ಕಲ್ಪ ಮೀಡಿಯಾ ಹೌಸ್ | ಲಖ್ನೋ |
ಜೈನ ನಿರ್ವಾಣ ಲಡ್ಡು ಉತ್ಸವದ ವೇದಿಕೆ ಕುಸಿದು #Stage Collapse in Lucknow 7 ಮಂದಿ ಸಾವನ್ನಪ್ಪಿ, 40ಕ್ಕೂ ಅಧಿಕ ಜನರು ತೀವ್ರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಾಗ್ಬತ್’ನಲ್ಲಿ ನಡೆದಿದೆ.
ಜೈನ ಸಮುದಾಯದವರ ಪವಿತ್ರ ಧಾರ್ಮಿಕ ಕಾರ್ಯಕ್ರಮ ಆದ್ದರಿಂದ ಮರದ ತುಂಡುಗಳನ್ನು ಬಳಸಿ ವೇದಿಕೆ ಸಜ್ಜುಗೊಳಿಸಿ, ಅದರ ಮೇಲೆ 4-5 ಅಡಿ ಎತ್ತರದ ಆದಿನಾಥನ ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು. ಈ ವೇದಿಕೆ ಕುಸಿದು ಬಿದ್ದಿದೆ.
40 ಗಾಯಾಳುಗಳ ಪೈಕಿ 20 ಮಂದಿಯನ್ನು ಚಿಕಿತ್ಸೆ ಬಳಿಕ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಇನ್ನೂ 20 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜೈನ ಧರ್ಮದ ಮೊದಲ ತೀರ್ಥಂಕರ ಭಗವಾನ್ ಆದಿನಾಥರ ಸ್ಮರಣಾರ್ಥ ನಿರ್ವಾಣ ಲಡ್ಡು ಪರ್ವ್ ಕಾರ್ಯಕ್ರಮದಲ್ಲಿ ಜೈನ ಸನ್ಯಾಸಿಗಳ ಸಮ್ಮುಖದಲ್ಲಿ ಭಗವಾನ್ ಆದಿನಾಥನಿಗೆ ಲಡ್ಡೂಗಳನ್ನು ಅರ್ಪಿಸುವ ಸಮಾರಂಭದಲ್ಲಿ ಇದಾಗಿತ್ತು.
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ರಕ್ಷಣಾ ಸಿಬ್ಬಂದಿ ಧಾವಿಸಿದ್ದು, ಎಲ್ಲರನ್ನೂ ರಕ್ಷಣೆ ಮಾಡಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು, ಘಟನೆಯಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೂಚನೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post