ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಲೆ ಏರಿಕೆಯ ಹೊಡೆತದಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ #KERC ಕೂಡ ಶಾಕ್ ನೀಡಿದ್ದು, ವಿದ್ಯುತ್ ದರ ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ #Electricity tariff hike ಮಾಡಲಾಗಿದೆ.
ಈ ಕುರಿತು ಮಾತನಾಡಿರುವ ಸಚಿವ ಶರಣಪ್ರಕಾಶ್ ಪಾಟೀಲ್, #Minister Sharana Prakash Patil ‘ವಿದ್ಯುತ್ ದರ ಏರಿಕೆಯಿಂದ ಸಾಮಾನ್ಯ ಜನರಿಗೆ ತೊಂದರೆ ಆಗುವುದಿಲ್ಲ. ಗೃಹಜ್ಯೋತಿ ಯೋಜನೆಯಿಂದಾಗಿ ನಷ್ಟ ಆಗಿಲ್ಲ. ಗೃಹಜ್ಯೋತಿ ನಷ್ಟದಿಂದ ವಿದ್ಯುತ್ ದರ ಏರಿಕೆ ಮಾಡಲಾಗಿಲ್ಲ ಎಂದು ಸ್ಪಷ್ಟನೆ ನೀಡಿದರು.

ವಿದ್ಯುತ್ ಪ್ರಸರಣ ಮತ್ತು ಎಸ್ಕಾಮ‌್ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿಗಾಗಿ ಗ್ರಾಹಕರಿಂದ ವಸೂಲಿಗೆ ಕೆಇಆರ್ಸಿ ಮುಂದಾಗಿದ್ದು, ದರ ಹೆಚ್ಚಳದ ಆದೇಶ ಹೊರಡಿಸಿದೆ. ಎಪ್ರಿಲ್ 1 ರಿಂದಲೇ ಹೊಸ ಆದೇಶ ಜಾರಿಯಾಗಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post