No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, October 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವೃತ್ತಿಪರತೆ ಮತ್ತು ಪ್ರಜಾಪ್ರಭುತ್ವದ ರಕ್ಷಣೆಯಲ್ಲಿ ಪತ್ರಕರ್ತೆಯರ ಪಾತ್ರ ದೊಡ್ಡದು: ಕೆ.ವಿ. ಪ್ರಭಾಕರ್‌

ಪ್ರಭಾ ದತ್‌ ಮತ್ತು ಹೋಮೈ ವರಾವಲ್ಲಾ ಹೆಸರಲ್ಲಿ ಪ್ರಶಸ್ತಿ ಘೋಷಿಸಿದ ಕೆ.ವಿ.ಪ್ರಭಾಕರ್‌

kalpa News by kalpa News
March 28, 2025
in ಬೆಂಗಳೂರು ನಗರ
0
ವೃತ್ತಿಪರತೆ ಮತ್ತು ಪ್ರಜಾಪ್ರಭುತ್ವದ ರಕ್ಷಣೆಯಲ್ಲಿ ಪತ್ರಕರ್ತೆಯರ ಪಾತ್ರ ದೊಡ್ಡದು: ಕೆ.ವಿ. ಪ್ರಭಾಕರ್‌
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಪತ್ರಿಕಾ ವೃತ್ತಿ ಮಹಿಳೆಯರಿಗಲ್ಲ ಎನ್ನುವ ಮಾತು ಈಗ ಸಂಪೂರ್ಣ ಸುಳ್ಳಾಗಿದ್ದು, ಪತ್ರಿಕಾ ವೃತ್ತಿಯ ಘನತೆ ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡುವಲ್ಲಿ ಪತ್ರಕರ್ತೆಯರ ಪಾತ್ರ ಪ್ರಾಮುಖ್ಯತೆ ಪಡೆದುಕೊಂಡಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್‌ ಅವರು ಅಭಿಪ್ರಾಯಪಟ್ಟರು.

ಕರ್ನಾಟಕ ಪತ್ರಕರ್ತೆಯರ ಸಂಘ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕೃತ ಸಾಧಕಿಯರನ್ನು ಅಭಿನಂದಿಸಿ ಮಾತನಾಡಿದರು.
ಸಂಘದ ಪ್ರಶಸ್ತಿಗೆ ಸಬೀಹಾ ಬಾನು, ಪೂರ್ಣಿಮಾ ರವಿ, ಪದ್ಮಾ ಕೋಲಾರ ಅವರನ್ನು ಆಯ್ಕೆ ಮಾಡಿರುವುದು ಬಹಳ ಖುಷಿಯಾಯಿತು. ಪತ್ರಕರ್ತೆಯರ ಸಂಘ ಬಹಳ ಸೂಕ್ಷ್ಮವಾಗಿ ಗಮನಿಸಿ ಸೂಕ್ತ ಆದವರನ್ನು ಆಯ್ಕೆ ಮಾಡಿದೆ. ನ್ಯೂಸ್‌ ಆಂಕರ್‌ಗಳು ಎಂದರೆ ತೆಳ್ಳಗೆ ಬೆಳ್ಳಗೆ ಇರಬೇಕು. 20 ರಿಂದ 25 ವರ್ಷದೊಳಗಿನ ಅವಿವಾಹಿತ ಹೆಣ್ಣು ಮಕ್ಕಳೇ ಇರಬೇಕು ಎನ್ನುವ ನಂಬಿಕೆ ಇದೆ. ಪುರುಷ ಆಂಕರ್‌ಗಳಿಗೆ ಇಲ್ಲದ ವಯಸ್ಸಿನ ಮಿತಿ ಮಹಿಳಾ ಆಂಕರ್‌ಗಳಿಗೆ ಮಾತ್ರ ಇರುವುದು ಸರಿಯಲ್ಲ. ಈ ಅಸಹಜ ನಂಬಿಕೆಯನ್ನು ಸುಳ್ಳಾಗಿಸಿ ಅರ್ಹತೆ ಮೆರೆದವರು ನಮ್ಮ ಸಬೀಹಾ ಬಾನು, ನ್ಯೂಸ್‌ ಆಂಕರಿಂಗ್‌ನ ಘನತೆಯನ್ನು ಹೆಚ್ಚಿಸಿದವರು. ಹಾಗೆಯೇ ಮಲೆನಾಡಿನ ಹುಡುಗಿ ಪೂರ್ಣಿಮಾ ರವಿ. ಕನ್ನಡ ಪತ್ರಿಕೋದ್ಯಮದಲ್ಲಿ ಪತ್ರಿಕಾ ಛಾಯಾಗ್ರಾಹಕಿಯಾಗಿ, ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತೆ ಹೋಮೈ ವರವಲ್ಲಾ ಅವರ ಪರಂಪರೆಯನ್ನು ಮುಂದುವರೆಸಿದ್ದಾರೆ.

Also read: ಮೈಸೂರು | ಹಸಿದ ಹೊಟ್ಟೆಗೆ ರಾಯರ ನೈವೇದ್ಯ | ಉಚಿತ ಪ್ರಸಾದ ವಿತರಣೆಗೆ ಚಾಲನೆ

ನಾವು ಬೆಳಗ್ಗೆ ಎದ್ದು ಮನೆಯಿಂದ ಹೊರಗೆ ಕಾಲಿಡುವ ಮೊದಲೇ ಬೀದಿಯನ್ನು ಗುಡಿಸಿ, ನಮ್ಮ ಕಸವನ್ನು ತೆಗೆಯುವ ಪೌರ ಕಾರ್ಮಿಕರು ಮತ್ತು ಸಫಾಯಿ ಕರ್ಮ ಚಾರಿಗಳ ಪರವಾಗಿ ಹೋರಾಟ ನಡೆಸುತ್ತಿರುವ ಪದ್ಮಾ ಕೋಲಾರ ಅವರ ಆಯ್ಕೆ ಪತ್ರಕರ್ತೆಯರ ಸಂಘದ ಸಮಾಜಮುಖಿ ದೃಷ್ಠಿಕೋನಕ್ಕೆ ಸಾಕ್ಷಿಯಾಗಿದೆ.

ಪತ್ರಕರ್ತೆಯರ ಸಂಘದ ಈ ವೇದಿಕೆಯಲ್ಲಿ ನಾನು ಪ್ರಮುಖವಾಗಿ ಮೂವರು ಪತ್ರಕರ್ತೆಯರನ್ನು ಸ್ಮರಿಸಿಕೊಳ್ಳಲು ಇಚ್ಚಿಸುತ್ತೇನೆ. ಹೋಮೈ ವರವಲ್ಲಾ, ಪ್ರಭಾ ದತ್‌, ಕಮಲಾ ಮಂಕೇಕರ್‌. ಭಾರತೀಯ ಪತ್ರಿಕಾ ಕ್ಷೇತ್ರದಲ್ಲಿ ಈ ಮೂವರೂ ಕೂಡ ಯಾವತ್ತೂ ಅಳಿಸಲಾಗದ ಹೆಜ್ಜೆ ಗುರುತುಗಳನ್ನು ದಾಖಲಿಸಿರುವುದು ಮಾತ್ರವಲ್ಲ, ಇವರು ಇವತ್ತಿನ  ತಮ್ಮ ಮೊಮ್ಮಕ್ಕಳ ವಯಸ್ಸಿನ ಯುವ ಪತ್ರಕರ್ತೆಯರಿಗೆ ಸ್ಫೂರ್ತಿಯಾಗಿದ್ದಾರೆ. ಭಾರತದ ಪ್ರಥಮ ಮಹಿಳಾ ಪತ್ರಿಕಾ ಛಾಯಾಗ್ರಾಹಕಿ ಹೋಮೈ ವಾರಾವಲ್ಲಾ. ದೇಶಕ್ಕೆ ಸ್ವಾತಂತ್ರ್ಯ ಬರುವ ಮೊದಲೇ ಇವರು ಪತ್ರಿಕಾ ವೃತ್ತಿಗೆ ಪ್ರವೇಶ ಪಡೆದಿದ್ದರು. ಬಾಂಬೆ ಕ್ರೋನಿಕಲ್‌ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದ ಇವರು ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತರು.  1940 ರಿಂದ 1970 ರ ವರೆಗೆ 30 ವರ್ಷಗಳ ಕಾಲ ಇವರು ದಾಖಲಿಸಿರುವ ಹೆಜ್ಜೆ ಗುರುತುಗಳು  ಕಪ್ಪು, ಬಿಳುಪು ಕಾಲದಿಂದ ಛಾಯಾಚಿತ್ರ ಜಗತ್ತು ಬೆಳೆದು ಬಂದ ಇತಿಹಾಸಕ್ಕೂ ಸಾಕ್ಷಿಯಾಗಿದ್ದಾರೆ.  ಹಾಗೆಯೇ ಕಮಲಾ ಮಂಕೇಕರ್‌. ದೇಶಕ್ಕೆ ಸ್ವಾತಂತ್ರ್ಯ ಬಂದ ಹೊಸ್ತಿಲಲ್ಲಿ 1949 ರಲ್ಲಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯಲ್ಲಿ ವರದಿಗಾರ್ತಿ ಆಗಿದ್ದ ಕಮಲಾ ಮಂಕೇಕರ್, ಪತ್ರಿಕಾ ಸಂಸ್ಥೆಗಳಲ್ಲಿ ಮಹಿಳಾ ಶೌಚಾಲಯಕ್ಕಾಗಿ ಮೊದಲ ಬಾರಿಗೆ ಧ್ವನಿ ಎತ್ತಿದ್ದವರು. ಕೊನೆಗೆ ಮ್ಯಾನೇಜ್ ಮೆಂಟ್ ಬಳಸುತ್ತಿದ್ದ ಶೌಚಾಲಯದ ಕೀ ಪಡೆದುಕೊಳ್ಳುವಲ್ಲಿ ಯಶಸ್ವಿ ಆಗಿದ್ದರು. ರಾಷ್ಟ್ರದ ಮೊದಲ ಸಂಸತ್ ನಲ್ಲಿದ್ದ 22 ಮಹಿಳಾ ಎಂ.ಪಿ ಗಳಲ್ಲಿ ಹತ್ತು ಮಂದಿಯ ಸಂದರ್ಶನ ನಡೆಸಿದ  ಯಶಸ್ಸು ಇವರ ಪಾಲಿಗಿದೆ.

ಮೂರನೆಯವರು ಪ್ರಭಾ ದತ್‌. ಬರ್ಕಾ ದತ್‌ ಅವರ ತಾಯಿ. 1965 ರಲ್ಲಿ ಭಾರತ-ಪಾಕಿಸ್ತಾನ ಯುದ್ಧದ ವರದಿಗಾರಿಕೆಗೆ ತೆರಳಿದ್ದ ಪ್ರಭಾದತ್ ಅವರನ್ನು ಈ ಸಂದರ್ಭದಲ್ಲಿ ನಾವು ವಿಶೇಷವಾಗಿ ಸ್ಮರಿಸಲೇಬೇಕು. ಹಿಂದೂಸ್ತಾನ್ ಟೈಮ್ಸ್ ಪತ್ರಿಕೆಯ ವರದಿಗಾರ್ತಿ ಆಗಿದ್ದ ಪ್ರಭಾ ದತ್‌ ಅವರಿಗೆ ಯುದ್ಧದ ವರದಿ ಮಾಡುವ ಉತ್ಸಾಹವಿತ್ತು. ಆದರೆ ಪತ್ರಿಕೆ  ಅವಕಾಶ ಕೊಟ್ಟಿರಲಿಲ್ಲ. ಆದರೂ ಕೆಲಸಕ್ಕೆ ರಜೆ ಹಾಕಿ ರಣರಂಗಕ್ಕೆ ತೆರಳಿ ಸರಣಿ ವರದಿಗಳನ್ನು ಕಚೇರಿಗೆ ಕಳುಹಿಸಿದ್ದರು. ಅವು ಉತ್ತಮ ಗುಣಮಟ್ಟದ್ದಾಗಿದ್ದರಿಂದ ಪ್ರಕಟ ಕೂಡ ಆದವು. ಕೊನೆಗೆ ಇದೇ ಪತ್ರಿಕೆ ಪ್ರಭಾ ದತ್‌ ಅವರು ಮಿಲಿಟರಿ ಟ್ಯಾಂಕರ್ ಮುಂದೆ ನಿಂತಿದ್ದ ಫೋಟೋವನ್ನೂ ಪ್ರಕಟಿಸಿ ಪತ್ರಕರ್ತೆಯರ ಇತಿಹಾಸಕ್ಕೆ ದಾಖಲೆ ಉಳಿಸಿದೆ.
ಪುರುಷ ಪ್ರಾಭಲ್ಯವೇ ತುಂಬಿದ್ದ ಪತ್ರಿಕೋದ್ಯಮದಲ್ಲಿ ಈ ಮೂವರೂ ಒಟ್ಟು ಪತ್ರಿಕೋದ್ಯಮದ ಮಾದರಿಗಳಾಗಿ ಉಳಿದಿದ್ದಾರೆ. ಇವರ ಮೊಮ್ಮಕ್ಕಳ ವಯಸ್ಸಿನ ಇವತ್ತಿನ ಯುವ ಪತ್ರಕರ್ತೆಯರು ಈಗ ತಮ್ಮ ಅಜ್ಜಿಯರ ಕತೆಗಳನ್ನು ಹೆಚ್ಚೆಚ್ಚು ದಾಖಲಿಸುವ ಕೆಲಸ ಮಾಡುವ ಮೂಲಕ ಪತ್ರಕರ್ತೆಯರ ಚರಿತ್ರೆಯನ್ನು ಬರೆಯುವ ಕೆಲಸ ಮಾಡಬೇಕಿದೆ.

ಉತ್ತರ ಪ್ರದೇಶದ ಹಾಥರಸ್‌ ಅತ್ಯಾಚಾರ ಪ್ರಕರಣವನ್ನು ಬೆನ್ನತ್ತಿದ್ದ ಇಂಡಿಯಾ ಟುಡೇಯ ತನುಶ್ರೀ ಪಾಂಡೆ, ಪೆಗಾಸಿಸ್‌ ತನಿಖಾ ವರದಿ ಪ್ರಕಟಿಸಿದ ರೋಹಿಣಿ ಸಿಂಗ್‌, ಕೋವಿಡ್ ಸಂದರ್ಭದ ದುಡಿಯುವ ವರ್ಗದ ಸಂಕಷ್ಟಗಳನ್ನು ಇಡೀ ದೇಶ ಸುತ್ತಿ ದಾಖಲಿಸಿದ ಬರ್ಖಾ ದತ್‌ ಮತ್ತು ರಾಣಾ ಅಯೂಬ್‌, ಸ್ವಾತಿ ಚತುರ್ವೇದಿ  ಥರದ ಹಲವು ಮಂದಿ ಪತ್ರಿಕಾ ವೃತ್ತಿಯ ಘನತೆ ಹೆಚ್ಚಿಸುತ್ತಲೇ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಿತ್ತಾ ತಮ್ಮ ಹಿಂದಿನವರ ಚರಿತ್ರೆಯನ್ನು ಮುಂದುವರೆಸಿದ್ದಾರೆ.

ಇವತ್ತು ತಂತ್ರಜ್ಞಾನದ ಕಾರಣಕ್ಕೆ ಮಾಧ್ಯಮ ಕ್ಷೇತ್ರ ಕೂಡ ವಿಪರಿತ ಬೆಳೆದಿದೆ. ಪುರುಷರಂತೆ ಮಹಿಳೆಯರಿಗೂ ಹೆಚ್ಚೆಚ್ಚು ಅವಕಾಶಗಳು ಒದಗುತ್ತಿವೆ. ಮಾಧ್ಯಮಗಳ ನಿರ್ಣಾಯಕ ಹುದ್ದೆಗಳಲ್ಲಿ ಮಹಿಳೆಯರೇ ಇಲ್ಲ ಎನ್ನುವ ಪರಿಸ್ಥಿತಿ ನಿಧಾನಕ್ಕೆ ಬದಲಾಗುತ್ತಿದೆ. “ಓ ವುಮೇನಿಯಾ” ಸಂಸ್ಥೆ ನೀಡಿರುವ ವರದಿಯ ಪ್ರಕಾರ ನಮ್ಮ ಮಾಧ್ಯಮಗಳಲ್ಲಿ ಶೇ13 ರಷ್ಟು ಪ್ರಮುಖ ಹುದ್ದೆಗಳಲ್ಲಿ ಈಗ ಪತ್ರಕರ್ತೆಯರು ಇದ್ದಾರೆ.

ಇನ್ನು ಪರ್ಯಾಯ ಮಾಧ್ಯಮಗಳಲ್ಲಿ, ಯು ಟ್ಯೂಬ್‌ ಚಾನಲ್‌ಗಳಲ್ಲಿ ಪತ್ರಕರ್ತೆಯರು ನಿರಂತರ  ಹವಾ ಎಬ್ಬಿಸುತ್ತಿದ್ದಾರೆ. ನಮ್ಮವರೇ ಆದ ವಿಜಲಕ್ಷ್ಮಿ ಶಿಬರೂರು, ಮಂಜುಳಾ ಮಾಸ್ತಿಕಟ್ಟೆ, ರಾಷ್ಟ್ರೀಯ ಮಟ್ಟದಲ್ಲಿ ಧನ್ಯಾ ರಾಜೇಂದ್ರನ್‌, ಸಾಕ್ಷಿ ಜೋಶಿ, ಕುಂಕುಮ್‌ ಬಿಲ್ವಾಲ್‌ ಮುಂತಾದವರು ಪತ್ರಿಕಾ ವೃತ್ತಿಯ ಸಾಧ್ಯತೆಗಳನ್ನು. ತೂಕವನ್ನು ಹೆಚ್ಚಿಸುತ್ತಿದ್ದಾರೆ. ಇವರೆಲ್ಲರ ಸಾಧನೆಗಳನ್ನು ಸ್ಮರಿಸುತ್ತಾ ಪತ್ರಕರ್ತೆಯರ ಸಂಘದ ಮುಂದೆ ನಾನು ಒಂದು ಬೇಡಿಕೆ ಇಡುತ್ತಿದ್ದೇನೆ.
ಭಾರತೀಯ ಪತ್ರಿಕೋದ್ಯಮದ ಮೊದಲ ಛಾಯಾಗ್ರಾಹಕಿ ಹೋಮೈ ವರವಲ್ಲಾ ಮತ್ತು ಮೊದಲ ಯುದ್ಧ ವರದಿಗಾರ್ತಿ ಪ್ರಭಾ ದತ್‌ ಅವರ ಹೆಸರಲ್ಲಿ ಒಂದು ಪ್ರಶಸ್ತಿಯನ್ನು ಸ್ಥಾಪಿಸಬೇಕು. ಈ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವ ಪತ್ರಕರ್ತೆಯರನ್ನು ಗುರುತಿಸಿ ಪ್ರತೀ ವರ್ಷವೂ ಪ್ರಶಸ್ತಿ ನೀಡಬೇಕು. ಈ ಎರಡೂ ಪ್ರಶಸ್ತಿಗಳಿಗೆ ತಲಾ ಒಂದು ಲಕ್ಷ ರೂಪಾಯಿ ಪ್ರಶಸ್ತಿ ಮೊತ್ತವನ್ನು ನಾನು ಮುಖ್ಯಮಂತ್ರಿಗಳಿಂದ ಕೊಡಿಸಲು ಸಿದ್ದನಿದ್ದೇನೆ. ಇದು ಈ ರ್ಷದಿಂದಲೇ ಆರಂಭಿಸಿದರೂ ನಾನು ಸಿದ್ದನಿದ್ದೇನೆ ಎಂದು ಘೋಷಿಸಿದರು.

ಪತ್ರಕರ್ತೆಯರ ಸಂಘಕ್ಕೆ ಕಾರ್ಯ ನಿರ್ವಹಿಸಲು ಕಚೇರಿಯ ಅಗತ್ಯವಿದ್ದು ಇದಕ್ಕೆ ಸೂಕ್ತ ಕ್ರಮ ವಹಿಸಲು ಪ್ರಯತ್ನಿಸಲಾಗುವುದು ಎಂದರು.

ರಾಜ್ಯ ಪತ್ರಕರ್ತೆಯರ ಸಂಘದ ಅಧ್ಯಕ್ಷೆ ಪದ್ಮಾ ಶಿವಮೊಗ್ಗ, ಪ್ರಧಾನ ಕಾರ್ಯದರ್ಶಿ ಮಂಜುಶ್ರೀ ಕಡಕೋಳ, ರಾಜ್ಯ ಕಾರ್ಯನಿರತ  ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

                

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೈಸೂರು | ಹಸಿದ ಹೊಟ್ಟೆಗೆ ರಾಯರ ನೈವೇದ್ಯ | ಉಚಿತ ಪ್ರಸಾದ ವಿತರಣೆಗೆ ಚಾಲನೆ

Next Post

ಮಹಾದೇವಪ್ಪನಿಗೂ ಶಾಕು! ಕಾಕಾ ಪಾಟೀಲಗೂ ಶಾಕು! ರಾಜ್ಯ ಸರ್ಕಾರದ ವಿರುದ್ಧ ಸಚಿವ ಎಚ್’ಡಿಕೆ ವ್ಯಂಗ್ಯ

kalpa News

kalpa News

Next Post
5 ತಿಂಗಳಲ್ಲಿ 45 ಸಾವಿರ ಕೋಟಿ ರೂ. ಸಾಲಮನ್ನಾ: ಕುಮಾರಸ್ವಾಮಿ

ಮಹಾದೇವಪ್ಪನಿಗೂ ಶಾಕು! ಕಾಕಾ ಪಾಟೀಲಗೂ ಶಾಕು! ರಾಜ್ಯ ಸರ್ಕಾರದ ವಿರುದ್ಧ ಸಚಿವ ಎಚ್’ಡಿಕೆ ವ್ಯಂಗ್ಯ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL