ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬಿಜೆಪಿ ಸಂಸದ ತೇಜಸ್ವಿ ಸೂರ್ಯ #BJP MP Tejaswi Surya ಅವರು ಗಾಯಕಿ, ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದ ಪ್ರಸಾದ್ #Shivashri Skanda Prasad ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಇಂದು ಬೆಂಗಳೂರಿನ ಹೆಸರಘಟ್ಟ ಸಮೀಪದ ರೆಸಾರ್ಟ್‌ನಲ್ಲಿ ಮದುವೆ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ವಿ ಸೋಮಣ್ಣ, ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್, ಬಿಜೆಪಿ ಶಾಸಕರು, ಸಂಸದರು, ಹಿಂದೂಪರ ಸಂಘಟನೆ ನಾಯಕರು ಸೇರಿದಂತೆ ಇನ್ನಿತರರು ಭಾಗಿಯಾಗಿ ಶುಭ ಹಾರೈಸಿದರು.

Also read: ಬಾಗಲಕೋಟೆ | ಬಸ್’ನಲ್ಲಿ ಮೊಬೈಲ್ ಕಳೆದುಕೊಂಡ ಮಹಿಳೆ | ಕೇವಲ ಹತ್ತೇ ನಿಮಿಷದಲ್ಲಿ ಪತ್ತೆ ಮಾಡಿದ ಪೊಲೀಸರು
ತೇಜಸ್ವಿ ಸೂರ್ಯ ಅವರ ಪತ್ನಿ ಶಿವಶ್ರೀ ಅವರು ಚೆನ್ನೈ ಮೂಲದ ಹೆಸರಾಂತ ಗಾಯಕಿ, ಭರತನಾಟ್ಯ ಪ್ರವೀಣೆ ಹಾಗೂ ಬಿಟೆಕ್ ಪದವೀಧರೆಯಾಗಿದ್ದಾರೆ. ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಸಂದರ್ಭದಲ್ಲಿ ಪೂಜಿಸಲೆಂದೇ ಹೂಗಳ ತಂದೆ ಹಾಡುವ ಮೂಲಕ ಪ್ರಧಾನಿ ಮೋದಿಯವರ ಮೆಚ್ಚುಗೆಗೆ ಶಿವಶ್ರೀ ಪಾತ್ರರಾಗಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post