ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು #Bangalore University ಡಾ. ಮನಮೋಹನ್ ಸಿಂಗ್ #Dr. Manmohan Singh ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಪ್ರಸಕ್ತ ಸಾಲಿನ ಬಜೆಟ್ ಭಾಷಣದಲ್ಲಿ ಮಾತನಾಡಿದ ಅವರು, ಈ ವಿಶ್ವವಿದ್ಯಾಲಯವನ್ನು ದೇಶದಲ್ಲಿ ಮಾದರಿಯನ್ನಾಗಿಸುವ ಉದ್ದೇಶದಿಂದ, ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ಆð.ಸಿ. ಕಾಲೇಜುಗಳನ್ನು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದಿದ್ದಾರೆ.
ಉನ್ನತ ಶಿಕ್ಷಣಕ್ಕೆ ಸಿಕ್ಕಿದ್ದೇನು?
- ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸಲು ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ (Centre of Excellence) ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶಕ್ಕಾಗಿ ಮುಂದಿನ ನಾಲ್ಕು ವರ್ಷಗಳಲ್ಲಿ ವಿಶ್ವಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ಯೋಜನೆಯನ್ನು ಅನುಷ್ಠಾನ
- ಮಹಿಳಾ ಉನ್ನತ ಶಿಕ್ಷಣದ ಬಲವರ್ಧನೆಗಾಗಿ 31 ಮಹಿಳಾ ಕಾಲೇಜುಗಳನ್ನು ಹಿಂದಿನ ವರ್ಷದಲ್ಲಿ ಉನ್ನತೀಕರಿಸಲು ಕ್ರಮ ಕೈಗೊಂಡಿದ್ದು, ಉಳಿದ 26 ಕಾಲೇಜುಗಳ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು 26 ಕೋಟಿ ರೂ.
- ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್‌ಗಳಲ್ಲಿ ಖಾಲಿಯಿರುವ 2,000 ಬೋಧಕ ಹುದ್ದೆಗಳನ್ನು ಭರ್ತಿ
- ರಾಜ್ಯದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಸಂಸ್ಥೆಗಳು ಹಾಗೂ ಪದವಿ ಕಾಲೇಜುಗಳಿಗೆ ಒಟ್ಟಾರೆ 275 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯ
- ಹೊಸದಾಗಿ ಪ್ರಾರಂಭಿಸಲಾದ ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಿಗೆ 10 ಕೋಟಿ ರೂ. ವೆಚ್ಚದಲ್ಲಿ ಪೀಠೋಪಕರಣಗಳು, ಉಪಕರಣಗಳು, ಕಂಪ್ಯೂಟರ್‌ಗಳು ಹಾಗೂ ಪುಸ್ತಕಗಳನ್ನು ಒದಗಿಸಲಾಗುವುದು
Also read: `ಸಂಜೀವಿನಿ’ ಯೋಜನೆ ಜೊತೆಯಲ್ಲಿ ಪತ್ರಕರ್ತರಿಗೆ ಸಿದ್ದರಾಮಯ್ಯ ಬಜೆಟ್’ನಲ್ಲಿ ಕೊಟ್ಟಿದ್ದೇನು?
- ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರಿಗೆ ಇಂಗ್ಲೆಂಡ್ ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ Chevening Karnataka Masters Fellowship ನೆರವಿನೊಂದಿಗೆ ಒಂದು ವರ್ಷದ ಸ್ನಾತಕೋತ್ತರ ಪದವಿ ಪಡೆಯುವ ಯೋಜನೆ *ರಾಜ್ಯದ 16 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನದಿಂದ ಉದ್ಯೋಗಾರ್ಹತೆಯನ್ನು ಹೆಚ್ಚಿಸಲು ವೃತ್ತಿಪರ ವಿಷಯ ತಜ್ಞರನ್ನು ʻProfessor of Practiceʼ ರನ್ನಾಗಿ ನೇಮಿಸಲು ಉದ್ದೇಶ
- ಉನ್ನತ ಶಿಕ್ಷಣ ಸಂಸ್ಥೆಗಳ ಸಮಗ್ರ ನಿರ್ವಹಣೆಗಾಗಿ ಜಾರಿಮಾಡಿರುವ UUCMS ತಂತ್ರಾಂಶವನ್ನು ಇನ್ನೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಒಟ್ಟಾರೆ 30 ಕೋಟಿ ರೂ. ವೆಚ್ಚದಲ್ಲಿ ಉನ್ನತೀಕರಣ
- ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕ ಕಾಲೇಜನ್ನು 150 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆ
- ಅಜೀಂ ಪ್ರೇಮ್‌ಜೀ ಫೌಂಡೇಶನ್‌ರವರ ಸಹಯೋಗದೊಂದಿಗೆ ಕಾಲೇಜು ಶಿಕ್ಷಣ ಇಲಾಖೆಯ ಎಲ್ಲಾ ಬೋಧಕರಿಗೆ ಬೋಧನೆ ಮತ್ತು ಕಲಿಕೆಯನ್ನು ಉತ್ತಮಪಡಿಸಲು ಮುಂದಿನ ಮೂರು ವರ್ಷದೊಳಗೆ ಪುನರ್ ಮನನ ತರಬೇತಿ
- ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾರುಕಟ್ಟೆ ಆಧಾರಿತ ಕೌಶಲ್ಯ ತರಬೇತಿಗಳನ್ನು ಒದಗಿಸಿ ಉದ್ಯೋಗಕ್ಕೆ ಸಜ್ಜುಗೊಳಿಸಲು ಕೈಗಾರಿಕೆಗಳ ಸಹಭಾಗಿತ್ವದಲ್ಲಿ Internship Program ಹಾಗೂ ವಿಶೇಷ ಕಾರ್ಪೋರೇಟ್ ತರಬೇತಿ ಯೋಜನೆಗಳ ಪ್ರಾರಂಭ
- KKRDB ವತಿಯಿಂದ 23,000 ವಿದ್ಯಾರ್ಥಿಗಳಿಗೆ ವಿಶೇಷ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು 10 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭ
- ಪ್ರೊ. ನಂಜುಂಡ ಸ್ವಾಮಿ ಸಂಶೋಧನಾ ಪೀಠವನ್ನು ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರಾರಂಭ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post