉದ್ಯೋಗಿಗಳು; ಇವತ್ತು ನಿಮಗೆ ಶುಭ ಕೋರಲು ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಬಂದಿದ್ದೇವೆ. ಮುಂದಿನ ವರ್ಷ ದೇಶದ ಎಲ್ಲೆಡೆಯಿಂದ ಬಂದು ನಿಮಗೆ ಶುಭ ಕೋರುವಂತಾಗಬೇಕು. ತಾವು ಹೆಚ್ಚು ಪ್ರಮಾಣದಲ್ಲಿ ದೇಶಾದ್ಯಂತ ಇರುವ ಕೇಂದ್ರ ಸರಕಾರಿ ಸ್ವಾಮ್ಯದ ಕೈಗಾರಿಕೆಗಳಲ್ಲಿ ವಿಕಲಚೇತನರಿಗೆ ಉದ್ಯೋಗ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ಆರೋಗ್ಯ ವಿಮೆ ಮರು ಜಾರಿ ಮಾಡಿಸಿ:

ಪ್ರಧಾನಿ ನರೇಂದ್ರ ಮೋದಿ ಅವರು 2015ರಲ್ಲಿ ವಿಕಲಚೇತನರಿಗಾಗಿಯೇ ಸ್ವಾವಲಂಬನ ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೆ ತಂದಿದ್ದರು. ಆ ಯೋಜನೆ ಈಗ ನಿಂತು ಹೋಗಿದೆ. ₹300 ಕೊಟ್ಟರೆ ನಮಗೆ ಅತ್ಯುತ್ತಮವಾದ ಆರೋಗ್ಯ ಸೌಲಭ್ಯ ದೊರೆಯುತ್ತಿತ್ತು. ಈ ಯೋಜನೆಯನ್ನು ಮತ್ತೆ ಆರಂಭ ಮಾಡಿಸಬೇಕು ಎಂದು ಅವರು ಮನವಿ ಮಾಡಿದರು.

ಈ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವರು; ವಿಮಾ ಯೋಜನೆ ಮರು ಜಾರಿ ಮಾಡುವುದಕ್ಕೆ ಸಂಬಂಧಪಟ್ಟ ಸಚಿವರ ಗಮನ ಸೆಳೆಯುತ್ತೇನೆ ಎಂದು ಅವರು ಭರವಸೆ ನೀಡಿದರು.

ಕುಮಾರಸ್ವಾಮಿ ಅವರ ಜತೆ ಸಂಕ್ರಾಂತಿ; ಏನಿದರ ಮಹತ್ವ?

ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ವಿಕಲಚೇತನ ಉದ್ಯೋಗಿಗಳು,ಕುಮಾರಸ್ವಾಮಿ ಅವರೊಂದಿಗೆ ಸಂಕ್ರಾಂತಿ ಆಚರಿಸುವುದಕ್ಕೆ ಅರ್ಥಪೂರ್ಣ ಹಿನ್ನೆಲೆ ಇದೆ.

2006ರಲ್ಲಿ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಜನತಾದರ್ಶನ ಚಾಲ್ತಿಯಲ್ಲಿ ಇತ್ತು. ಈ ಸಂದರ್ಭದಲ್ಲಿ ಅಪಾರ ಪ್ರಮಾಣದಲ್ಲಿ ಮುಖ್ಯಮಂತ್ರಿಗಳಿಗೆ ಉದ್ಯೋಗಕ್ಕಾಗಿ ಮನವಿ ಸಲ್ಲಿಸುತ್ತಿದ್ದರು. ವಿಕಲಚೇತನರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಹಾಗೂ ಆರ್ಥಿಕವಾಗಿ ಅವರು ಸಬಲರಾಗುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಟ್ಟ ಕುಮಾರಸ್ವಾಮಿ ಅವರು; ಎಸ್ಎಸ್ಎಲ್ಸಿ ಪಾಸಾಗಿದ್ದ 300, ಪದವಿ ಉತ್ತೀರ್ಣರಾಗಿದ್ದ 300 ವಿಕಲಚೇತನ ಅಭ್ಯರ್ಥಿಗಳಿಗೆ ಇಂಧನ ಇಲಾಖೆಯಲ್ಲಿ ಉದ್ಯೋಗವಕಾಶ ಕಲ್ಪಿಸಿ ನೇಮಕಾತಿ ಆದೇಶ ನೀಡಿದ್ದರು.

ಏಕಕಾಲಕ್ಕೆ 600 ವಿಕಲಚೇತನರು ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡರು, ಆ ನಂತರ ಬಂದ ಸರಕಾರಗಳು ಅವರ ಸೇವೆಯನ್ನು ಕಾಯಂ ಮಾಡಲಿಲ್ಲ. ಅನೇಕ ಸಲ ಅವರು ಮನವಿ ಸಲ್ಲಿಸಿದರೂ ಅವರು ಕಾಯಂ ಆಗಲಿಲ್ಲ. 2018ರಲ್ಲಿ ಮತ್ತೆ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾದರು. ಅವರು ಮರಳಿ ಅಧಿಕಾರಕ್ಕೆ ಬಂದ ನಂತರ 2019ರ ಸಂಕ್ರಾಂತಿ ಹಬ್ಬದ ದಿನವೇ 600 ವಿಕಲಚೇತನರ ಸೇವೆಯನ್ನು ಕಾಯಂ ಮಾಡಿ ಆದೇಶ ಮಾಡಿದರು. ಅಲ್ಲಿಗೆ ಅವರ ಸುಮಾರು ಹತ್ತು ವರ್ಷಗಳ ವನವಾಸ ಅಂತ್ಯವಾಯಿತು.

ಈ ಸಂದರ್ಭದಲ್ಲಿ ಕೇಂದ್ರ ಸಚಿವರಿಗೆ ಕೃತಜ್ಞತೆ ಸಲ್ಲಿಸಿದ ಉದ್ಯೋಗಿಗಳು; ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವಾಗ ನಮ್ಮ ವೇತನ ₹3000 ಇತ್ತು. ನಮ್ಮ ಸೇವೆ ಕಾಯಂ ಆದ ಮೇಲೆ ₹80,000ರಿಂದ ₹90,000 ಮೀರಿ ವೇತನ ಪಡೆಯುತ್ತಿದ್ದೇವೆ. ನಾವು ಸ್ವಂತ ಮನೆ ಕಟ್ಟಿಕೊಂಡಿದ್ದೇವೆ, ಸ್ವಂತ ಕಾರು ಖರೀದಿ ಮಾಡಿದೇವೆ. ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ಮಾಡಿಸುತ್ತಿದ್ದೇವೆ. ಇದೆಲ್ಲವೂ ಸಾಧ್ಯವಾಗಿದ್ದು ಕುಮಾರಸ್ವಾಮಿ ಅವರಿಂದ. ಹೀಗಾಗಿ ನಾವು ಸಂಕ್ರಾಂತಿ ಹಬ್ಬವನ್ನು ಪ್ರತಿ ವರ್ಷ ಅವರ ಜತೆಯಲ್ಲಿ ಆಚರಿಸುತ್ತೇವೆ ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: BangaloreH D KumaraswamyKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaSankranthiಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಬೆಂಗಳೂರುಸಂಕ್ರಾಂತಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದುರಂತ | ಹೃದಯಾಘಾತದಿಂದ 17 ವರ್ಷದ ವಿದ್ಯಾರ್ಥಿ ಸಾವು

Next Post

ಪತ್ರಕರ್ತರ ಸಹಕಾರ ಸಂಘದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪತ್ರಕರ್ತರ ಸಹಕಾರ ಸಂಘದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಪತ್ರಕರ್ತರ ಸಹಕಾರ ಸಂಘದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Mysore - Shivamogga - Talguppa Train

ಮೈಸೂರು-ಶಿವಮೊಗ್ಗ, ತಾಳಗುಪ್ಪದ 3 ರೈಲುಗಳು ಈ 2 ದಿನ ರದ್ದು | ಇಲ್ಲಿದೆ ಮಾಹಿತಿ

June 15, 2026
Transgender woman

ಬದುಕು ಮತ್ತು ಬೇನೆ | ಸಮಾಜದ ಕಣ್ಣೀರ ಕನ್ನಡಿಯಲಿ ‘ಮಂಗಳಮುಖಿ’ಯರ ಆರ್ತನಾದ

June 15, 2026
Two Brunt in Mysore Pub Tragedy

ಮೈಸೂರಿನ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ | ಇಬ್ಬರು ಸಜೀವ ದಹನ, ಏಳು ಮಂದಿಗೆ ಗಂಭೀರ ಗಾಯ

June 15, 2026
Chamarajanagara: Nalvadi Krishnaraja Wodeyar

ನಾಲ್ವಡಿ ಕೃಷ್ಣರಾಜ ಒಡೆಯರ್ ಆಡಳಿತ ಪ್ರತಿಯೊಬ್ಬರಿಗೂ ಆದರ್ಶ: ಸುರೇಶ್ ಋಗ್ವೇದಿ

June 15, 2026
‘Smart Surface’ Technology Introduced at IIS

ಏಷ್ಯಾದಲ್ಲೇ ಮೊದಲು | IISನಲ್ಲಿ ‘ಸ್ಮಾರ್ಟ್ ಸರ್ಫೇಸ್’ ತಂತ್ರಜ್ಞಾನ | ಭಾರತೀಯ ಕ್ರೀಡಾ ತರಬೇತಿಯಲ್ಲಿ ಡಿಜಿಟಲ್ ಕ್ರಾಂತಿ

June 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL