Wednesday, August 13, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಮೋದಿ ದೂರದೃಷ್ಟಿಯಿಂದ ವೈಜಾಗ್ ಸ್ಟೀಲ್ ಪುನಶ್ಚೇತನ | ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

January 30, 2025
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ತೀವ್ರ ಆರ್ಥಿಕ ನಷ್ಟಕ್ಕೆ ಸಿಲುಕಿ ಖಾಸಗೀಕರಣದ ಹೊಸ್ತಿಲಲ್ಲಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RNIL) ಅಥವಾ ವೈಜಾಗ್ ಸ್ಟೀಲ್ ಕಂಪನಿಯನ್ನು ₹11,440 ಕೋಟಿ ವೆಚ್ಚದಲ್ಲಿ ಪುನಶ್ಚೇತನಗೊಳಿಸಲಾಗುವುದು ಎಂದು ಕೇಂದ್ರದ ಉಕ್ಕು -ಬೃಹತ್ ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ #H D Kumaraswamy ಅವರು ಘೋಷಿಸಿದರು.

ಇದು ಐತಿಹಾಸಿಕ ನಿರ್ಧಾರ ಎಂದು ಬಣ್ಣಿಸಿರುವ ಕುಮಾರಸ್ವಾಮಿ ಅವರು; ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಇದು ಸಾಧ್ಯವಾಗಿದೆ. ದೇಶೀಯ ಉಕ್ಕು ಕ್ಷೇತ್ರಕ್ಕೆ ಶಕ್ತಿ ತುಂಬುವ ದಿಟ್ಟ ಹೆಜ್ಜೆ ಇದಾಗಿದೆ ಎಂದರು.
ನವದೆಹಲಿ ಉಕ್ಕು ಸಚಿವಾಲಯದಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಟಿಯಲ್ಲಿ ಕುಮಾರಸ್ವಾಮಿ ಅವರು, ತಮ್ಮ ಇಲಾಖೆಯ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ ಹಾಗೂ ಕೇಂದ್ರ ವಿಮಾನಯಾನ ಖಾತೆ ಸಚಿವ ರಾಮಮೋಹನ್ ನಾಯ್ಡು ಅವರ ಜತೆಗೂಡಿ ವೈಜಾಗ್ ಸ್ಟೀಲ್ ಪ್ಯಾಕೇಜ್ ಅನ್ನು ಘೋಷಣೆ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಗುರುವಾರ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (CCEA) ಸಭೆಯಲ್ಲಿ ವೈಜಾಗ್ ಸ್ಟೀಲ್ #Vizag Steal ಪುನಚ್ಚೆತನ ಪ್ಯಾಕೇಜ್ ಗೆ ಅನುಮೋದನೆ ನೀಡಲಾಗಿದೆ ಎಂದು ಉಕ್ಕು ಸಚಿವರು ಹೇಳಿದರು.

ಪ್ರಧಾನಿ ಮೋದಿ ಅವರು ಸಂಕ್ರಾಂತಿ ಹೊತ್ತಿಗೆ ಆಂಧ್ರ ಪ್ರದೇಶ ಜನತೆಗೆ ಶುಭ ಸುದ್ದಿ ಕೊಡುತ್ತೇವೆ ಎಂದು ಹೇಳಿದ್ದರು. ಅದರಂತೆ ವಿಶಾಖಪಟ್ಟಣ ಸ್ಟೀಲ್ ಕಾರ್ಖಾನೆಯ ಪುನಚ್ಚೆತನ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಪ್ರಧಾನಿಗಳಿಗೆ ಹಾಗೂ ನಮ್ಮ ಪ್ರಯತ್ನಗಳಿಗೆ ಸಂಪೂರ್ಣ ಸಹಕಾರ ನೀಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ವಿಶೇಷ ಧನ್ಯವಾದ ಸಲ್ಲಿಸುವೆ ಎಂದು ಸಚಿವರು ಹೇಳಿದರು.
ವಾರ್ಷಿಕ 7.3 ದಶಲಕ್ಷ ಟನ್ ಉಕ್ಕು ಉತ್ಪಾದನೆ:

ವಿಶಾಖಪಟ್ಟಣ (ಆಂಧ್ರ ಪ್ರದೇಶ): ತೀವ್ರ ಆರ್ಥಿಕ ನಷ್ಟಕ್ಕೆ ಸಿಲುಕಿದ್ದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RNIL) ಅಥವಾ ವೈಜಾಗ್ ಸ್ಟೀಲ್ ಕಂಪನಿಗೆ ಕೇಂದ್ರ ಸರಕಾರ ₹11,440 ಕೋಟಿ ಮೊತ್ತದ ಬೃಹತ್ ಪುನಚ್ಚೇತನ ಪ್ಯಾಕೇಜ್ ನೀಡಿದ್ದು, ಕಾರ್ಖಾನೆಯನ್ನು ಬಹುತೇಕ ಸಂಕಷ್ಟದಿಂದ ಪಾರು ಮಾಡಲಾಗಿದೆ ಎಂದು ಕೇಂದ್ರದ ಉಕ್ಕು-ಬೃಹತ್ ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಪ್ಯಾಕೇಜ್ ಘೋಷಣೆ ಮಾಡಿದ ನಂತರ ಮೊದಲ ಬಾರಿಗೆ ವೈಜಾಗ್ ಸ್ಟೀಲ್ ಕಾರ್ಖಾನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು; ಕಾರ್ಖಾನೆಯ ಮೂರೂ ಬ್ಲಾಸ್ಟ್ ಪರ್ನೆಸ್ (ಊದು ಕುಲುಮೆ) ಗಳಿಗೆ ಚಾಲನೆ ಕೊಟ್ಟು ಕೆಲವೇ ತಿಂಗಳಲ್ಲಿ ಇಡೀ ಕಾರ್ಖಾನೆ ಪೂರ್ಣ ಪ್ರಮಾಣದಲ್ಲಿ ಉಕ್ಕು ಉತ್ಪಾದನೆಗೆ ಅಗತ್ಯವಾದ ಎಲ್ಲಾ ವ್ಯವಸ್ಥೆ ಮಾಡುತ್ತೇವೆ ಎಂದರು.

ಕಾರ್ಖಾನೆ ₹35,000 ಕೋಟಿ ಸಾಲ ಹೊಂದಿದ್ದು, ಅದನ್ನು ಗಮನದಲ್ಲಿಟ್ಟುಕೊಂಡು ಉತ್ಪಾದನೆಯ ದಕ್ಷತೆ, ಕ್ಷಮತೆಯನ್ನು ಹೆಚ್ಚಿಸುತ್ತೇವೆ. ವಾರ್ಷಿಕ 7.3 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ ಹೊಂದಿದ್ದೇವೆ. ಸಾಲವನ್ನು ಹಂತಹಂತವಾಗಿ ಮರು ಪಾವತಿ ಮಾಡುತ್ತೇವೆ ಎಂದು ಅವರು ಹೇಳಿದರು.

ವೈಜಾಗ್ ಸ್ಟೀಲ್ ಕಾರ್ಖಾನೆಗೆ ಈ ಪ್ಯಾಕೇಜ್ ನಲ್ಲಿ ₹10,300 ಕೋಟಿ ಹೂಡಿಕೆ ಮಾಡಲಾಗುವುದು ಹಾಗೂ ₹1,140 ಕೋಟಿಯನ್ನು ಷೇರು ರೂಪದಲ್ಲಿ ನಿರ್ವಹಣಾ ಬಂಡವಾಳವಾಗಿ ತೊಡಗಿಸಲಾಗುವುದು. ಈ ₹1,140 ಕೋಟಿಯನ್ನು ಹತ್ತು ವರ್ಷಗಳವರೆಗೂ ಹಿಂದಕ್ಕೆ ಪಡೆಯಲು ಅವಕಾಶವಿಲ್ಲ ಎಂದರು ಅವರು.

2030ರ ಹೊತ್ತಿಗೆ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ:

ಪ್ರಧಾನಿ ನರೇಂದ್ರ ಮೋದಿ #PM Narendra Modi ಅವರು 2030ರ ಹೊತ್ತಿಗೆ ದೇಶೀಯವಾಗಿ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿಯನ್ನು ನಿಗದಿ ಮಾಡಿದ್ದಾರೆ. ಈ ಗುರಿ ಮುಟ್ಟಬೇಕಾದರೆ ಅನೇಕ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ವೈಜಾಗ್ ಸ್ಟೀಲ್ ಪುನಚ್ಚೆತನ ಯೋಜನೆಯನ್ನು ಇದೇ ಉದ್ದೇಶದಿಂದ ರೂಪಿಸಲಾಗಿದೆ. ದೇಶೀಯ ಉಕ್ಕು ಉದ್ಯಮಕ್ಕೆ ಈ ಕಾರ್ಖಾನೆಯ ಬಹುದೊಡ್ಡ ಕೊಡುಗೆ ನೀಡುತ್ತದೆ ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದರು.

Also read: ಕುವೆಂಪು ವಿವಿಯು ಮುಚ್ಚುವ ದಿನಗಳು ದೂರವಿಲ್ಲ | ಎಮ್‌ಎಲ್‌ಸಿ ಡಿ.ಎಸ್. ಅರುಣ್ ಆತಂಕ

ಪ್ರಧಾನಿಗಳಿಗೆ ಪ್ರಾಮಾಣಿಕವಾಗಿ ಧನ್ಯವಾದ ಅರ್ಪಿಸುತ್ತೇನೆ:

ವೈಜಾಗ್ ಸ್ಟೀಲ್ ಪುನಶ್ಚೇತನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವವೇ ಕಾರಣ ಎಂದು ಪುನರುಚ್ಚಿಸಿದ ಸಚಿವ ಕುಮಾರಸ್ವಾಮಿ ಅವರು; ನಾನು ಅತ್ಯಂತ ಪ್ರಾಮಾಣಿಕವಾಗಿ ಪ್ರಧಾನಿಗಳಿಗೆ ಆಂಧ್ರ ಪ್ರದೇಶದ ಎಲ್ಲಾ ಅಣ್ಣ ತಮ್ಮಂದಿರ ಪರವಾಗಿ ಧನ್ಯವಾದ ಸಲ್ಲಿಸುತ್ತೇನೆ. ಏಕೆಂದರೆ ಅವರು ಮನಸ್ಸು ಮಾಡದಿದ್ದರೆ ಈ ಪ್ಯಾಕೇಜ್ ಕೊಡಲು ಸಾಧ್ಯ ಆಗುತ್ತಿರಲಿಲ್ಲ ಎಂದರು.

ವೈಕಾಗ್ ಸ್ಟೀಲ್ ಬಂಡವಾಳ ವಾಪಸಾತಿಗೆ (Disinvestment) ಕೇಂದ್ರ ಸಂಪುಟದಲ್ಲಿ ನಿರ್ಧಾರ ಮಾಡಲಾಗಿತ್ತು. ಇತಿಹಾಸದಲ್ಲಿ ಯಾವುದೇ ಕಾರ್ಖಾನೆ ಅಥವಾ ಕಂಪನಿಯಿಂದ ಬಂಡವಾಳ ವಾಪಸ್ ನಿರ್ಧಾರ ಕೈಗೊಂಡ ಮೇಲೆ ಅದನ್ನು ಮರು ಪರಿಶೀಲಿಸಿದ ಉದಾಹರಣೆ ಇಲ್ಲ. ಆದರೆ, ವೈಜಾಗ್ ಸ್ಟೀಲ್ ವಿಷಯದಲ್ಲಿ ಇತಿಹಾಸ ಸೃಷ್ಟಿಯಾಗಿದೆ. ಸಂಪುಟದ ನಿರ್ಧಾರ ಕೈಬಿಟ್ಟು ಪುನಶ್ಚೇತನಕ್ಕೆ ಪ್ಯಾಕೇಜ್ ಕೊಡಲಾಗಿದೆ. ಹೀಗಾಗಿ ಯಾರೇ ಆಗಲಿ ಈ ವಿಷಯವನ್ನು ಲಘುವಾಗಿ ಪರಿಗಣಿಸಬಾರದು ಎಂದು ಸಚಿವರು ಹೇಳಿದರು.

ನಾನು ಉಕ್ಕು ಸಚಿವನಾಗಿ ಬಂದ ಮೇಲೆ ಸುಮಾರು ಇಪ್ಪತ್ತಕ್ಕೂ ಹೆಚ್ಚು ಸಭೆಗಳನ್ನು ವೈಜಾಗ್ ಸ್ಟೀಲ್ ಗಾಗಿ ನಡೆಸಿದ್ದೇನೆ. ಬೆಳಗಿನ ಜಾವ ಒಂದೂವರೆ ಗಂಟೆ ವೇಳೆಯಲ್ಲಿ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್, ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಭೂಪತಿರಾಜು ಶ್ರೀನಿವಾಸ ವರ್ಮ ಅವರೊಂದಿಗೆ ಸಭೆ ನಡೆಸಲಾಗಿತ್ತು. ಕಾರ್ಖಾನೆಯ ಬಗ್ಗೆ ಮೋದಿ ಅವರ ಸರಕಾರದ ಬದ್ಧತೆ ಏನು ಎಂಬುದು ಇದರಿಂದ ತಿಳಿಯುತ್ತದೆ. ಇದೇ ವೇಳೆ ನಾನು ಹಣಕಾಸು ಸಚಿವರಿಗೂ ಧನ್ಯವಾದ ಹೇಳುವೆ ಎಂದರು ಕುಮಾರಸ್ವಾಮಿ ಅವರು.

ಮೊದಲು ಕಾರ್ಖಾನೆಯ ಪರಿಸ್ಥಿತಿ ನಿರಾಶಾದಾಯಕವಾಗಿತ್ತು. ಇದನ್ನು ಯಾರಿಂದಲೂ ಉದ್ಧಾರ ಮಾಡಲು ಸಾಧ್ಯವಿಲ್ಲ ಎಂದು ಅನೇಕರು ಹೇಳಿದ್ದರು. ಅಧಿಕಾರಿಗಳ ಆಲೋಚನೆಯೂ ಅದೇ ಆಗಿತ್ತು. ನಾನು ಕಳೆದ ಜುಲೈನಲ್ಲಿ ಕಾರ್ಖಾನೆಗೆ ಭೇಟಿ ಕೊಟ್ಟಾಗ ಎಲ್ಲಾ ಕಾರ್ಮಿಕರ ಕೈಯ್ಯಲ್ಲಿ save rinl ಎನ್ನುವ ಬೋರ್ಡ್ ಗಳು ಇದ್ದವು. ಇವತ್ತು ನಾನು ಮತ್ತೆ ನೋಡುತ್ತಿದ್ದೇನೆ. ‘ಧನ್ಯವಾದ ಮೋದಿ ಜೀ’ ಎನ್ನುವ ಬೋರ್ಡ್ ಗಳು ಕಾಣುತ್ತಿವೆ. ಈ ಪ್ರಯತ್ನದಲ್ಲಿ ಚಂದ್ರಬಾಬು ನಾಯ್ಡು ಅವರು ನೀಡಿದ ಸಹಕಾರವನ್ನು ನಾನು ಸ್ಮರಿಸುತ್ತೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಡಿಸಿಎಂ ಪವನ್ ಕಲ್ಯಾಣ್, ಸಚಿವ ನಾರಾ ಲೋಕೇಶ್ ಸೇರಿ ಅನೇಕ ನಾಯಕರು ಕಾರ್ಖಾನೆ ಪುನಶ್ಚೇತನಕ್ಕೆ ಮನವಿ ಮಾಡಿದ್ದರು. ನನ್ನ ಸಹೋದ್ಯೋಗಿ ಭೂಪತಿರಾಜು ಶ್ರೀನಿವಾಸ ವರ್ಮ ಅವರೊಂದಿಗೆ ನಿರಂತರವಾಗಿ ಕೆಲಸ ಮಾಡಿದ್ದೇನೆ ಎಂದು ಅವರು ನುಡಿದರು.
ವೇತನ ಸಮಸ್ಯೆ ಎರಡ್ಮೂರು ತಿಂಗಳಲ್ಲಿ ಇತ್ಯರ್ಥ:

ಕಾರ್ಖಾನೆಯಲ್ಲಿ ಕಳೆದ ಮೂರು ತಿಂಗಳಿಂದ ಕಾರ್ಮಿಕರು ವೇತನ ಇಲ್ಲದೆ ಕೆಲಸ ಮಾಡುತ್ತಾ ಬಂದಿದ್ದಾರೆ. ಉತ್ಪಾದನೆಯಲ್ಲಿ ಗಣನೀಯ ಹೆಚ್ಚಳ ಕಾಣುತ್ತಿದೆ. ವೇತನ ಕೊಡುವುದು ಕಷ್ಟವಾಗಿತ್ತು. ಎರಡು ಮೂರು ತಿಂಗಳಲ್ಲಿ ವೇತನ ಪಾವತಿ ವ್ಯವಸ್ಥೆಯನ್ನು ಸರಿ ದಾರಿಗೆ ತರುತ್ತೇವೆ ಎಂದು ಕುಮಾರಸ್ವಾಮಿ ಅವರು ಭರವಸೆ ನೀಡಿದರು.

ಇಲ್ಲಿಗೆ ಬರುವ ಮುನ್ನ ಬೆಳಗ್ಗೆ ತಿರುಪತಿಗೆ ತೆರಳಿ ಬಾಲಾಜಿ ದರ್ಶನ ಪಡೆದು ಬಂದಿದ್ದೇನೆ. ಈ ಕಾರ್ಖಾನೆಯನ್ನು ಉಳಿಸು, ಕಾರ್ಮಿಕರಿಗೆ ಶಕ್ತಿ ಕೊಡು, ಪ್ರಧಾನಿಗಳ ವಿಕಸಿತ ಭಾರತ ಕನಸು ನನಸಾಗಲಿ. 2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆಯ ಸಂಕಲ್ಪ ಈಡೇರಲಿ ಎಂದು ಬೇಡಿಕೊಂಡೆ. ಆ ಬಾಲಾಜಿಯ ಅನುಗ್ರಹದಂತೆ ಎಲ್ಲಾ ನಡೆದಿದೆ ಎಂದು ಭಾವುಕರಾಗಿ ಹೇಳಿದರು ಸಚಿವರು.

ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಆಂಧ್ರ ಪ್ರದೇಶದ ಶಿಕ್ಷಣ ಸಚಿವ ಸತ್ಯಕುಮಾರ್ ಯಾದವ್, ಸಂಸದರಾದ ಭರತ್, ಅಪ್ಪಲನಾಯ್ದು, ಸಿ.ಎಂ.ರಮೇಶ್, ಉಕ್ಕು ಸಚಿವಾಲಯದ ಕಾರ್ಯದರ್ಶಿ ಸಂದೀಪ್ ಪೌಂದ್ರಿಕ್ ಹಾಗೂ ಸ್ಥಳೀಯ ಶಾಸಕರು ಮಾತನಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: H D KumaraswamyKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNew DelhiNews_in_KannadaNews_KannadaPM Narendra ModiVizag Stealನವದೆಹಲಿಪ್ರಧಾನಿ ನರೇಂದ್ರ ಮೋದಿವೈಜಾಗ್ ಸ್ಟೀಲ್ಹೆಚ್.ಡಿ. ಕುಮಾರಸ್ವಾಮಿ
Previous Post

ಕುವೆಂಪು ವಿವಿಯು ಮುಚ್ಚುವ ದಿನಗಳು ದೂರವಿಲ್ಲ | ಎಮ್‌ಎಲ್‌ಸಿ ಡಿ.ಎಸ್. ಅರುಣ್ ಆತಂಕ

Next Post

ಫೆ.4ರಂದು ‘ಕ್ರಾಂತಿವೀರ ಬ್ರಿಗೇಡ್’ಗೆ ಚಾಲನೆ | ಕೆ.ಎಸ್. ಈಶ್ವರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಫೆ.4ರಂದು ‘ಕ್ರಾಂತಿವೀರ ಬ್ರಿಗೇಡ್’ಗೆ ಚಾಲನೆ | ಕೆ.ಎಸ್. ಈಶ್ವರಪ್ಪ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ಆ.15-16 | ಗುಡ್ಡೇಕಲ್‍ ಜಾತ್ರೆ | ಏನೆಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ?

August 13, 2025

ವಿದ್ಯಾರ್ಥಿಗಳಿಗೆ ಸಮತೋಲಿತ ಅಧ್ಯಯನ ಬಹಳ ಮುಖ್ಯ: ಪ್ರೊ. ಶರತ್ ಅನಂತಮೂರ್ತಿ

August 13, 2025

ಬೀದರ್ | ಹಿಂದು ವಿರೋಧಿ ಷಡ್ಯಂತ್ರ ಹೆಣೆದವರ ವಿರುದ್ಧ ಎಸ್ ಐಟಿ ರಚಿಸಲು ಶಾಸಕ ಬೆಲ್ದಾಳೆ ಒತ್ತಾಯ

August 13, 2025

ಆ.15ರಂದು ಸೊರಬದಿಂದ ಈಸೂರಿನವರೆಗೆ ಬೈಕ್ ರ್‍ಯಾಲಿ: ಚಿದಾನಂದಗೌಡ

August 13, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ಆ.15-16 | ಗುಡ್ಡೇಕಲ್‍ ಜಾತ್ರೆ | ಏನೆಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ?

August 13, 2025

ವಿದ್ಯಾರ್ಥಿಗಳಿಗೆ ಸಮತೋಲಿತ ಅಧ್ಯಯನ ಬಹಳ ಮುಖ್ಯ: ಪ್ರೊ. ಶರತ್ ಅನಂತಮೂರ್ತಿ

August 13, 2025

ಬೀದರ್ | ಹಿಂದು ವಿರೋಧಿ ಷಡ್ಯಂತ್ರ ಹೆಣೆದವರ ವಿರುದ್ಧ ಎಸ್ ಐಟಿ ರಚಿಸಲು ಶಾಸಕ ಬೆಲ್ದಾಳೆ ಒತ್ತಾಯ

August 13, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!