ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಒಂದು ತಿಂಗಳ ಉಪವಾಸದ ಬಳಿಕ ಮುಸ್ಲಿಮರು ಸೋಮವಾರ ಜಿಲ್ಲಾದ್ಯಂತ ಸಂಭ್ರಮ ಸಡಗರದಿಂದ ರಂಜಾನ್ #Ramzan ಆಚರಿಸಿದರು. ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ ಬಳಿಕ ತಂಡೋಪತಂಡವಾಗಿ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಪ್ರಾರ್ಥನೆ ಬಳಿಕ ಆತ್ಮೀಯರು ಹಾಗೂ ಸಂಬಂಧಿಕರ ಮನೆಗೆ ತೆರಳಿ ಶುಭಾಶಯ ಕೋರಿದರು. ಕಾಂಗ್ರೆಸ್ ಮುಖಂಡರಾದ ಎಂ.ಶ್ರೀಕಾಂತ್, ಹೆಚ್.ಸಿ.ಯೋಗೀಶ್, ಎಸ್.ಪಿ.ಶೇಷಾದ್ರಿ ಮುಂತಾದವರು ಪ್ರಾರ್ಥನಾ ಸಂದರ್ಭದಲ್ಲಿ ಭಾಗವಹಿಸಿ ಶುಭ ಕೋರಿದರು.
Also read: ನೀರಿನ ಸಮಸ್ಯೆ | ಶೀಘ್ರದಲ್ಲೇ ಕ್ರಮ ಕೈಗೊಳ್ಳುವಂತೆ ಶಾಸಕ ಚನ್ನಬಸಪ್ಪ ಸೂಚನೆ
ಚಿಕ್ಕ ಮಕ್ಕಳು ಹೊಸ ಬಟ್ಟೆಯುಟ್ಟು ಸಂಭ್ರಮಿಸಿದರು. ಶಿವಮೊಗ್ಗದ ವಿವಿಧ ಪ್ರದೇಶಗಳಲ್ಲಿ ಪೆÇಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿತ್ತು. ಪ್ರಮುಖ ರಸ್ತೆಗಳು ಹಾಗೂ ವೃತ್ತಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ವಾಹನ ಸಂಚಾರ ಸುಗಮವಾಗಿರುವಂತೆ ವ್ಯವಸ್ಥೆ ಮಾಡಲಾಗಿತ್ತು.
ಡಿಸಿ ಕಚೇರಿ ಎದುರು ಸವಳಂಗ ರಸ್ತೆಯಲ್ಲಿ ಹಾಗೂ ಖಾಸಗಿ ಬಸ್ ನಿಲ್ದಾಣದ ಸಮೀಪದ ಖಬರಸ್ತಾನ್ ಭಾಗದಲ್ಲಿ ಕೆಲ ಸಮಯ ವಾಹನ ದಟ್ಟಣೆ ಹೆಚ್ಚಿದ ಸಂದರ್ಭ ಟ್ರಾಫಿಕ್ ಜಾಮ್ ಆಗಿತ್ತು. ಸಂಚಾರಿ ಠಾಣೆ ಪೆÇಲೀಸರು ಪರಿಸ್ಥಿತಿ ನಿಭಾಯಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post