ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಳೆದ ಕೆಲವು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ #CM Siddaramaiah ಅವರ ಮುಂದೆ ಶರಣಾಗಿದ್ದ ಆರು ನಕ್ಸಲರ #Naxal ಪೈಕಿ ಇಬ್ಬರನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಕ್ಸಲರಾದ ವನಜಾಕ್ಷಿ ಹಾಗೂ ಮುಂಡಗಾರು ಲತಾ ಅವರುಗಳನ್ನು ಬಾಳೆಹೊಳೆ ಪೊಲೀಸರು ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ನಂತರ ನಾಳೆ ಮಂಗಳವಾರ ತೀರ್ಥಹಳ್ಳಿ ಹಾಗೂ ಬುಧವಾರ ಹೊಸನಗರ ನ್ಯಾಯಾಲಯಗಳಿಗೆ ವನಜಾಕ್ಷಿ ಹಾಗೂ ಮುಂಡಗಾರು ಲತಾ ಇಬ್ಬರನ್ನೂ ಪೊಲೀಸರು ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.
ಮುಂಡಗಾರು ಲತಾ ಮತ್ತು ವನಜಾಕ್ಷಿ ವಿರುದ್ಧ ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಪ್ರಕರಣ, ಹೊಸನಗರ ಠಾಣೆ ವ್ಯಾಪ್ತಿಯಲ್ಲಿ ಒಂದು ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post