No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹಾಸನ

ಹಾಸನ | ಪೂಜಾ ರಘುನಂದನ್ ‘ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯಪ್ರಶಸ್ತಿ’ಗೆ ಭಾಜನ

kalpa News by kalpa News
March 7, 2025
in ಹಾಸನ
0
ಹಾಸನ | ಪೂಜಾ ರಘುನಂದನ್ ‘ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯಪ್ರಶಸ್ತಿ’ಗೆ ಭಾಜನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹಾಸನ  |

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ರಾಜ್ಯ ಸರ್ಕಾರ ಕೊಡಮಾಡುವ ಪ್ರತಿಷ್ಠಿತ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಹಾಸನದ ಖ್ಯಾತ ಕಲಾವಿದೆ, ಪತ್ರಕರ್ತೆ ಪೂಜಾ ರಘುನಂದನ್ ಅವರು ಕಲಾಕ್ಷೇತ್ರದಿಂದ ಭಾಜನರಾಗಿದ್ದಾರೆ.

ಮಾರ್ಚ್ 8ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

Also Read>> ತೀರ್ಥಹಳ್ಳಿ | ಕಾರುಗಳ ಸರಣಿ ಅಪಘಾತ | ಕೂದಲೆಳೆ ಅಂತರದಲ್ಲಿ ಹರಿಹರಪುರ ಶ್ರೀಗಳು ಪಾರು
ಕುಂದಾನಗರಿ ಬೆಳಗಾವಿಯಲ್ಲಿ ಜನಿಸಿದ ಪೂಜಾ, ಬಾಲ್ಯದಿಂದಲೇ ಕ್ರೀಡಾಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದು, ರಾಜ್ಯ ಹಾಗೂ ರಾಷ್ಟ್ರಮಟ್ಟದ ಈಜು ಸ್ಪರ್ಧೆಗಳಲ್ಲಿ ಭಾಗವಹಿಸಿ ಅನೇಕ ಪದಕಗಳನ್ನು ಪಡೆಯುವ ಬೆಳಗಾವಿಗೆ ಕೀರ್ತಿ ತಂದಿದ್ದರು. ವಿವಾಹನಂತರ ಹಾಸನದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಕ್ರಿಯಾಶೀಲರಾದರು. ರಂಗಭೂಮಿ, ಸಮಾಜ ಸೇವೆ, ಪತ್ರಿಕಾರಂಗ, ಮಾಡಲಿಂಗ್, ಸಾಹಿತ್ಯ, ಸಂಗೀತ, ಸಂಘಟನೆ, ಆರೋಗ್ಯ, ಶಿಕ್ಷಣ, ಹೀಗೆ ಎಲ್ಲಾ ಕ್ಷೇತ್ರದಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಪೂಜಾ ರಘುನಂದನ್ ಬಹುಮುಖ ಪ್ರತಿಭೆ ಎನಿಸಿಕೊಂಡಿದ್ದಾರೆ.
ಒಂದು ದಶಕದಿಂದ ರಂಗಭೂಮಿ ಕಲಾವಿದೆಯಾಗಿ, ತಂತ್ರಜ್ಞರಾಗಿ, ಸಂಘಟಕಿಯಾಗಿ ರಂಗಭೂಮಿ ಕ್ಷೇತ್ರಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ರಾಜ್ಯದ ಅನೇಕ ಪ್ರತಿಷ್ಠಿತ ವೇದಿಕೆಗಳಲ್ಲಿ ಕಾರ್ಯಕ್ರಮ ನೀಡಿರುವ ಇವರು, ರಂಗ ಹೃದಯ ಎಂಬ ತಂಡದೊಂದಿಗೆ ಸಾಮಾಜಿಕ ಹಾಗೂ ಐತಿಹಾಸಿಕ ನಾಟಕಗಳಲ್ಲಿ ನಾಯಕಿಯಾಗಿ ಮತ್ತು ಪೋಷಕ ಪಾತ್ರದಲ್ಲಿ ಅಭಿನಯ ಮಾಡಿದ್ದಾರೆ. ಮಕ್ಕಳ ರಂಗಭೂಮಿಯ ಕಡೆಗೆ ಆಕರ್ಷಿತರಾದ ಇವರು ಹಾಸನದಲ್ಲಿ ಪ್ರಪ್ರಥಮ ಬಾರಿಗೆ ಕುಣಿಯೋಣು ಬಾರ ಎಂಬ ಮಕ್ಕಳ ರಂಗ ಶಿಬಿರವನ್ನು ಆರಂಭಿಸಿ, ಅದರ ನಿರ್ದೇಶಕರಾಗಿ ಯಶಸ್ವಿಯಾಗಿ ಮುನ್ನೆಡೆಸುತ್ತಿದ್ದಾರೆ.Also Read>> ಸಿದ್ದರಾಮಯ್ಯ ಬಜೆಟ್ | ಶಿವಮೊಗ್ಗ ಸೇರಿ ಮಲೆನಾಡಿಗೆ ಏನೆಲ್ಲಾ ದೊರಕಿತು? ಇಲ್ಲಿದೆ ವಿವರ

ಭಾರತ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಖಾತೆಯ ವ್ಯಾಪ್ತಿಯಲ್ಲಿನ ಸೆನ್ಸಾರ್ ಬೋರ್ಡ್ ನ ಪ್ಯಾನೆಲ್ ಅಡೈಸರ್ ಸದಸ್ಯರಾಗಿ 2 ವರ್ಷ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಸ್ಮಶಾನ ಕಾಯುವ ಕಾರ್ಯ ಮಾಡುತ್ತಿರುವ ಮಹಿಳೆಯ ಜೀವನ ಕಥನಾಧಾರಿತ ಕೊನೆಯ ನಿಲ್ದಾಣ ಚಿತ್ರದ ನಾಯಕಿಯಾಗಿ ಅಭಿನಯಿಸಿ, ಚಿತ್ರರಸಿಕರ ಮನಸೂರೆಗೊಂಡಿದ್ದಾರೆ. ಸುಮಾರು 10ಕ್ಕೂ ಹೆಚ್ಚು ಕಲಾತ್ಮಕ ಚಿತ್ರಗಳಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ.
ಕೆ. ಸುಚೇಂದ್ರ ಪ್ರಸಾದ್ ಅಭಿನಯದ ಒಂದಾನೊಂದು ಕಾಲದಾಗ ಚಿತ್ರದಲ್ಲಿ ನಾಯಕಿಯಾಗಿ ಉತ್ತಮ ಅಭಿನಯ ನೀಡಿದ್ದು, ಇದು ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲೂ ಪ್ರದರ್ಶನ ಕಂಡಿದೆ. pr special ಯೂಟ್ಯೂಬ್ ಚಾನೆಲ್ ಮೂಲಕ ಹಾಸನದ ಅನೇಕ ಹೊಸ ಪ್ರತಿಭೆಗಳಿಗೆ ವೇದಿಕೆಯನ್ನು ಕಲ್ಪಿಸಿದ್ದಾರೆ. ಪರಿದೃಶ್ಯ ಅಂತಾರಾಷ್ಟ್ರೀಯ ಚಿತ್ರೋತ್ಸವವದ ಜ್ಯೂರಿಯಾಗಿ ಭಾಗವಹಿಸಿರುವ ಇವರು, ದೂರದರ್ಶನ ಚಂದನದ ವಿಜ್ಞಾನ ವಿಸ್ಮಯ ಸರಣಿ ಕಾರ್ಯಕ್ರಮಕ್ಕೆ ಧ್ವನಿದಾನ ಕಲಾವಿದೆಯಾಗಿ ನಾಡಿನಾದ್ಯಂತ ಖ್ಯಾತರಾಗಿದ್ದಾರೆ.

Also Read>> ಅಲ್ಪಸಂಖ್ಯಾತರಿಗೆ ಬಜೆಟ್’ನಲ್ಲಿ ಭರಪೂರ ಕೊಡುಗೆ | ಮುಸ್ಲಿಮರಿಗೆ ಸಿಂಹಪಾಲು ಕೊಟ್ಟ ಸಿದ್ದರಾಮಯ್ಯ
ಇನ್ನು ಸಮಾಜಸೇವೆಯಲ್ಲಿ ರೋಟರಿ ಕ್ಲಬ್ ಅಧ್ಯಕ್ಷೆಯಾಗಿ ಹಲವಾರು ಗಮನಾರ್ಹ ಕೆಲಸಗಳನ್ನು ಮಾಡಿದ್ದಾರಲ್ಲದೇ ಅನೇಕ ಸಮಾಜ ಸೇವಾ ಸಂಘಟನೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಾ ಸಮಾಜಮುಖಿಯಾಗಿದ್ದಾರೆ. ಇವರಿಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಭೇಟಿ, ಸಂವಾದದ ಅವಕಾಶ ದೊರೆತಿರುವುದು ಅತ್ಯಂತ ವಿಶೇಷವಾಗಿದೆ. ಕಲಾ ಸೇವೆಗಾಗಿ ಹಾಸನ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹತ್ತಾರು ಪ್ರತಿಷ್ಠಿತ ಪ್ರಶಸ್ತಿ ಸನ್ಮಾನಗಳು ಇವರಿಗೆ ಒಲಿದುಬಂದಿದೆ.

ಪ್ರಸ್ತುತ ಜಿಲ್ಲಾ ಆರೋಗ್ಯ ಸಮಿತಿಯ ಜಿಲ್ಲಾ ಸದಸ್ಯರಾಗಿ ಭ್ರೂಣಲಿಂಗ ಪತ್ತೆ ತಡೆಯುವಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಇನ್ನರ್ ವೀಲ್ ಸಂಸ್ಥೆಯಲ್ಲಿ ಗೌರವ ಸದಸ್ಯೆಯಾಗಿ, ಸ್ಥಳೀಯ ದೈನಿಕ ಹೊಯ್ಸಳಪಥ ಪತ್ರಿಕಾ ಸಂಪಾದಕಿಯಾಗಿ, ಶ್ರೀವಿದ್ಯಾ ಪ್ರತಿಷ್ಠಾನದ ಅಧ್ಯಕ್ಷೆಯಾಗಿ, ರಂಗಹೃದಯ ತಂಡದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕುಟುಂಬ, ಸಾಂಸ್ಕೃತಿಕ ಲೋಕ ಹಾಗೂ ಸಮಾಜ ಸೇವೆ ಇದೆಲ್ಲವನ್ನೂ ಯಶಸ್ವಿಯಾಗಿ ನಿಭಾಯಿಸುತ್ತಾ ನಾಡಿನಾದ್ಯಂತ ಹೆಸರು ಮಾಡಿತ್ತಿರುವುದು ಪೂಜಾ ರಘುನಂದನ್ ಅವರ ವಿಶೇಷವಾಗಿದೆ.

ವಿಶಿಷ್ಟ ಪ್ರಯೋಗ ತಾಯಿಯಾಗುವುದೆಂದರೆ
ತಮ್ಮ ಜೀವನದ ಏರಿಳಿತಗಳ ನಿಜ ಕಥೆಯನ್ನು ಆಧರಿಸಿದ ತಾಯಿಯಾಗುವುದೆಂದರೆ ಎಂಬ ಏಕವ್ಯಕ್ತಿ ರಂಗ ಪ್ರಯೋಗವನ್ನು ನಾಡಿನ ಖ್ಯಾತ ನಿರ್ದೇಶಕ ಕೃಷ್ಣಮೂರ್ತಿ ಕವತ್ತಾರ್ ನಿರ್ದೇಶನದಲ್ಲಿ ಯಶಸ್ವಿಯಾಗಿ ರಂಗಕ್ಕೆ ತಂದಿದ್ದು, ಇದು ಈಗಾಗಲೇ ರಾಜ್ಯಾದ್ಯಂತ 29 ಪ್ರಯೋಗಗಳನ್ನು ಕಂಡಿದೆ.ಕಾನೂನಾತ್ಮಕವಾಗಿ ಮಕ್ಕಳನ್ನು ದತ್ತು ಪ್ರಕ್ರಿಯೆ ಕುರಿತ ಈ ಪ್ರಯೋಗದಿಂದ ಸ್ಫೂರ್ತಿಗೊಂಡ ಹಲವರು ಮಕ್ಕಳನ್ನು ದತ್ತು ಪಡೆಯುವ ಪ್ರಕ್ರಿಯೆಗೆ ಮುಂದಾಗಿದ್ದಾರೆ ಎಂಬುದು ಗಮನಾರ್ಹ. ಈ ರಂಗಪ್ರಯೂಗ ರಾಜ್ಯದ ಪ್ರಮುಖ ರಂಗಕರ್ಮಿಗಳು, ಕಲಾವಿದರು ಹಾಗೂ ಕಲಾಭಿಮಾನಿಗಳಿಂದ ಪ್ರಶಂಸೆ ಪಡೆದಿದ್ದು, ಈ ರಂಗ ಪ್ರಯೋಗದಿಂದ ಬಂದಂತ ಹಣವನ್ನು ಕ್ಯಾನ್ಸರ್ ರೋಗಿಗಳಗೆ ಸಹಾಯಧನ, ಶಾಲೆ ನವೀಕರಣಕ್ಕೆ ಸಹಾಯ ಸೇರಿದಂತೆ ವಿವಿಧ ಜನಪರ ಕಾರ್ಯಕ್ಕೆ ನೀಡುತ್ತಿರುವುದು ಪೂಜಾ ಅವರ ರಂಗ ಹಾಗೂ ಸಾಮಾಜಿಕ ಬದ್ದತೆಯಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: ActressHassanInternational Women's DayJournalistKannada News WebsiteKitturu Rani Chennamma AwardLatest News KannadaPooja Raghunandanಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಕಲಾವಿದೆಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಪತ್ರಿಕಾರಂಗಪೂಜಾ ರಘುನಂದನ್ಬೆಳಗಾವಿರಂಗಭೂಮಿಸಾಹಿತ್ಯಸಿದ್ದರಾಮಯ್ಯಹಾಸನ
Share202Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ತೀರ್ಥಹಳ್ಳಿ | ಕಾರುಗಳ ಸರಣಿ ಅಪಘಾತ | ಕೂದಲೆಳೆ ಅಂತರದಲ್ಲಿ ಹರಿಹರಪುರ ಶ್ರೀಗಳು ಪಾರು

Next Post

ಬೆಂಗಳೂರು ವಿವಿ ಮರುನಾಮಕರಣ ಓಕೆ-ವಿವಿಗಳ ಪುನರ್ ವಿಲೀನದ ಬಗ್ಗೆ ಸ್ಪಷ್ಠತೆ ನೀಡಿಲ್ಲ ಏಕೆ?

kalpa News

kalpa News

Next Post
ಬೆಂಗಳೂರು ವಿವಿ ಮರುನಾಮಕರಣ ಓಕೆ-ವಿವಿಗಳ ಪುನರ್ ವಿಲೀನದ ಬಗ್ಗೆ ಸ್ಪಷ್ಠತೆ ನೀಡಿಲ್ಲ ಏಕೆ?

ಬೆಂಗಳೂರು ವಿವಿ ಮರುನಾಮಕರಣ ಓಕೆ-ವಿವಿಗಳ ಪುನರ್ ವಿಲೀನದ ಬಗ್ಗೆ ಸ್ಪಷ್ಠತೆ ನೀಡಿಲ್ಲ ಏಕೆ?

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL