ಕಲ್ಪ ಮೀಡಿಯಾ ಹೌಸ್ | ಪ್ರಯಾಗರಾಜ್ |
ಉತ್ತರ ಪ್ರದೇಶದ ಪ್ರಯಾಗರಾಜ್’ನಲ್ಲಿ #Prayagraj ಇಂದು ಸಂಭವಿಸಿದ ಕಾಲ್ತುಳಿತದಲ್ಲಿ #Stampede ಸಾವಿಗೀಡಾದವರ ಸಂಖ್ಯೆ 30ಕ್ಕೆ ಏರಿಕೆಯಾಗಿದ್ದು, ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಲಾಗಿದೆ.
ಇಂದು ಪವಿತ್ರ ಮೌನಿ ಅಮಾವಾಸ್ಯೆಯಾದ ಹಿನ್ನೆಲೆಯಲ್ಲಿ ಕೋಟ್ಯಂತರ ಭಕ್ತರು ಪವಿತ್ರ ಸಂಗಮ ಸ್ನಾನಕ್ಕೆ ಆಗಮಿಸಿದ್ದರು. ಈ ವೇಳೆ ಜನರ ಸಂಖ್ಯೆ ಏಕಾಏಕಿ ಏರಿಕೆಯಾಗಿದ್ದು, ಕಾಲ್ತುಳಿತ ಸಂಭವಿಸಿದ್ದು, ಮೃತರಾದವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.
Also Read>> ಹೊಸನಗರ | ಅತಿಯಾದ ರಕ್ತಸ್ರಾವದಿಂದ ಮಹಿಳೆ ಸಾವು
25 ಶವಗಳನ್ನು ಗುರುತಿಸಲಾಗಿದ್ದು, ಕಾಲ್ತುಳಿತದಿಂದ 60 ಮಂದಿ ಗಾಯಗೊಂಡಿದ್ದಾರೆ. ಹಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿ ವೈಭವ್ ಕೃಷ್ಣ ಮಾಹಿತಿ ನೀಡಿದ್ದಾರೆ.

Also Read>> ಸುಬ್ಬಯ್ಯ ವೈದ್ಯರ ಮ್ಯಾಜಿಕ್ | ಪುಡಿಪುಡಿಯಾಗಿದ್ದ ಮೂಳೆ, ಜಜ್ಜಿ ಹೋಗಿದ್ದ ಕೈ ಸರ್ಜರಿಯಿಂದ ನಾರ್ಮಲ್
ಪರಿಹಾರ ಘೋಷಣೆ
ಘಟನೆಯಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ತಲಾ 25 ಲಕ್ಷ ರೂಪಾಯಿ ಪರಿಹಾರ ಧನವನ್ನು ಘೋಷಣೆ ಮಾಡಲಾಗಿದೆ.
ನ್ಯಾಯಾಂಗ ತನಿಖೆಗೆ ಆದೇಶ
ದುರಂತದ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ. ನ್ಯಾಯಮೂರ್ತಿ ಹರ್ಷ ಕುಮಾರ್ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಘಟನೆಯ ತನಿಖೆಯನ್ನು ಮೂವರು ಸದಸ್ಯರ ಸಮಿತಿ ನಡೆಸಲಿದೆ ಎಂದು ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post