No Result
View All Result
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?
English Articles

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

by ಕಲ್ಪ ನ್ಯೂಸ್
March 5, 2026
0

Kalpa Media House  |  Bengaluru | Zee Kannada, which continues to entertain audiences with fresh and engaging content and has...

Read moreDetails

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
  • Advertise With Us
  • Grievances
  • About Us
  • Contact Us
Friday, March 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ನಗರದೆಲ್ಲೆಡೆ ಹೋಳಿ ಸಂಭ್ರಮ

ರಾಷ್ಟ್ರಭಕ್ತರ ಬಳಗದೊಂದಿಗೆ ಮಾಜಿ ಡಿಸಿಎಂ ಈಶ್ವರಪ್ಪ ಕುಟುಂಬ ಹೋಳಿ ಆಚರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 15, 2025
in ಶಿವಮೊಗ್ಗ
0
ಶಿವಮೊಗ್ಗ | ನಗರದೆಲ್ಲೆಡೆ ಹೋಳಿ ಸಂಭ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದೆಲ್ಲೆಡೆ ಇಂದು ಹೋಳಿ #Holi ಹಬ್ಬದ ಸಂಭ್ರಮ ಕಂಡುಬಂದಿತು. ಮೈ ತುಂಬ ಬಣ್ಣ ಬಳಿದುಕೊಂಡ ಯುವಕ, ಯುವತಿಯರು ಪರಸ್ಪರ ಬಣ್ಣ ಎರಚುತ್ತ ಸಂಭ್ರಮದಲ್ಲಿ ಮಿಂದೆದ್ದರು.

ಹೋಳಿ ಹಬ್ಬದ ಅಂಗವಾಗಿ ಚಿಣ್ಣರು, ಯುವಕರು, ಯುವತಿಯರು ಹಾಗೂ ನಾಗರಿಕರು ಪರಸ್ಪರ ಬಣ್ಣ ಹಚ್ಚುವ ಮೂಲಕ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.
ಭ್ರಾತೃತ್ವದ ಕೊಂಡಿ ಬೆಸೆಯುವ ಹಬ್ಬಗಳಲ್ಲಿ ಒಂದಾದ ಹೋಳಿ ಹಬ್ಬ ನಗರದ ಜನತೆಯ ಮನಸ್ಸನ್ನು ಓಕುಳಿಯಲ್ಲಿ ತೇಲಿಸಿತು. ಹಿರಿಯರು ಕಿರಿಯರೆನ್ನದೆ, ಜಾತಿ ಭೇದ-ಭಾವ ಮರೆತು ಭಾವೈಕ್ಯದಿಂದ ಕೂಡಿ ಬಣ್ಣದ ಜಗತ್ತಿನಲ್ಲಿ ಮಿಂದೆದ್ದರು.

ಶಿವಮೊಗ್ಗ ನಗರದ ಗಾಂಧಿ ಬಜಾರ್, ದುರ್ಗಿಗುಡಿ, ವಿನೋಬನಗರ, ಕೋಟೆ ರಸ್ತೆ, ಶರಾವತಿ ನಗರ, ಹೊಸಮನೆ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಪರಸ್ಪರ ಬಣ್ಣ ಎರಚುವ ಮೂಲಕ ಹೋಳಿಯನ್ನು ಸಡಗರದಿಂದ ಆಚರಿಸಿದರು.

Also read: ಗಮನಿಸಿ! ಮಾರ್ಚ್ 17ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಗಾಂಧಿಬಜಾರ್, ರವಿವರ್ಮ ಬೀದಿ, ಕುಂಬಾರ ಬೀದಿ ಸೇರಿದಂತೆ ಹಲವೆಡೆ ಮನ್ಮಥನನ್ನು ಪ್ರತಿಷ್ಠಾಪಿಸಲಾಗಿತ್ತು. ಗುರುವಾರ ಮಧ್ಯಾಹ್ನ ಕಾಮ ದಹನ ಮೂಲಕ ಹಬ್ಬಕ್ಕೆ ತೆರೆ ಎಳೆಯಲಾಯಿತು.

ಪೊಲೀಸರ ಕಟ್ಟೆಚ್ಚರದ ನಡುವೆಯೂ ಯುವಕ, ಯುವತಿಯರು ಜೋರಾಗಿ ಕೂಗತ್ತಾ, ಬೈಕ್ ರೈಡ್ ನಡೆಸುತ್ತಾ ಸಾಗುತ್ತಿರುವುದು ಸಾಮಾನ್ಯವಾಗಿತ್ತು. ಕೆಲವು ಕಡೆ ಗುಂಪುಗುಂಪಾಗಿ ಮಡಕೆ ಒಡೆಯುವುದು, ಹಾಡು ಹಾಕಿಕೊಂಡು ಡ್ಯಾನ್ಸ್ ಮಾಡುವುದು ಕಂಡುಬಂತು. ಪುಟ್ಟ ಮಕ್ಕಳು ಪರಸ್ಪರ ಬಣ್ಣದ ನೀರು ಎರಚಿ, ಬಣ್ಣದಲ್ಲಿ ಹಾಕಿ ಹೋಳಿಯಲ್ಲಿ ಮಿಂದೆದ್ದರು.
ಶಿವಮೊಗ್ಗದ ಗೋಪಿ ವೃತ್ತದಲ್ಲಿ  ಕೇಸರಿ ಅಲಂಕಾರ ಸಮಿತಿ ವತಿಯಿಂದ ಹೋಳಿ ಹಬ್ಬದ ಪಯುಕ್ತ ಡಿಜೆ, ನೃತ್ಯ, ದೊಡ್ಡ ಟ್ಯಾಂಕರ್ ಮೂಲಕ ನೀರಿನ ವ್ಯವಸ್ಥೆ ಕಲ್ಪಿಸಲಾಗಿತ್ತು.

ಕೇಸರಿ ಅಲಂಕಾರ ಸಮಿತಿ ವತಿಯಿಂದ ಅದ್ಧೂರಿಯಾಗಿ ರಂಗಿನ ಹಬ್ಬ ಆಚರಿಸಲು ಅವಕಾಶ ಕಲ್ಪಿಸಲಾಗಿತ್ತು. ನೃತ್ಯ, ಡಿಜೆ ಸೌಂಡ್, ಒಬ್ಬರಿಗೊಬ್ಬರು ನೀರೆರೆಚುವ ಮೂಲಕ ಸಾವಿರಾರು ಯುವಕ-ಯುವತಿಯರು ಖುಷಿಯ ಸಾಗರದಲ್ಲಿ ಕುಣಿದು ಕುಪ್ಪಳಿಸಿದರು.

ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕ ವಿಭಾಗ ಮಾಡಲಾಗಿತ್ತು. ಬ್ಯಾರಿಕೇಡ್ ಅಳವಡಿಸಿ ಪೊಲೀಸರು ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರನ್ನು ರಕ್ಷಣಾ ವ್ಯವಸ್ಥೆಗೆ ನಿಯೋಜಿಸಲಾಗಿತ್ತು.

ಮಹಿಳೆಯರು, ಯುವತಿಯರು, ಕಾಲೇಜು ವಿದ್ಯಾರ್ಥಿನಿಯರು ಕುಣಿದು ಕುಪ್ಪಳಿಸಿದರು. ಕೆಲವರು ಹಾಡುಗಳಿಗೆ ಹಜ್ಜೆ ಹಾಕಿದರು. ಕೆಲವರು ತಮ್ಮ ಮಕ್ಕಳನ್ನು ಕರೆತಂದು ಓಕುಳಿ ಆಟವಾಡಿ ಖುಷಿ ಪಟ್ಟರು. ಯುವಕರು ಹಾಡುಗಳಿಗೆ ಭರ್ಜರಿಯಾಗಿ ಹೆಜ್ಜೆ ಹಾಕಿದರು.

ಗೋಪಿ ವೃತ್ತದಲ್ಲಿ ಹೋಳಿ ಆಚರಣೆ ಕಾರಣ ನೆಹರೂ ರಸ್ತೆ, ಬಾಲರಾಜ ಅರಸ್ ರಸ್ತೆ, ದುರ್ಗಿಗುಡಿ ಮುಖ್ಯ ರಸ್ತೆಗಳಲ್ಲಿ ವಾಹನ ಸಂಚಾರ ನಿನಿರ್ಬಂಧಿಸಲಾಗಿತ್ತು.
ಹೋಳಿ ಆಚರಣೆ ಕಣ್ತುಂಬಿಕೊಳ್ಳಲು ಜನರು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದರು. ಎಂ.ಜಿ. ಪ್ಯಾಲೇಸ್ ಕಟ್ಟಡ, ಶ್ರೀನಿಧಿ ಮಳಿಗೆ ಇರುವ ಕಟ್ಟಡ ಸೇರಿದಂತೆ ಅಕ್ಕಪಕ್ಕದ ಕಟ್ಟಡಗಳ ಬಾಲ್ಕನಿಯಲ್ಲಿ ನಿಂತು ಜನರು ವೀಕ್ಷಿಸಿದರು. ಮೈತುಂಬ ಬಣ್ಣ ಹಚ್ಚಿಕೊಂಡ ಜನರು, ಸೆಲ್ಫಿ, ಫೋಟೋಗಳನ್ನು ಕ್ಲಿಕ್ಕಿಸಿಕೊಂಡು ಖುಷಿ ಪಟ್ಟರು.

ಹೋಳಿ ಹಬ್ಬದ ಸಂಭ್ರಮದ ನಡುವೆ ಯಾವುದೇ ರೀತಿಯ ಅಡಚಣೆ ಉಂಟಾಗದಂತೆ ಮುಂಜಾಗ್ರತಾ ಕ್ರಮವಾಗಿ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪನವರ ನಿವಾಸದಲ್ಲಿ ಇಂದು ರಾಷ್ಟ್ರಭಕ್ತ ಬಳಗದ ಮಹಿಳೆಯರು ಪರಸ್ಪರ ಬಣ್ಣ ಎರಚಿ ಹೋಳಿ ಹಬ್ಬವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಜಯಲಕ್ಷ್ಮೀ ಈಶ್ವರಪ್ಪ, ಸೀತಾಲಕ್ಷ್ಮೀ ಸೇರಿದಂತೆ ರಾಷ್ಟ್ರಭಕ್ತ ಬಳಗದ ಅಭಿಮಾನಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

     

Tags: HoliKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಹೋಳಿ
Share196Tweet123Send
Previous Post

ಗಮನಿಸಿ! ಮಾರ್ಚ್ 17ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

Next Post

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಖ್ಯಾತ ನಟ ಪ್ರಭುದೇವ ಭೇಟಿ | ವಿಶೇಷ ಪೂಜೆ ಸಮರ್ಪಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಖ್ಯಾತ ನಟ ಪ್ರಭುದೇವ ಭೇಟಿ | ವಿಶೇಷ ಪೂಜೆ ಸಮರ್ಪಣೆ

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಖ್ಯಾತ ನಟ ಪ್ರಭುದೇವ ಭೇಟಿ | ವಿಶೇಷ ಪೂಜೆ ಸಮರ್ಪಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ನಡುರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದ ಡಸ್ಟರ್ ಕಾರು

ಶಿವಮೊಗ್ಗ | ನಡುರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದ ಡಸ್ಟರ್ ಕಾರು

March 6, 2026
ಬಿಎಫ್‌ಸಿ vs ಮೊಹಮ್ಮದನ್ ಎಸ್‌ಸಿ; ಗೆಲುವಿನ ಹಾದಿಯತ್ತ ಬೆಂಗಳೂರು!

ಬಿಎಫ್‌ಸಿ vs ಮೊಹಮ್ಮದನ್ ಎಸ್‌ಸಿ; ಗೆಲುವಿನ ಹಾದಿಯತ್ತ ಬೆಂಗಳೂರು!

March 6, 2026
ಸಾಲದ ಸುಳಿಗೆ ಕರ್ನಾಟಕ ಅಭಿವೃದ್ಧಿಗೆ ಬೀಗ ಹಾಕಿದ ಆಯವ್ಯಯ: MLC ಡಾ. ಧನಂಜಯ ಸರ್ಜಿ

ಸಾಲದ ಸುಳಿಗೆ ಕರ್ನಾಟಕ ಅಭಿವೃದ್ಧಿಗೆ ಬೀಗ ಹಾಕಿದ ಆಯವ್ಯಯ: MLC ಡಾ. ಧನಂಜಯ ಸರ್ಜಿ

March 6, 2026
ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಶೀಘ್ರ 15 ಸಾವಿರ ಶಿಕ್ಷಕರ ನೇಮಕ

ಭರವಸೆ ಮೂಡಿಸುವ, ಜನಪ್ರಿಯ ಅಂಶಗಳ ಬಜೆಟ್ | ಆರ್ಥಿಕ ವಿಶ್ಲೇಷಕ ಡಾ. ಎಂ.ಎಸ್. ಮಂಜುನಾಥ್

March 6, 2026
ಉದ್ಯೋಗಾಕಾಂಕ್ಷಿಗಳಿಗೆ ಬಜೆಟ್’ನಲ್ಲಿ ಬಿಗ್ ಗುಡ್ ನ್ಯೂಸ್ ನೀಡಿದ ಸಿಎಂ ಸಿದ್ದರಾಮಯ್ಯ

ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು, ಕಾರವಾರದಲ್ಲಿ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ

March 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL