ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಪ್ರತಿಷ್ಟಿತ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ #JNNCE ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ನರೇಂದ್ರ ಕುಮಾರ್.ಎಸ್ ಮಂಡಿಸಿದ “ಎನ್ಸಿಯೆಂಟ್ ಟೆಂಪಲ್ ಸ್ಟೈಲ್ಸ್ ಕ್ಲಾಸಿಫಿಕೇಶನ್ ಥ್ರೂ ಕಂಪ್ಯೂಟರ್ ವಿಷನ್ ಟೆಕ್ನಿಕ್” ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) #VTU ತನ್ನ 24 ನೇ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ.
Also read: ಮಧ್ಯಮ ವರ್ಗದ ಯುವಕರ ಬದುಕಿನ ಕಥೆಯ ಚಿತ್ರ ಇಂಟರ್ವಲ್ ತೆರೆಗೆ ಬರಲು ಸಜ್ಜು
ದಾವಣಗೆರೆಯ ಯುಬಿಡಿಟಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರಾದ ಡಾ.ಶ್ರೀನಿವಾಸ ನಾಯ್ಕ ಸಿ.ಎಲ್ ಅವರು ಮಾರ್ಗದರ್ಶನ ನೀಡಿದ್ದಾರೆ. ನರೇಂದ್ರ ಕುಮಾರ್ ಅವರಿಗೆ ಎನ್‌ಇಎಸ್ ಆಡಳಿತ ಮಂಡಳಿ ಸದಸ್ಯರು ಹಾಗೂ ಕಾಲೇಜಿನ ಪ್ರಾಂಶುಪಾಲರು, ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post