ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, #Keladi Shivappa Nayaka University of Agriculture and Horticulture ಇರುವಕ್ಕಿ, ಕೃಷಿ ವಿಜ್ಞಾನಿಗಳ ಮಹಾವಿದ್ಯಾಲಯ, ಇರುವಕ್ಕಿ ವತಿಯಿಂದ “ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮ 2024-25ಯ ಅಡಿಯಲ್ಲಿ ಫೆಬ್ರುವರಿ 5 ರಂದು ಶಿಕಾರಿಪುರ ತಾಲ್ಲೂಕಿನ ನೆಲವಾಗಿಲು ಗ್ರಾಮದಲ್ಲಿ ಕೃಷಿ ಮೇಳವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ #Minister Madhu Bangarappa ಉದ್ಘಾಟಿಸಲಿದ್ದಾರೆ. ಸಂಸದ ಬಿ.ವೈ. ರಾಘವೇಂದ್ರ ಬೆಳೆ ಸಂಗ್ರಹಾಲಯವನ್ನು, ವಿಧಾನಸಭಾ ಸದಸ್ಯ ಬಿ.ವೈ. ವಿಜಯೇಂದ್ರ ವಸ್ತು ಪ್ರದರ್ಶನವನ್ನು ಉದ್ಘಾಟನೆ ಮಾಡಲಿದ್ದಾರೆ. ಹಾಗೂ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಜಗದೀಶ್ ರವರು ಮತ್ತು ವಿವಿಧ ಕೃಷಿ ಮತ್ತು ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿರುತ್ತಾರೆ.
ಈ ಕೃಷಿ ಮತ್ತು ಕಲೆಗಳ ಉತ್ಸವದಲ್ಲಿ ಹಲವು ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಹಾಗೂ ವಿಭಿನ್ನ ಕೃಷಿ ಮಳಿಗೆಗಳನ್ನು ಹಾಕುವುದಕ್ಕಾಗಿ ವ್ಯವಸ್ಥೆ ಮಾಡಲಾಗಿದೆ ಇದರಲ್ಲಿ ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಜೇನು ಸಾಕಾಣಿಕೆ, ಮೌಲ್ಯವರ್ಧಿತ ಕೃಷಿ ಉತ್ಪನ್ನಗಳು, ಕೃಷಿ ಪರಿಕರಗಳು ಮತ್ತು ಯಂತ್ರೋಪಕರಣಗಳ ಮತ್ತು ಇನ್ನಿತರ ಪ್ರದರ್ಶನ ಏರ್ಪಡಿಸಲಾಗಿದೆ.
Also read: ಮಾರಕಾಸ್ತ್ರದಿಂದ ಯುವಕನಿಗೆ ಹಲ್ಲೆ
ಸುಮಾರು 100 ಕ್ಕೂ ಹೆಚ್ಚು ಮಳಿಗೆಗಳು ಇರುತ್ತದೆ. ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ವಿಜ್ಞಾನಿಗಳು ರೈತರ ಜೊತೆ ಚರ್ಚಾಗೋಷ್ಠಿಯನ್ನು ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ರೈತ ಮಹಿಳೆಯರಿಗೆ ಮತ್ತು ಪ್ರಗತಿಪರ ರೈತರಿಗೆ ಸನ್ಮಾನ ಆಯೋಜಿಸಲಾಗಿದೆ.
ಎಲ್ಲಾ ರೈತ ಬಾಂಧವರು ತಮ್ಮ ಕುಟುಂಬದ ಸಮೇತ ಈ ಕಾರ್ಯಕ್ರಮಕ್ಕೆ ಆಗಮಿಸಿ ಉಪಯುಕ್ತ ಮಾಹಿತಿ ಪಡೆಯುವುದರ ಮೂಲಕ ಕೃಷಿ ಮೇಳವನ್ನು ಯಶಸ್ವಿಗೊಳಿಸಬೇಕಾಗಿ ಕೋರಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post