ಕಲ್ಪ ಮೀಡಿಯಾ ಹೌಸ್ | ಲಕ್ನೋ |
ನಮ್ಮ ಉತ್ತರ ಪ್ರದೇಶ ರಾಜ್ಯದಲ್ಲಿ ಹಿಂದೂಗಳು #Hindu ಸುರಕ್ಷಿತವಾಗಿದ್ದರೆ, ಮುಸ್ಲೀಮರೂ #Muslim ಸಹ ಸುರಕ್ಷಿತವಾಗಿರುತ್ತಾರೆ ಎಂದು ಹೇಳುವ ಮೂಲಕ ಸೂಕ್ಷ್ಮವಾಗಿ ಸಿಎಂ ಯೋಗಿ ಆದಿತ್ಯನಾಥ್ #CM Yogi Adithyanath ಎಚ್ಚರಿಕೆ ನೀಡಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ಉತ್ತರ ಪ್ರದೇಶದಲ್ಲಿ ಎಲ್ಲಾ ಧರ್ಮದ ಜನರು ಸುರಕ್ಷಿತವಾಗಿದ್ದಾರೆ. ಹಿಂದೂಗಳು ಸೇಫ್ ಆಗಗಿದ್ದರೆ, ಮುಸ್ಲಿಮರೂ ಸೇಫ್ ಆಗಿರುತ್ತಾರೆ ಎಂದಿದ್ದಾರೆ.

ನಮ್ಮ ರಾಜ್ಯದಲ್ಲಿ ಅವರುಗಳಿಗೆ ಎಲ್ಲಾ ಧಾರ್ಮಿಕ ಪದ್ದತಿಗಳನ್ನು ಆಚರಿಸುವ ಸ್ವಾತಂತ್ರವಿದೆ. 100 ಹಿಂದೂ ಕುಟುಂಬಳ ನಡುವೆ ಒಂದು ಮುಸ್ಲಿಂ ಕುಟುಂಬ ಭದ್ರವಾಗಿದೆ. ಆದರೆ 100 ಮುಸ್ಲಿಂ ಕುಟುಂಬಗಳ ನಡುವೆ 50 ಹಿಂದೂ ಕುಟುಂಬಗಳಿದ್ದರೂ ಸುರಕ್ಷಿತವಾಗಿರಲು ಸಾಧ್ಯವಿಲ್ಲ ಎಂದಿದ್ದಾರೆ.

2017ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಒಂದೇ ಒಂದು ಕೋಮುಗಲಭೆ ನಡೆದಿಲ್ಲ. ಉತ್ತರ ಪ್ರದೇಶದಲ್ಲಿ ಹಿಂದೂಗಳು ಸುರಕ್ಷಿತವಾಗಿದ್ದರೆ ಮುಸ್ಲಿಮರೂ ಸುರಕ್ಷಿತ ಎಂದು ಖಡಕ್ ಆಗಿ ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post