ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕುವೆಂಪು ವಿಶ್ವವಿದ್ಯಾಲಯದ #Kuvempu University ಔದ್ಯೋಗಿಕ ರಸಾಯನಶಾಸ್ತ್ರ ವಿಷಯದಲ್ಲಿ ವಿನಯ್ ಕುಮಾರ್. ಈ ಇವರು ಪಿಎಚ್‍ಡಿ ಪದವಿಯನ್ನು ಪಡೆದುಕೊಂಡಿದ್ದಾರೆ.
ಇವರು ಫ್ಯಾಬ್ರಿಕೇಷನ್ ಆಫ್ ಮೆಟಲ್ ಆಕ್ಸೈಡ್ ಅಂಡ್ ಸಲ್ಫೈಡ್ ನ್ಯಾನೋ ಪಾರ್ಟಿಕಲ್ಸ್ ಅಂಡ್ ದೇರ್ ಅಪ್ಲಿಕೇಶನ್ಸ್, ಎಂಬ ಮಹಾಪ್ರಬಂಧವನ್ನು ಮಂಡಿಸಿದ್ದರು. ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ. ಅನಿತಾ ರವರ ಮಾರ್ಗದರ್ಶನದಲ್ಲಿ ಮತ್ತು ಕುವೆಂಪು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಪ್ರೊ.. ಬಿ. ಈ. ಕುಮಾರಸ್ವಾಮಿ ರವರ ಸಹಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ್ದರು.
ಇವರು ಶಿವಮೊಗ್ಗ ಜಿಲ್ಲೆಯ, ಭದ್ರಾವತಿ ತಾಲೂಕಿನ, ಮಾರಶೆಟ್ಟಿಹಳ್ಳಿ ಗ್ರಾಮದ ಈಶ್ವರಪ್ಪ ಮತ್ತು ಗಂಗಮ್ಮ ದಂಪತಿಗಳ ಪುತ್ರರಾಗಿದ್ದಾರೆ. ಮುಂದೆ ನಡೆಯಲಿರುವ ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ರಾಜ್ಯಪಾಲರಿಂದ ಪ್ರಮಾಣ ಪತ್ರ ಪಡೆಯಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post