ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ವಿಐಎಸ್‌ಎಲ್ #VISL ಸಿಲ್ವರ್ ಜ್ಯೂಬಿಲಿ ಸ್ಟೇಡಿಯಂನಲ್ಲಿ 76ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಪಾಲಕ ನಿರ್ದೇಶಕ ಬಿ.ಎಲ್. ಚಂದ್ವಾನಿ ಧ್ವಜಾರೋಹಣ ನೆರವೇರಿಸಿದರು.
ವಿಐಎಸ್‌ಎಲ್ ಸೆಕ್ಯುರಿಟಿ, ಭದ್ರಾವತಿಯ ಪ್ರೌಢ ಮತ್ತು ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಪಥಸಂಚಲನ ನಡೆಸಿದರು. ಲಿಟ್ಲಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ಮತ್ತು ಸೈಂಟ್ ಚಾರ್ಲ್ಸ್ ಆಂಗ್ಲ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಷ್ಟ್ರೀಯ ಐಕ್ಯತೆ ಮತ್ತು ದೇಶಪ್ರೇಮ ವಿಷಯಗಳ ಕುರಿತು ವರ್ಣರಂಜಿತ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿ, ಸಮೂಹಗಾನ ಹಾಡಿದರು.
ವಿಐಎಸ್‌ಎಲ್ ಉದ್ಯೋಗಿಗಳು ಕಳೆದ ವರ್ಷದಲ್ಲಿ ಮಾಡಿದ ವಿಶೇಷ ಸಾಧನೆಗಾಗಿ ವಿಶೇಷ ಪ್ರಶಸ್ತಿ, ಜವಹಾರ್ ನೆಹರು ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಗಳನ್ನು ವಿತರಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮ ತಂಡಗಳಿಗೆ ಹಾಗೂ ಮಿಕ್ಕ ಎಲ್ಲಾ ಪಥಸಂಚಲನ ತಂಡಗಳಿಗೆ ಈ ಸಂದರ್ಭದಲ್ಲಿ ಆಕರ್ಷಕ ಟ್ರೋಫಿಗಳನ್ನು ನೀಡಲಾಯಿತು.
Also read: ಸರ್ಕಾರ ಶರಾವತಿ ಸಂತ್ರಸ್ತರ ಕೈ ಹಿಡಿಯಲಿದೆ | ಸಚಿವ ಮಧು ಬಂಗಾರಪ್ಪ ಭರವಸೆ
ನಿತಿನ್ ಜೋಸ್, ಸಹಾಯಕ ಮಹಾಪ್ರಬಂಧಕರು (ಸಿ ಅಂಡ್ ಐಟಿ) ರವರು ಕೇರಳದಲ್ಲಿ ನಡೆದ 7ನೇ ಕೇರಳ ರಾಜ್ಯ ಪ್ಯಾರಾ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಸಿಂಗಲ್ಸ್ ವಿಭಾಗದಲ್ಲಿ ಕಂಚಿನ ಪದಕ ಮತ್ತು ಡಬಲ್ಸ್ ವಿಭಾಗದಲ್ಲಿ ಬೆಳ್ಳಿ ಪದಕ (SU-5) ವಿಭಾಗದಲ್ಲಿ ಪಡೆದಿದ್ದು ಹಾಗೂ ರಾಷ್ಟಮಟ್ಟದಲ್ಲಿ ಕೇರಳವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಕ್ಕಾಗಿ ಅವರನ್ನು ಅಭಿನಂದಿಸಲಾಯಿತು.
ವಿಐಎಸ್‌ಎಲ್ ಕಾರ್ಮಿಕರ ಸಂಘ ಮತ್ತು ವಿಐಎಸ್‌ಎಲ್ ಅಧಿಕಾರಿಗಳ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಇಸ್ಪಾತ್ ಮಹಿಳಾ ಸಮಾಜದ ಸದಸ್ಯರು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು, ಶಾಲಾ ಮಕ್ಕಳು, ಪೋಷಕರು, ಅಧ್ಯಾಪಕ ವೃಂದದವರು, ಭದ್ರಾವತಿಯ ನಾಗರೀಕರು ಕಾಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ 500ಪಪ್ಪಾಯ, ನುಗ್ಗೆ, ಹಲಸು ಮತ್ತು ಅಡಿಕೆ ಸಸಿಗಳನ್ನು ವಿಐಎಸ್‌ಎಲ್‌ನ ಉದ್ಯೋಗಿಗಳು, ಗುತ್ತಿಗೆ ಕಾರ್ಮಿಕರು ಮತ್ತು ಸಾರ್ವಜನಿಕರಿಗೆ ಉಚಿತವಾಗಿ ವಿತರಿಸಲಾಯಿತು.
ವಿಐಎಸ್‌ಎಲ್‌ನ ಸಿಲ್ವರ್ ಜ್ಯುಬಿಲಿ ಕ್ರೀಡಾಂಗಣದಲ್ಲಿರುವ ಪ್ಲಾಟಿನಮ್ ಜ್ಯುಬಿಲಿ ವೇದಿಕೆಯ ಬಳಿ ಇರುವ ವಿಐಎಸ್‌ಎಲ್ ವಸ್ತುಪ್ರದರ್ಶನ ಮಳಿಗೆಯನ್ನು ಬಿ.ಎಲ್. ಚಂದ್ವಾನಿ, ಕಾರ್ಯಪಾಲಕ ನಿರ್ದೇಶಕರು ಉದ್ಘಾಟಿಸಿದರು. ಅವರೊಂದಿಗೆ ಕೆ.ಎಸ್.ಸುರೇಶ್, ಮುಖ್ಯ ಮಹಾಪ್ರಬಂಧಕರು (ಸ್ಥಾವರ) ಹಾಗೂ ಅಧ್ಯಕ್ಷರು ಪ್ರಧಾನ ವ್ಯವಸ್ಥಾಪಕ ಸಮಿತಿ, ಮೋಹನ್ ರಾಜ್ ಶೆಟ್ಟಿ, ಮಹಾಪ್ರಬಂಧಕರು (ನಗರಾಡಳಿತ), ಶೋಭ ಶಿವಶಂಕರನ್, ಮಹಾಪ್ರಬಂಧಕರು (ಹಣಕಾಸು ಮತ್ತು ಲೆಕ್ಖ), ಎಲ್. ಪ್ರವೀಣ್ ಕುಮಾರ್, ಮಹಾಪ್ರಬಂಧಕರು (ಹೆಚ್.ಆರ್ ಮತ್ತು ಸಾರ್ವಜನಿಕ ಸಂಪರ್ಕ), ಜೆ. ಜಗದೀಶ, ಅಧ್ಯಕ್ಷರು, ವಿಐಎಸ್ ಎಲ್ ಕಾರ್ಮಿಕರ ಸಂಘ ಮತ್ತು ಪಾರ್ಥಸಾರಥಿ ಮಿಶ್ರಾ, ಅಧ್ಯಕ್ಷರು, ವಿಐಎಸ್‌ಎಲ್ ಅಧಿಕಾರಿಗಳ ಸಂಘ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post