ಕಲ್ಪ ಮೀಡಿಯಾ ಹೌಸ್ | ವಿಜಯಪುರ/ನವದೆಹಲಿ |
ಬಣಬಡಿದಾಟಕ್ಕೆ ಬ್ರೇಕ್ ಹಾಕುವ ಭಾಗವಾಗಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ.
Also Read>> ಬೆಂಗಳೂರು | ಮಾರ್ಚ್ 30-ಎಪ್ರಿಲ್ 13 | ಮಲ್ಲೇಶ್ವರಂ ಶ್ರೀರಾಮ ಮಂದಿರದಲ್ಲಿ ರಾಮನವಮಿ ಉತ್ಸವ
ಈ ಕುರಿತಂತೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಆದೇಶ ಹೊರಡಿಸಿದ್ದು, ಯತ್ನಾಳ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ಆರೋಪಗಳನ್ನು ಮಾಡಿಕೊಂಡು ಬರುತ್ತಿದ್ದರು. ಅಲ್ಲದೇ ತಮ್ಮದೇ ಒಂದು ತಂಡ ಕಟ್ಟಿಕೊಂಡು ಪ್ರತ್ಯೇಕ ಸಭೆ ಮಾಡುತ್ತಿದ್ದರು. ಈ ಸಂಬಂಧ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿತ್ತು. ಆದರೂ ಯತ್ನಾಳ್ ತಮ್ಮ ಅಬ್ಬರ ಮುಂದುವರೆಸಿದ್ದರು. ಹೀಗಾಗಿ ಇತ್ತೀಚೆಗೆಷ್ಟೇ ಮತ್ತೊಂದು ಶೋಕಾಸ್ ನೀಡಲಾಗಿತ್ತು. ಆದರೂ ಸಹ ಅವರು ತಮ್ಮ ಮಾತಿನ ಸಮರ ಮುಂದುವರೆಸಿದ್ದರು. ಹೀಗಾಗಿ ಅಂತಿಮವಾಗಿ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸಿದೆ.
ಏನಿದೆ ಉಚ್ಛಾಟನೆ ಆದೇಶ ಪ್ರತಿಯಲ್ಲಿ?
ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025 ಫೆಬ್ರವರಿ 10 ರಂದು ನೀಡಿದ್ದ ಶೋಕಾಸ್ ನೋಟಿಸ್’ಗೆ ನಿಮ್ಮ ಪ್ರತಿಕ್ರಿಯೆಯನ್ನು ಪರಿಗಣಿಸಿದೆ ಮತ್ತು ಹಿಂದಿನ ಶೋಕಾಸ್ ನೋಟಿಸ್’ಗಳಿಗೆ ಪ್ರತಿಕ್ರಿಯೆಯಾಗಿ ಉತ್ತಮ ನಡವಳಿಕೆ ಮತ್ತು ನಡವಳಿಕೆಯ ಭರವಸೆಗಳನ್ನು ನೀಡಿದ್ದರೂ ಸಹ, ನೀವು ಪಕ್ಷದ ಶಿಸ್ತಿನ ಪದೇ ಪದೇ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ, ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ. ಹಾಗೇ ನೀವು ಇಲ್ಲಿಯವರೆಗೆ ಹೊಂದಿದ್ದ ಯಾವುದೇ ಪಕ್ಷದ ಹುದ್ದೆಯಿಂದ ನಿಮ್ಮನ್ನು ತೆಗೆದುಹಾಕಲಾಗಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್ ಅವರು ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post