ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ಅಭಿವೃದ್ದಿ ವಿಷಯಗಳ ಕುರಿತು ನಗರಾಭಿವೃದ್ಧಿ ಇಲಾಖೆ ಸಚಿವ ಬೈರತಿ ಸುರೇಶ್ #Minister Byrathi Suresh ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ #Minister Madhu Bangarappa ಇಂದು ಭೇಟಿ ಮಾಡಿ, ವಿವಿಧ ಕಾಮಗಾರಿಗಳಿಗೆ ತಕ್ಷಣ ಹಣ ಬಿಡುಗಡೆಗೊಳಿಸುವಂತೆ ಮನವಿ ಮಾಡಿದರು.
ಶಿವಮೊಗ್ಗ ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅನುದಾನದಲ್ಲಿ ವಿವಿಧ ಅಭಿವೃದ್ದಿ ಕಾರ್ಯಗಳ ಅನುದಾನ ಮಂಜೂರು ಮಾಡುವಂತೆ ಮನವಿ ಮಾಡಿದರು.
Also read: ಆಯುಧಗಳನ್ನು ಬಳಸುವಾಗ ಅಜಾಗರೂಕತೆ ಸಲ್ಲದು: ಸಚಿವ ಮಧು ಬಂಗಾರಪ್ಪ
ಬಹು ಮುಖ್ಯವಾಗಿ ಸುಮಾರು 700 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಹಯೋಗದೊಂದಿಗೆ ಸೊರಬ ತಾಲೂಕಿನ 331 ಗ್ರಾಮಗಳು ಹಾಗೂ ಸೊರಬ, ಶಿರಾಳಕೊಪ್ಪ ಪುರಸಭೆ, ಆನವಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಶರಾವತಿ ನದಿಯಿಂದ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಅನುದಾನ ಮಂಜೂರು ಮಾಡುವಂತೆ ಒತ್ತಾಯಿಸಿದರು.
ಸೊರಬ ಪುರಸಭೆ ವ್ಯಾಪ್ತಿಯಲ್ಲಿ ಸುಮಾರು 135 ಕೋಟಿ ಮೊತ್ತದ ಒಳಚರಂಡಿ ವ್ಯವಸ್ಥೆ ಹಾಗೂ ಆನವಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 85 ಕೋಟಿ ಮೊತ್ತದ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಯೋಜನೆಯನ್ನು ಮಂಜೂರು ಮಾಡುವಂತೆ ಈ ಸಂದರ್ಭದಲ್ಲಿ ಕೋರಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post