ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಿರೀಕ್ಷೆಯಂತೆಯೇ ರಾಜ್ಯ ಬಜೆಟ್’ನಲ್ಲಿ #State Budget ಸಿಎಂ ಸಿದ್ದರಾಮಯ್ಯ #CM Siddaramaiah ಅವರು ಅಲ್ಪ ಸಂಖ್ಯಾತ ಸಮುದಾಯಕ್ಕೆ ಅದರಲ್ಲೂ, ಮುಸ್ಲಿಂ ಸಮುದಾಯಕ್ಕೆ ಭರಪೂರ ಕೊಡುಗೆ ನೀಡಿದ್ದಾರೆ.
ಅಲ್ಪ ಸಂಖ್ಯಾತರ ಸಮುದಾಯಕ್ಕೆ ಅದರಲ್ಲೂ ವಿಶೇಷವಾಗಿ ಮುಸ್ಲಿಂ ಸಮುದಾಯಕ್ಕೆ ಸಾಲುಸಾಲು ಅನುದಾನ ಹಾಗೂ ಯೋಜನೆಯನ್ನು ಘೋಷಣೆ ಮಾಡಿದ್ದಾರೆ.

ರಾಜ್ಯದಲ್ಲಿರುವ 250 ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ ಹಂತ ಹಂತವಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳ ಮಾದರಿಯಲ್ಲಿ ಪೂರ್ವ ಪ್ರಾಥಮಿಕ ಹಂತದಿಂದ ಪಿಯುವರೆಗೂ ತರಗತಿಗಳ ಆರಂಭ. ಇದಕ್ಕಾಗಿ ಒಟ್ಟಾರೆ 500 ಕೋಟಿ ರೂ. ವೆಚ್ಚದಲ್ಲಿ ಯೋಜನೆ ರೂಪಿಸಲಿದ್ದು, ಪ್ರಸಕ್ತ ವರ್ಷದಲ್ಲಿ 100 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಶಾಲಾ ಶಿP್ಷÀಣ ಇಲಾಖೆಯ ಸಹಯೋಗದೊಂದಿಗೆ ಈ ಕಾರ್ಯಕ್ರಮ ಅನುಷ್ಠಾನ

ಮದರಸಾಗಳಲ್ಲಿ ಧಾರ್ಮಿಕ ಶಿಕ್ಷಣದೊಂದಿಗೆ ಔಪಚಾರಿಕ ಶಿಕ್ಷಣವನ್ನು ನೀಡಲು ಕಂಪ್ಯೂಟರ್, ಸ್ಮಾರ್ಟ್ ಬೋರ್ಡ್ ಇತ್ಯಾದಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ, ಈ ವಿದ್ಯಾರ್ಥಿಗಳು ಎನ್’ಐಒಎಸ್ ಮೂಲಕ ಎಸ್’ಎಸ್’ಎಲ್’ಸಿ ಪರೀಕ್ಷೆ ಬರೆಯಲು ಅವಕಾಶವಾಗುವಂತೆ ಸಜ್ಜು
ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವತಿಯಿಂದ ಯುವಕ/ಯುವತಿಯರಿಗೆ ನವೋದ್ಯಮಗಳನ್ನು ಪ್ರಾರಂಭಿಸಲು ಉತ್ತೇಜನ ನೀಡಲಾಗುವುದು. ವಕ್ಫ್ ಸಂಸ್ಥೆಗಳ ದುರಸ್ತಿ, ಜೀರ್ಣೋದ್ಧಾರ ಮತ್ತು ಖಬರಸ್ತಾನಗಳಲ್ಲಿ ಮೂಲಸೌಕರ್ಯಕ್ಕಾಗಿ ಹಾಗೂ ಆಸ್ತಿಗಳ ಸಂರಕ್ಷಣೆಗಾಗಿ 150 ಕೋಟಿ ರೂ. ಅನುದಾನ

ಪದವಿ ಶಿಕ್ಷಣದಿಂದ ವಂಚಿತರಾಗುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬೆಂಗಳೂರಿನ ಹಜ್ ಭವನದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರ ತೆರೆದು, ವಿವಿಧ ಪದವಿ/ಸ್ನಾತಕೋತ್ತರ ಪದವಿ ಶಿಕ್ಷಣಕ್ಕೆ ಸಹಕಾರ
ಅಲ್ಪಸಂಖ್ಯಾತರ 169 ವಸತಿ ಶಾಲೆ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 25,000 ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ
Also read: ತೊಗರಿ ಬೆಳೆಗಾರರಿಗೆ ಗುಡ್ ನ್ಯೂಸ್ | ಕಲ್ಯಾಣ ಕರ್ನಾಟಕಕ್ಕೆ ಗಿಫ್ಟ್ | ಬೆಂಗಳೂರಿನಲ್ಲಿ ಸ್ಯಾಟಲೈಟ್ ಮಾರ್ಕೆಟ್
ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50,000 ರೂ. ಅನುದಾನ
ಹಜ್ ಯಾತ್ರಿಕರು ಹಾಗೂ ಅವರ ಸಂಬಂಧಿಕರಿಗೆ ಅಗತ್ಯ ಸೌಲಭ್ಯ ಮತ್ತು ಸೌಕರ್ಯಗಳನ್ನು ಒದಗಿಸಲು ಬೆಂಗಳೂರಿನ ಹಜ್ ಭವನದಲ್ಲಿ ಹೆಚ್ಚುವರಿ ಕಟ್ಟಡವನ್ನು ನಿರ್ಮಾಣ

ಅಲ್ಪಸಂಖ್ಯಾತರ ಸಮುದಾಯದವರಿಗೆ ಸಾಂಸ್ಕೃತಿಕ ಮತ್ತು ಸಾಮಾಜಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಹೋಬಳಿ ಮತ್ತು ತಾಲೂಕು ಮಟ್ಟದಲ್ಲಿ 50 ಲಕ್ಷ ರೂ. ಹಾಗೂ ಜಿಲ್ಲೆ ಮತ್ತು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ಬಹುಪಯೋಗಿ ಭವನಗಳ ನಿರ್ಮಾಣ
ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಪ್ರದೇಶಗಳಲ್ಲಿರುವ ಐಟಿಐಗಳಲ್ಲಿ ಹೊಸ ಕೋರ್ಸ್’ಗಳನ್ನು ಹಾಗೂ ಹೆಚ್ಚುವರಿ ತರಗತಿ ಪ್ರಾರಂಭ
ಓಉಅ ಮುಖಾಂತರ ವೃತ್ತಿಪರ ಕೋರ್ಸ್’ಗಳಲ್ಲಿ ಪ್ರವೇಶ ಪಡೆಯುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಐದು ಲಕ್ಷ ರೂ.ಗಳಿಗೆ ಸೀಮಿತಗೊಳಿಸಿ ಶುಲ್ಕದಲ್ಲಿ ಶೇ.50 ರಷ್ಟನ್ನು ಮರುಪಾವತಿ
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ರಾಷ್ಟಿçÃಯ ವಿದೇಶಿ ವಿದ್ಯಾರ್ಥಿ ವೇತನವನ್ನು 20 ಲP್ಷÀ ರೂ.ಗಳಿಂದ 30 ಲಕ್ಷ ರೂ.ಗಳಿಗೆ ಹೆಚ್ಚಳ
ಉಳ್ಳಾಲದಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿನಿಯರಿಗಾಗಿ ವಸತಿ ಸಹಿತ ಪಿಯು ಕಾಲೇಜು ಸ್ಥಾಪನೆ
ಜೈನ ಅರ್ಚಕರು, ಸಿಖ್ಖ್ ಮುಖ್ಯಗ್ರಂಥಿಗಳು, ಮಸೀದಿಗಳ ಪೇಷ್ ಇಮಾಮ್ ಗಳಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು 6,000 ರೂ. ಗಳಿಗೆ ಹೆಚ್ಚಿಸಲಾಗುವುದು. ಸಿಖ್ಖ್ ಸಹಾಯಕ ಗ್ರಂಥಿಗಳು ಹಾಗೂ ಮೋಝಿನ್ ಗಳಿಗೆ ನೀಡುವ ಮಾಸಿಕ ಗೌರವಧನವನ್ನು 5,000 ರೂ.ಗಳಿಗೆ ಹೆಚ್ಚಳ

- ಸರ್ಕಾರಿ ಗುತ್ತಿಗೆಗಳಲ್ಲಿ 2 ಕೋಟಿ ರೂ.ವರೆಗೂ ಮುಸ್ಲಿಮರಿಗೆ ಮೀಸಲಾತಿ
- ಕೈಗಾರಿಕೆಗಳ ಸ್ಥಾಪನೆಯಲ್ಲೂ ಸಹ ಮೀಸಲಾತಿ
- ಕೆ ಐಎಡಿಬಿ ಭೂಮಿ ಹಂಚಿಕೆಯಲ್ಲೂ ಸಹ ಮುಸ್ಲಿಮರಿಗೆ ಶೇ.20ರಷ್ಟು ಮೀಸಲಾತಿ
- ರಾಜ್ಯದ ಖಬರಸ್ಥಾನ ಅಭಿವೃದ್ಧಿ, ಮೂಲಸೌಕರ್ಯಕ್ಕೆ 150 ಕೋಟಿ ರೂ. ಅನುದಾನ ಮೀಸಲು
- ಹಜ್ ಭವನ ನಿರ್ಮಾಣಕ್ಕೆ ಅನುದಾನ ಘೋಷಣೆ
- ಖಾಲಿ ಇರುವ ವಕ್ಫ್ ನಿವೇಶನದಲ್ಲಿ ಒಟ್ಟು 16 ಮಹಿಳಾ ಕಾಲೇಜು ಸ್ಥಾಪನೆ
- 100 ಉರ್ದು ಕಾಲೇಜುಗಳಿಗೆ ಹೈಟೆಕ್ ಸ್ಪರ್ಶ
- ಅಲ್ಪ ಸಂಖ್ಯಾತರು ಹೆಚ್ಚಿರುವ ಕಡೆಗಳಲ್ಲಿ ಐಟಿಐ ಸ್ಥಾಪನೆ
- ಉಳ್ಳಾಲದಲ್ಲಿ ಅಲ್ಪ ಸಂಖ್ಯಾತ ವಿದ್ಯಾರ್ಥಿನಿಯರಿಂಗ್ ಕಾಲೇಜು ಸ್ಥಾಪನೆ
- ಬೆಂಗಳೂರಿನಲ್ಲಿ ಹಜ್ ಭವನದಲ್ಲಿ ಹೆಚ್ಚುವರಿ ಕಟ್ಟಡ ನಿರ್ಮಾಣ
- ಅಲ್ಪಸಂಖ್ಯಾತರಿಗೆ 169 ವಿದ್ಯಾರ್ಥಿನಿಲಯ ನಿರ್ಮಾಣ
- 25 ಸಾವಿರ ವಿದ್ಯಾರ್ಥಿನಿಯವರಿಗೆ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ
- ಅಲ್ಪಸಂಖ್ಯಾತರ ಸರಳ ವಿವಾಹಕ್ಕೆ 50 ಸಾವಿರ ಪ್ರೋತ್ಸಾಹಧನ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post