Friday, October 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಭಾರತದ ಆರ್ಥಿಕತೆಯ ಪರಿವರ್ತನೆಯಲ್ಲಿ ಸದಾ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕ: ಸಿಎಂ

ಜಾಗತಿಕ ಹೂಡಿಕೆದಾರರ ಸಮಾವೇಶ "ಇನ್ವೆಸ್ಟ್ ಕರ್ನಾಟಕ 2025" ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ

February 12, 2025
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 4 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಭಾರತದ ಆರ್ಥಿಕತೆಯ ಪರಿವರ್ತನೆಯಲ್ಲಿ ಕರ್ನಾಟಕ ಸದಾ ಮುಂಚೂಣಿಯಲ್ಲಿರುವ ರಾಜ್ಯವಾಗಿದ್ದು, ಇಂದು ದೇಶದಲ್ಲಿಯೇ ಕರ್ನಾಟಕ ಅತ್ಯಂತ ಹೂಡಿಕೆದಾರ ಸ್ನೇಹಿ ರಾಜ್ಯವೆಂಬ ನಮ್ಮ ಬದ್ಧತೆಯನ್ನು ಮತ್ತೊಮ್ಮೆ ಧೃಢೀಕರಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ #CM Siddaramaiah ಹೇಳಿದರು.

ಜಾಗತಿಕ ಹೂಡಿಕೆದಾರರ ಸಮಾವೇಶ “ಇನ್ವೆಸ್ಟ್ ಕರ್ನಾಟಕ 2025” #Invest Karnataka 2025 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸದೃಢ ನೀತಿ ನಿರೂಪಣೆ, ಸಕ್ರಿಯ ಆಡಳಿತ ಮತ್ತು ವ್ಯವಹಾರ-ಸ್ನೇಹಿ ಪರಿಸರ ವ್ಯವಸ್ಥೆಯಿದ್ದು, ಇಲ್ಲಿ ಮಾಡುವ ಪ್ರತಿ ಹೂಡಿಕೆಯೂ ಯಶಸ್ವಿಯಾಗುವಂತೆ ಹಾಗೂ ಸುಸ್ಥಿರ ಬೆಳವಣಿಗೆಗೆ ಕೊಡುಗೆ ನೀಡುವಂತೆ ಖಾತ್ರಿಪಡಿಸುತ್ತೇವೆ. ಕದಂಬ, ಗಂಗರು, ಚಾಲುಕ್ಯ, ಹೊಯ್ಸಳ, ವಿಜಯನಗರ ಸಾಮ್ರಾಜ್ಯ ಮತ್ತು ಮೈಸೂರು ಒಡೆಯರ ಆಳ್ವಿಕೆಯಲ್ಲಿ ಕರ್ನಾಟಕ ನೇಕಾರಿಕೆ, ಲೋಹಶಾಸ್ತ್ರ, ಶಿಲ್ಪಕಲೆ, ಕರಕುಶಲ ಸಾಮಗ್ರಿಗಳ ತಯಾರಿಕೆಯ ತವರಾಗಿತ್ತು ಮತ್ತು ಪ್ರಮುಖ ವ್ಯಾಪಾರ ಕೇಂದ್ರವಾಗಿತ್ತು ಎಂದರು.
ಪ್ರಖ್ಯಾತ ಬಿದರಿ ಕಲೆ (ಲೋಹಕಲೆ), ಮೈಸೂರು ರೇಷ್ಮೆ ನೇಕಾರಿಕೆ ಮತ್ತು ಶ್ರೀಗಂಧ ಕೆತ್ತನೆಯಂತಹ ಕುಶಲಕಲೆಗಳು ರಾಜ ಮನೆತನಗಳ ಆಶ್ರಯದಲ್ಲಿ ಅಭಿವೃದ್ಧಿ ಹೊಂದಿದವು. ಈ ಮೂಲಕ ಕರ್ನಾಟಕದ ಶ್ರೀಮಂತ ಕೈಗಾರಿಕಾ ಪರಂಪರೆಗೆ ಬುನಾದಿಯನ್ನು ಹಾಕಲಾಗಿತ್ತು. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದೃಷ್ಟಿಯುಳ್ಳ ನಾಯಕತ್ವದಲ್ಲಿ 1923ರಲ್ಲಿ ಸ್ಥಾಪನೆಗೊಂಡ ಮೈಸೂರು ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ, ಭಾರತದ ಮೊತ್ತಮೊದಲ ಬೃಹತ್ ಉಕ್ಕು ಕೈಗಾರಿಕೆಯಾಗಿತ್ತು. ಒಡೆಯರ್ ಮಹಾರಾಜರ ಆಳ್ವಿಕೆಯಲ್ಲಿ ಪ್ರಾರಂಭವಾದ ಮೈಸೂರು ರೇಷ್ಮೆ ಉದ್ಯಮ ಪ್ರಾಮುಖ್ಯತೆಯನ್ನು ಪಡೆದುಕೊಂಡು ಶ್ರೀಮಂತಿಕೆಯ ಜಾಗತಿಕ ಚಿಹ್ನೆಯಾಗಿ ಗುರುತಿಸಿಕೊಂಡಿತು. ಈ ಪರಂಪರೆ ಇಂದಿಗೂ ಮುಂದುವರೆದಿದೆ ಎಂದರು.

ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಕಾಫಿ ಕೃಷಿಯು ಅಭಿವೃದ್ಧಿಗೊಂಡು ಕರ್ನಾಟಕವನ್ನು ಭಾರತದ ಕಾಫಿ ರಾಜಧಾನಿಯನ್ನಾಗಿಸಿತು, ಈ ವೈಶಿಷ್ಯತೆಗೆ ಕರ್ನಾಟಕ ಇಂದಿಗೂ ಪಾತ್ರವಾಗಿದೆ. ಹೆಚ್.ಎ.ಎಲ್, ಬಿಇಎಲ್, ಬಿಇಎಂಎಲ್ ಮುಂತಾದ ಸಾರ್ವಜನಿಕ ವಲಯದ ಉದ್ಯಮಗಳಿಗೆ ತವರೂರಾದ ಕರ್ನಾಟಕ ಭಾರತದ ಕೈಗಾರಿಕಾ ಬೆಳವಣಿಗೆಗೆ ಬೆನ್ನೆಲುಬಾಗಿದೆ ಎಂದರು.

ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಐಐಎಸ್ಸಿ, ಐಐಎಂ ಬೆಂಗಳೂರು, ಎನ್‍ಎಲ್‍ಎಸ್.ಯು ಮುಂತಾದ ಜಾಗತಿಕ ಮಟ್ಟದ ಸಂಸ್ಥೆಗಳು ಮತ್ತು 200ಕ್ಕೂ ಹೆಚ್ಚು ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜುಗಳಿಂದ ಉತ್ತಮ ಪ್ರತಿಭೆಗಳು ಪ್ರತಿ ವರ್ಷ ಹೊರಬರುತ್ತಿದ್ದಾರೆ. ಕೃತಕ ಬುದ್ಧಿಮತ್ತೆ, ರೋಬೋಟಿಕ್ಸ್ ಸ್ಪೇಸ್ ಮತ್ತು ಬಯೋಟೆಕ್ ನಲ್ಲಿ 400 ಕ್ಕೂ ಹೆಚ್ಚು ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳನ್ನು ಹೊಂದಿರುವ ರಾಜ್ಯವು ಭಾರತದ ಬೌದ್ಧಿಕ ಕೇಂದ್ರವಾಗಿ ತಲೆಎತ್ತಿದೆ. ಪ್ರವರ್ಧಮಾನಕ್ಕೆ ಬರುತ್ತಿರುವ ವಲಯಗಳಲ್ಲಿ ಶೈಕ್ಷಣಿಕ ಸಂಸ್ಥೆ ಹಾಗೂ ಉದ್ಯಮಗಳ ಸಹಭಾಗಿತ್ವದಲ್ಲಿ ಯುವಕರಿಗೆ ತರಬೇತಿಯನ್ನು ಸಕ್ರಿಯವಾಗಿ ನೀಡಲಾಗುತ್ತಿದೆ ಎಂದರು.

ಜವಾಬ್ದಾರಿಯುತ, ಸುಸ್ಥಿರ ಬೆಳವಣಿಗೆಗೆ ಆದ್ಯತೆ ನೀಡುವ ಕರ್ನಾಟಕ, ಹಸಿರು ಆರ್ಥಿಕತೆ, ಪರಿಸರ ಸ್ನೇಹಿ ಕೈಗಾರಿಕಾ ಸಮುಚ್ಚಯಗಳು ಹಾಗೂ ಸುಸ್ಥಿರ ನಗರಾಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದೆ. ಭಾರತದ ಸೌರ ಶಕ್ತಿ ಉತ್ಪಾದನೆಯಲ್ಲಿ ಕರ್ನಾಟಕ ಮಂಚೂಣಿಯಲ್ಲಿದ್ದು, ಪವನ ಶಕ್ತಿ, ಎಲೆಕ್ಟ್ರಿಕ್ ಮೊಬಿಲಿಟಿ ಮತ್ತು ಸುಸ್ಥಿರ ನಗರಾಭಿವೃದ್ದಿಯಲ್ಲಿಯೂ ನಾಯಕತ್ವ ವಹಿಸಿದೆ. ಬಿಯಾಂಡ್ ಬೆಂಗಳೂರು ಪರಿಕಲ್ಪನೆ ರಾಜ್ಯದಾದ್ಯಂತ ಸಮತೋಲಿತ ಕೈಗಾರಿಕಾ ಬೆಳವಣಿಗೆಯನ್ನು ಖಾತ್ರಿ ಪಡಿಸುತ್ತದೆ. ಅಂತೆಯೇ ಪರಿಸರದ ಜವಾಬ್ದಾರಿಯ ನಿರ್ವಹಣೆಯನ್ನೂ ಖಾತ್ರಿಪಡಿಸುತ್ತದೆ ಎಂದರು.
ಆಹ್ಲಾದಕರ ಹವಾಮಾನಕ್ಕೆ ಹೆಸರಾಗಿರುವ ಬೆಂಗಳೂರು, ಉತ್ತಮ ಮಟ್ಟದ ಪ್ರತಿಭೆಗಳನ್ನು ಆಕರ್ಷಿಸುವುದಲ್ಲದೇ, ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ ಎಂಬ ಹಿರಿಮೆಯನ್ನೂ ತನ್ನದಾಗಿಸಿಕೊಂಡಿದೆ. ಕಾಸ್ಮೊಪಾಲಿಟನ್ ಸಂಸ್ಕೃತಿ, ಜಾಗತಿಕ ಮಟ್ಟದ ಸಂಸ್ಥೆಗಳು ಮತ್ತು ಉನ್ನತ ಜೀವನ ಮಟ್ಟದೊಂದಿಗೆ, ವ್ಯಾಪಾರದ ಬೆಳವಣಿಗೆಯನ್ನು ಹಾಗೂ ನೌಕರರಿಗೆ ಸರಿಸಾಟಿಯಿಲ್ಲದ ಕೆಲಸ ಮತ್ತು ಜೀವನದ ಸಮತೋಲನವನ್ನು ಕೊಡಮಾಡುತ್ತಾ, ಕರ್ನಾಟಕ ಹೂಡಿಕೆದಾರರಿಗೆ ಸೂಕ್ತವಾದ ಗಮ್ಯವಾಗಿ ಪರಿಣಮಿಸಿದೆ ಎಂದರು.

ಕರ್ನಾಟಕದ ಸಮೃದ್ಧ ಪ್ರವಾಸೋದ್ಯಮ ಮತ್ತು ಸೇವಾ ವಲಯವು ತನ್ನ ಶ್ರೀಮಂತ ಸಾಂಸ್ಕೃತಿಕ ಪರಂಪರೆ, ಸುಂದರ ನೈಸರ್ಗಿಕ ಪ್ರದೇಶ ಮತ್ತು ವಿಶ್ವಮಟ್ಟದ ಮೂಲಸೌಕರ್ಯಗಳಿಂದಾಗಿ ರಾಜ್ಯವನ್ನು ಪ್ರವಾಸಿಗರು ಮತ್ತು ಜಾಗತಿಕ ಹೂಡಿಕೆದಾರರಿಗೆ ಪ್ರಮುಖ ಗಮ್ಯವನ್ನಾಗಿಸಿದೆ. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವೂ ಸೇರಿದಂತೆ ರಾಜ್ಯಾದ್ಯಂತ ಉತ್ತಮ ಸಂಪರ್ಕ ಹೊಂದಿರುವ ವಿಮಾನನಿಲ್ದಾಣಗಳನ್ನು ಹೊಂದಿರುವ ಕಾರಣ ಕರ್ನಾಟಕ ವೈಮಾನಿಕ ಸಂಪರ್ಕದಲ್ಲಿಯೂ ಮುಂಚೂಣಿಯಲ್ಲಿದೆ. ಪ್ರಯಾಣಿಕರು ಮತ್ತು ಸರಕುಗಳಿಗೆ ಜಾಗತಿಕ ಕೇಂದ್ರವಾಗಿರುವ ಬೆಂಗಳೂರು ಮತ್ತು ಇತರೆ ನಿರ್ಮಾಣ ಹಂತದ ವಿಮಾನ ನಿಲ್ದಾಣಗಳು ಪ್ರಾದೇಶಿಕ ಮತ್ತು ಅಂತರರಾಷ್ಟ್ರೀಯ ಸಂಪರ್ಕವನ್ನು ಉತ್ತೇಜಿಸಲಿದೆ ಎಂದರು.

Also read: Karnataka Energy Department Secures ₹3.43 Lakh Crore Investment in Renewable Energy Sector

ಬೆಂಗಳೂರಿಗೆ ಮತ್ತೊಂದು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಥಾಪಿಸಲು ಸೂಕ್ತವಾದ ಸ್ಥಳವನ್ನು ಗುರುತಿಸುವ ಕಾರ್ಯ ಸಕ್ರಿಯವಾಗಿ ನಡೆದಿದೆ. ಬೆಂಗಳೂರಿನ ಜಾಗತಿಕ ಸಂಪರ್ಕ ಮತ್ತು ಆರ್ಥಿಕ ಸಾಮರ್ಥ್ಯವನ್ನು ಇದು ಇನ್ನಷ್ಟು ಉತ್ತೇಜಿಸಲಿದೆ. ರಾಜ್ಯದ 320 ಕಿ.ಮೀ ಉದ್ದದ ಕರಾವಳಿ ಪ್ರದೇಶವು ಅನೇಕ ಬಂದರುಗಳನ್ನು ಹೊಂದಿದ್ದು, ಕಡಲತೀರದ ವ್ಯಾಪಾರ, ಮೀನುಗಾರಿಕೆ ಮತ್ತು ಕರಾವಳಿ ತೀರದ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವಲ್ಲಿ ಮಹತ್ವದ ಪಾತ್ರವನ್ನು ವಹಿಸಿವೆ. ದಿನೈದು ಸಾವಿರಕ್ಕೂ ಹೆಚ್ಚು ಸ್ಟಾರ್ಟ್‍ಅಪ್ ಹಾಗೂ 40ಕ್ಕೂ ಹೆಚ್ಚು ಯೂನಿಕಾರ್ನ್ ಗಳನ್ನು ಹೊಂದಿರುವ ಕರ್ನಾಟಕ ಭಾರತದ ಅತಿದೊಡ್ಡ ಸ್ಟಾರ್ಟ್ ಅಪ್ ಹಬ್ ಮತ್ತು ಜಾಗತಿಕವಾಗಿ ಮೊದಲ ಐದರಲ್ಲಿ ಗುರುತಿಸಿಕೊಂಡಿದೆ. ಎಲಿವೇಟ್ 100 ಮತ್ತು ಬಿಯಾಂಡ್ ಬೆಂಗಳೂರು ನಂತಹ ಯೋಜನೆಗಳು ನಾವೀನ್ಯತೆಯನ್ನು ಎರಡು ಮತ್ತು ಮೂರನೇ ಹಂತದ ನಗರಗಳಿಗೆ ಕೊಂಡೊಯ್ದು ಡಿಜಿಟಲ್ ಪರಿವರ್ತನೆಯಲ್ಲಿ ತನ್ನ ನಾಯಕತ್ವವನ್ನು ಒತ್ತಿ ಹೇಳುತ್ತದೆ ಎಂದರು.

ಸೆಮಿಕಂಡಕ್ಟರ್ ಉತ್ಪಾದನೆಗೆ ಪ್ರಮುಖ ಕೇಂದ್ರವಾಗಿ ತನ್ನ ಸ್ಥಾನವನ್ನು ಭದ್ರಗೊಳಿಸಿಕೊಳ್ಳುತ್ತಿರುವ ಕರ್ನಾಟಕ ಇಂಟೆಲ್, ಟಿಎಸ್‍ಎಂಸಿ ಮತ್ತು ಮೈಕ್ರಾನ್ ಸಂಸ್ಥೆಗಳಿಂದ ಪ್ರಮುಖ ಹೂಡಿಕೆಗಳನ್ನು ಹೊಂದಿದೆ. ಭಾರತದ ಎಲೆಕ್ಟ್ರಾನಿಕ್ ಉತ್ಪನ್ನಗಳ ರಫ್ತಿನಲ್ಲಿ ಶೇ.60 ರಷ್ಟನ್ನು ಪೂರೈಸುವ ಮೂಲಕ ಕರ್ನಾಟಕ ನೆಕ್ಸ್ಟ್ ಜೆನ್ ಚಿಪ್ಸ್ ಹಾಗೂ ಸಾಧನಗಳ ಜಾಗತಿಕ ಪೂರೈಕೆದಾರ ಎನಿಸಿದೆ ಎಂದರು.
ಇನ್‍ಫೋಸಿಸ್, ವಿಪ್ರೋ, ಟಿಸಿಎಸ್, ಗೂಗಲ್, ಅಮೆಜಾನ್ ಮತ್ತು ಆಪಲ್ ನಂತಹ ಪ್ರಮುಖ ಟೆಕ್ ಕಂಪನಿಗಳಿಗೆ ನೆಲೆಯಾಗಿರುವ ಕರ್ನಾಟಕ ಭಾರತದ ಸಾಫ್ಟ್ ವೇರ್ ರಫ್ತಿಗೆ ಶೇ. 40 ರಷ್ಟು ಕೊಡುಗೆ ನೀಡುತ್ತಿದೆ. ಡಿಜಿಟಲ್ ಅರ್ಥಿಕತೆಯನ್ನು ಭವಿಷ್ಯಕ್ಕೆ ಸೂಕ್ತವಾಗುವ ರೀತಿಯಲ್ಲಿ ಅಣಿಮಾಡಲು ಕರ್ನಾಟಕವು ಎಐ ಆಡಳಿತ, ಬ್ಲಾಕ್ ಚೈನ್ ಅಳವಡಿಕೆ ಮತ್ತು ಕ್ಲೌಡ್ ಕಂಪ್ಯೂಟಿಂಗ್ ಗಳಲ್ಲಿ ಹೂಡಿಕೆ ಮಾಡುತ್ತಿದೆ. ರಾಜ್ಯದಲ್ಲಿ ಟೆಸ್ಲಾ, ಓಲಾ ಎಲೆಕ್ಟ್ರಿಕ್, ಏಥರ್ ಎನರ್ಜಿ ಮತ್ತು ಮಹಿಂದ್ರಾ ಎಲೆಕ್ಟ್ರಿಕ್ ಹೂಡಿಕೆ ಮಾಡುವ ಮೂಲಕ ಕರ್ನಾಟಕ, ಭಾರತದ ಇವಿ ರಾಜಧಾನಿಯಾಗಿ ಹೊರಹೊಮ್ಮಿದೆ ಎಂದರು.

ಶೇ. 65 ಕ್ಕೂ ಹೆಚ್ಚು ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪಾದನೆ ರಾಜ್ಯದಲ್ಲಿ ಆಗುತ್ತಿದ್ದು, ಕರ್ನಾಟಕ ಭಾರತದ ಅತಿ ದೊಡ್ಡ ಏರೋಸ್ಪೇಸ್ ಕೇಂದ್ರವೂ ಆಗಿದೆ. ರೇಷ್ಮೆ ಉತ್ಪಾದನೆ ಹಾಗೂ ಉಡುಪುಗಳ ರಫ್ತಿನಲ್ಲಿ ರಾಜ್ಯವು ಮುಂಚೂಣಿಯಲ್ಲಿದ್ದು, ವಿಶೇಷವಾಗಿ ಮಹಿಳೆಯರಿಗೆ ಲಕ್ಷಾಂತರ ಉದ್ಯೋಗವನ್ನು ಸೃಜಿಸಿದೆ. ಬಯೋಟೆಕ್ ಸಂಶೋಧನೆ, ಲಸಿಕೆ ಮತ್ತು ಜೀವ ವಿಜ್ಞಾನದಲ್ಲಿಯೂ ರಾಜ್ಯ ಮುಂಚೂಣಿಯಲ್ಲಿದ್ದು, ವೈದ್ಯಕೀಯ ಸಂಶೋಧನೆ ಮತ್ತಷ್ಟು ಅಭಿವೃದ್ಧಿಗೆ ಪ್ರಮುಖ ತಾಣವಾಗಿದೆ ಎಂದರು.

ಕರ್ನಾಟಕ ಭಾರತದ ಅದಿರು ಆರ್ಥಿಕತೆಯಲ್ಲಿ ಪ್ರಮುಖ ಸ್ಥಾನವನ್ನು ಪಡೆದಿದೆ. ಕಬ್ಬಿಣದ ಅದಿರು, ಚಿನ್ನ ಮತ್ತಿತರ ಖನಿಜಗಳ ನಿಕ್ಷೇಪವನ್ನು ಹೊಂದಿರುವ ರಾಜ್ಯ ಕೈಗಾರಿಕೆ ಮತ್ತು ಆರ್ಥಿಕ ಬೆಳವಣಿಗೆಗೆ ಕಾರಣೀಭೂತವಾಗಿದೆ. ಕ್ವಿನ್ ಸಿಟಿ ಯನ್ನು (ಕರ್ನಾಟಕ ವರ್ಲ್ಡ್ ಇನ್ನೊವೇಷನ್ ನೆಟ್‍ವರ್ಕ್) ಕೃತಕ ಬುದ್ಧಿಮತ್ತೆ, ಅಂತರಿಕ್ಷ, ಕ್ವಾಂಟಮ್ ಕಂಪ್ಯೂಟಿಂಗ್ ಮತ್ತು ಬಯೋಟೆಕ್ ಗಾಗಿಯೇ ಮೀಸಲಿಡಲಾಗಿದೆ ಎಂದರು.

ವಿಶ್ವಮಟ್ಟದ ವೈದ್ಯಕೀಯ ಕೇಂದ್ರವಾಗುವ ಆರೋಗ್ಯ ನಗರ (ಹೆಲ್ತ್ ಸಿಟಿ) ಯನ್ನು ಕರ್ನಾಟಕ ಅಭಿವೃದ್ಧಿಗೊಳಿಸುತ್ತಿದ್ದು, ಜಾಗತಿಕ ಆರೋಗ್ಯ ಅಗತ್ಯಗಳು, ವೈದ್ಯಕೀಯ ಪ್ರವಾಸೋದ್ಯಮ ಮತ್ತು ಸೂಪರ್ ಸ್ಪೆಷಾಲಿಟಿ ಚಿಕಿತ್ಸೆಗಳನ್ನು ಒದಗಿಸಲಿದೆ. ಬೀದರ್ ನಿಂದ ಬೆಂಗಳೂರಿನವರೆಗೆ, ಬೆಳಗಾವಿಯಿಂದ ಬಳ್ಳಾರಿಯವರೆಗೆ ಅಭಿವೃದ್ಧಿ ರಾಜ್ಯದ ಮೂಲೆ ಮೂಲೆಯನ್ನೂ ತಲುಪಲಿದೆ. ಸ್ಥಳೀಯ ಶಕ್ತಿಗೆ ಅನುಸಾರವಾಗಿ ವಿಶೇಷ ಸಮುಚ್ಚಯಗಳನ್ನು ಸೃಜಿಸಿ ಪ್ರತಿ ಭಾಗವೂ ಏಳಿಗೆಹೊಂದುವಂತೆ ಖಾತ್ರಿ ಪಡಿಸಲಾಗುತ್ತಿದೆ ಎಂದರು.
ಹೂಡಿಕೆದಾರರಿಗೆ ಕಾನೂನು ಸುವ್ಯವಸ್ಥೆ ಪಾಲನೆಯನ್ನೂ ಒಳಗೊಂಡು ಸುಭದ್ರವಾದ ಉದ್ಯಮ ಸ್ನೇಹಿ ವಾತಾವರಣ ಕಲ್ಪಿಸಲು ರಾಜ್ಯ ಸರ್ಕಾರವು ಬದ್ಧವಾಗಿದೆ. ಜಾಗತಿಕ ಹೂಡಿಕೆದಾರರ ಸಮಾವೇಶ – ಇನೆವೆಸ್ಟ್ ಕರ್ನಾಟಕ-2025ರಲ್ಲಿ ಆಯೋಜಿಸಿರುವ ನಾವೀನ್ಯತೆಯ ಭವಿಷ್ಯ ಕುರಿತ ವಸ್ತುಪ್ರದರ್ಶನವು ಸುಮಾರು 40ಕ್ಕೂ ಹೆಚ್ಚು ಜಾಗತಿಕ ಕಂಪನಿಗಳು, ಸ್ಟಾರ್ಟ್ ಅಪ್ ಕಂಪನಿಗಳಿಂದ, ಡ್ರೋನ್ ತಂತ್ರಜ್ಞಾನ, ಅಂತರಿಕ್ಷ ತಂತ್ರಜ್ಞಾನ, ಆರೋಗ್ಯ ವಲಯ, ಕೃಷಿ ಹಾಗೂ ಆರೋಗ್ಯ ತಂತ್ರಜ್ಞಾನ ಮತ್ತು ವೈಮಾನಿಕ ಮತ್ತು ರಕ್ಷಣಾ ವಲಯಗಳ ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ಅತ್ಯಾಧುನಿಕ ವಲಯಗಳ ಕುರಿತು ಸ್ವಾಯತ್ತ ಪರಿಹಾರಗಳನ್ನು ಒದಗಿಸುತ್ತಿರುವುದನ್ನು ಬಿಂಬಿಸಲಿದೆ ಎಂದರು.

ನೂತನ ಕೈಗಾರಿಕಾ ನೀತಿ-2025, ನಾವೀನ್ಯತೆ, ಸುಸ್ಥಿರತೆ ಮತ್ತು ಒಳಗೊಳ್ಳುವ ಬೆಳವಣಿಗೆಯನ್ನು ಸೇರಿದಂತೆ ಕರ್ನಾಟಕದ ಮಹತ್ವಾಕಾಂಕ್ಷಿ ದೂರದೃಷ್ಟಿಯನ್ನು ಒತ್ತಿಹೇಳಿದೆ. ಉತ್ಪಾದನಾ ವಲಯದಲ್ಲಿ ಶೇ.12 ರಷ್ಟು ವಾರ್ಷಿಕ ಬೆಳವಣಿಗೆಯ ದರದ ಗುರಿಯನ್ನು ಹೊಂದಿದ್ದು, 2030 ರೊಳಗೆ 7.5 ಲಕ್ಷ ಕೋಟಿ ಹೂಡಿಕೆ ಹಾಗೂ 20 ಲಕ್ಷ ಉದ್ಯೋಗ ಸೃಜನೆಯ ಗುರಿಯನ್ನು ಹೊಂದಿದೆ. ತನ್ನ ಸುಭದ್ರ ನೀತಿಗಳು, ವಿಶ್ವ ಮಟ್ಟದ ಮೂಲಸೌಕರ್ಯ, ಕೌಶಲ್ಯಭರಿತ ಸಂಪನ್ಮೂಲ ಮತ್ತು ಸುಸ್ಥಿರತೆಯ ಮೇಲಿನ ತನ್ನ ಗಮನದಿಂದಾಗಿ ಭವಿಷ್ಯಕ್ಕೆ ಸಿದ್ಧವಾಗಿರುವ ಹೂಡಿಕೆಗಳಿಗೆ ಕರ್ನಾಟಕ ಸೂಕ್ತವಾದ ತಾಣವಾಗಿದೆ. ಬೆಳವಣಿಗೆಯನ್ನು ಉತ್ತೇಜಿಸುವ ಪರಿಸರ ವ್ಯವಸ್ಥೆಯನ್ನು ನಾವು ನಿರ್ಮಿಸುತ್ತಿದ್ದು, ಉದ್ಯೋಗ ಸೃಜನೆ ಮತ್ತು ಜಾಗತಿಕ ಮಹತ್ವಾಕಾಂಕ್ಷೆಯನ್ನು ಬಲಪಡಿಸುತ್ತಿದ್ದೇವೆ ಎಂದರು.

ಡಿಜಿಟಲೀಕರಣಗೊಂಡಿರುವ ನಮ್ಮ ವ್ಯವಸ್ಥೆ, ಸುವ್ಯವಸ್ಥಿತ ಪ್ರಕ್ರಿಯೆಗಳು, ಸದೃಢ ಬೆಂಬಲಿತ ಕಾರ್ಯವಿಧಾನಗಳು ಸರಳೀಕೃತ ವ್ಯವಹಾರವನ್ನು ಖಾತ್ರಿಪಡಿಸುತ್ತವೆ. ಐಟಿ ಉತ್ಪಾದನೆಯಿದ ಹಿಡಿದು, ಡೀಪ್‍ಟೆಕ್ ನಿಂದ ನವೀಕರಿಸಬಹುದಾದ ಇಂಧನದವರೆಗೆ, ಏರೋಸ್ಪೇಸ್ ನಿಂದ ಆರೋಗ್ಯದವರೆಗೆ, ಕರ್ನಾಟಕ ಯಶಸ್ಸನ್ನು ಪೋಷಿಸಲು ಹಾಗೂ ಈ ದಾರಿಯಲ್ಲಿ ಮುನ್ನಡೆಯಲು ಬದ್ಧವಾಗಿದೆ. ಇಲ್ಲಿ ನೆರೆದಿರುವ ಜಾಗತಿಕ ಹೂಡಿಕೆದಾರರಿಗೆ, ನಾನು ಹೇಳುವುದೇನೆಂದರೆ, ಕರ್ನಾಟಕದಲ್ಲಿ ಹೂಡಿಕೆ ಮಾಡಲು ಇದು ಸುಸಮಯ. ನಮ್ಮೊಂದಿಗೆ ಪಾಲುದಾರರಾಗಿ, ನಮ್ಮೊಂದಿಗೆ ಬೆಳೆಯಿರಿ. ಯಶಸ್ಸು ಮತ್ತು ಸಮೃದ್ಧಿಯಲ್ಲಿ ನಾವು ಹೊಸ ಅಧ್ಯಾಯವನ್ನು ಬರೆಯೋಣ. ಅವಕಾಶಗಳಿಗೆ ಮಿತಿಯಿಲ್ಲದ, ಉಜ್ವಲ ಭವಿಷ್ಯವುಳ್ಳ ಕರ್ನಾಟಕದ ಬೆಳವಣಿಗೆಯ ಕಥೆಯಲ್ಲಿ ನಿಮ್ಮನ್ನು ಸ್ವಾಗತಿಸಲು ನಾನು ಎದುರುನೋಡುತ್ತಿದ್ದೇನೆ. ಜಾಗತಿಕ ಹೂಡಿಕೆದಾರರ ಸಮಾವೇಶ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

               

Tags: BangaloreCM SiddaramaiahInvest Karnataka 2025Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಇನ್ವೆಸ್ಟ್‌ ಕರ್ನಾಟಕ 2025ಬೆಂಗಳೂರುಮುಖ್ಯಮಂತ್ರಿ ಸಿದ್ಧರಾಮಯ್ಯ
Previous Post

Karnataka Energy Department Secures ₹3.43 Lakh Crore Investment in Renewable Energy Sector

Next Post

ಸಂಗೀತಾಸಕ್ತ ರಸಿಕ ಮನಸುಗಳ ಬಾಲ್ಯ, ಯೌವನದ ಮಧುರ ಕ್ಷಣಗಳ ನೆನಪಿಸಿದ ಸಂಗೀತ ಸುಧೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಂಗೀತಾಸಕ್ತ ರಸಿಕ ಮನಸುಗಳ ಬಾಲ್ಯ, ಯೌವನದ ಮಧುರ ಕ್ಷಣಗಳ ನೆನಪಿಸಿದ ಸಂಗೀತ ಸುಧೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕ್ ಪೈ ಕಾಲೇಜಿನಲ್ಲಿ ಬಿಎಸ್’ಸಿ ನರ್ಸಿಂಗ್ ಕೋರ್ಸ್’ಗೆ ಪ್ರವೇಶಾತಿ ಆರಂಭ | ಯಾರು ಅರ್ಹರು?

October 24, 2025

ದೆಹಲಿಯಲ್ಲಿ ಭಾರೀ ದಾಳಿಗೆ ಸಂಚು ನಡೆಸಿದ್ದ ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ

October 24, 2025

ಮುರ್ಡೇಶ್ವರ-ಬೆಂಗಳೂರು, ಅಶೋಕಪುರಂ-ಚೆನ್ನೈ ಸೇರಿ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

October 24, 2025

ಗಮನಿಸಿ! ಮೈಸೂರಿನಿಂದ ಹೊರಡುವ-ತಲುಪುವ ಈ ಎಲ್ಲಾ ರೈಲುಗಳ ಸಂಚಾರ ರದ್ದು

October 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕ್ ಪೈ ಕಾಲೇಜಿನಲ್ಲಿ ಬಿಎಸ್’ಸಿ ನರ್ಸಿಂಗ್ ಕೋರ್ಸ್’ಗೆ ಪ್ರವೇಶಾತಿ ಆರಂಭ | ಯಾರು ಅರ್ಹರು?

October 24, 2025

ದೆಹಲಿಯಲ್ಲಿ ಭಾರೀ ದಾಳಿಗೆ ಸಂಚು ನಡೆಸಿದ್ದ ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ

October 24, 2025

ಮುರ್ಡೇಶ್ವರ-ಬೆಂಗಳೂರು, ಅಶೋಕಪುರಂ-ಚೆನ್ನೈ ಸೇರಿ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

October 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!