ಕಲ್ಪ ಮೀಡಿಯಾ ಹೌಸ್ | ಕೋಲಾರ |
ಎರಡು ಖಾಸಗಿ ಬಸ್‌ಗಳ ನಡುವೆ ಅಪಘಾತ #Accident ಸಂಭವಿಸಿದ ಪರಿಣಾಮ ಬಸ್‌ನಲ್ಲಿದ್ದ ಓರ್ವ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ಶ್ರೀನಿವಾಸಪುರ ತಾಲೂಕು ಗುಂಟಪಲ್ಲಿ ಕ್ರಾಸ್ ಬಳಿ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










ಗಾಯಗೊಂಡವರನ್ನು ಆಂದ್ರಪ್ರದೇಶದ ಮದನಪಲ್ಲಿ ಹಾಗೂ ಕೋಲಾರ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ರಾಯಲ್ಪಾಡು ಪೊಲೀಸರು ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.










