ಕಲ್ಪ ಮೀಡಿಯಾ ಹೌಸ್ | ಉಡುಪಿ |
ಚಲಿಸುತ್ತಿದ್ದ ಬಸ್ ಸ್ಟೇರಿಂಗ್ ಕಟ್ಟಾಗಿರುವ #Steeing Cut ಘಟನೆ ಉಡುಪಿ ಕರಾವಳಿ ಬೈಪಾಸ್‌ನಲ್ಲಿ ಸಂಭವಿಸಿದ್ದು, ಸ್ಟೇರಿಂಗ್ ವೈಫಲ್ಯದಿಂದಾಗಿ ಬಸ್ಸು ಇದ್ದಕ್ಕಿದ್ದಂತೆ ನಿಂತಿದ್ದರಿಂದ ಕೆಲಕಾಲ ಕರಾವಳಿ ಬೈಪಾಸ್‌ನಲ್ಲಿ ಸಂಚಾರ ದಟ್ಟಣೆ ಉಂಟಾಯಿತು.
ಉಡುಪಿಯಿಂದ ಬ್ರಹ್ಮಾವರದ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸಿನ ಸ್ಟೇರಿಂಗ್ ಇದ್ದಕ್ಕಿದ್ದಂತೆ ಕೈಕೊಟ್ಟಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆಯ ಬದಿಯಲ್ಲಿ ಚಲಿಸಿ ನಿಂತಿದೆ. ಘಟನೆಯಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟಗಾಯಗಳೊಂದಿಗೆ ಪ್ರಾಣಪಾಯದಿಂದ ಪಾರಾಗಿದ್ದಾರೆ.
Also read: ಮಾ. 9ರಂದು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ದಾಸವಾಣಿ ಕಾರ್ಯಕ್ರಮ
ಘಟನಾ ಸ್ಥಳಕ್ಕೆ ಧಾವಿಸಿದ ಉಡುಪಿ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಸಂಚಾರವನ್ನು ಸುಗಮಗೊಳಿಸಿದರು. ಸ್ಟೇರಿಂಗ್ ವೈಫಲ್ಯದ ಕಾರಣ ಇನ್ನೂ ತಿಳಿದುಬಂದಿಲ್ಲ. ಬಸ್ಸನ್ನು ಪರಿಶೀಲನೆಗಾಗಿ ಕಳುಹಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















