ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಮಧ್ಯ ಪ್ರದೇಶದ ಜಬಲಪೂರ ಪೆಹರಾ ಟೋಲ್ ನಾಕಾ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಗೋಕಾಕ್ ನಗರದ ಆರು ಮಂದಿ ಮೃತಪಟ್ಟು, ಇಬ್ಬರ ಸ್ಥಿತಿ ಗಂಭೀರವಾಗಿದೆ.
ಸೋಮವಾರ ಬೆಳಗಿನ ಜಾವ ಫೋರ್ಸ್ ತೂಫಾನ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಬಸ್ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಕುಂಭಮೇಳದಲ್ಲಿ #Kumbhamela ಪುಣ್ಯ ಸ್ನಾನ ಮುಗಿಸಿ ವಾಪಾಸಾಗುವಾಗ ಅಪಘಾತ ಸಂಭವಿಸಿದೆ.
Also read: ಚಾಂಪಿಯನ್ಸ್ ಟ್ರೋಫಿ 2025 | ಪಾಕ್ ಎದುರು ಗೆಲುವಿನ ನಗೆ ಬೀರಿದ ಭಾರತ
ಗೋಕಾಕ್ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ ಗೌಡರ (50), ಸುನೀಲ್ ಶೇಡಶ್ಯಾಳೆ (45), ಬಸವರಾಜ್ ಕುರ್ತಿ (63), ಬಸವರಾಜ್ ದೊಡಮಾಳ್ (49), ಈರಣ್ಣ ಶೇಬಿನಕಟ್ಟಿ (27), ವಿರೂಪಾಕ್ಷ ಗುಮತಿ (61) ಮೃತ ದುರ್ದೈವಿಗಳು. ಗಾಯಗೊಂಡ ಮುಸ್ತಾಕ್ ಶಿಂಧಿಕುರಬೇಟ, ಸದಾಶಿವನನ್ನು ಜಬಲ್ಪುರ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















