ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ವರದಿ: ಡಿ. ಎಲ್. ಹರೀಶ್
ದ್ವಿತೀಯ ಪಿಯುಸಿಯ #Second PUC ಮೊದಲನೇ ಪರೀಕ್ಷೆಯಲ್ಲಿ ನಿಗದಿತ ಅರ್ಹತೆ ಗಳಿಸದ ಅಥವಾ ಅನುತ್ತೀರ್ಣರಾಗಿರುವ ಅಭ್ಯರ್ಥಿಗಳು 2 ಮತ್ತು 3ನೇ ಪರೀಕ್ಷೆಯಲ್ಲಿ ಆರ್ಹತೆ ಪಡೆಯಲು ಅವಕಾಶ ಇರುವ ಕಾರಣ, ಯಾರೆಲ್ಲ ಶುಲ್ಕ ಕಟ್ಟಿ ಅರ್ಜಿ ಸಲ್ಲಿಸಿದ್ದೀರೊ ಅವರೆಲ್ಲರೂ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ಹಾಜರಾಗಿ ಪರೀಕ್ಷೆ ಬರೆಯಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಸಲಹೆ ನೀಡಿದ್ದಾರೆ.
ಹೊರನಾಡು ಕನ್ನಡಿಗರಿಗೆ ಇದೇ 15ರಂದು ಕನ್ನಡ ಹಾಗೂ 16 ಮತ್ತು 17ರಂದು ವಿಜ್ಞಾನ ವಿಷಯಗಳಿಗೆ ಸಿಇಟಿ #CET ನಡೆಯುಲಿದ್ದು, ಪ್ರಾಧಿಕಾರ ಸಕಲ ರೀತಿಯ ತಯಾರಿ ನಡೆಸಿದೆ.

ಕಳೆದ ವರ್ಷ ಕೂಡ 3ನೇ ಪರೀಕ್ಷೆಯಲ್ಲಿ ಅರ್ಹತೆಯಾದ ಆನೇಕರಿಗೆ ರಾಂಕ್ ಕೊಟ್ಟು, ಪ್ರವೇಶಕ್ಕೆ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಸಿಇಟಿ ಪರೀಕ್ಷೆಯನ್ನು ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಬೇಡಿ. ಸಿಇಟಿ ಪರೀಕ್ಷೆ ಒಮ್ಮೆ ಮಾತ್ರ ನಡೆಸುವುದರಿಂದ ಅದನ್ನು ತಪ್ಪದೇ ಬರೆಯಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ಈ ವರ್ಷ 3.3 ಲಕ್ಷ ಅಭ್ಯರ್ಥಿಗಳು ಸಿಇಟಿ ಬರೆಯಲು ಶುಲ್ಕ ಪಾವತಿಸಿದ್ದು, ಅವರಲ್ಲಿ ಇದುವರೆಗೂ 2.85 ಲಕ್ಷ ಮಂದಿ ತಮ್ಮ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಂಡಿದ್ದಾರೆ. ಇನ್ನೂ ಸುಮಾರು 45 ಸಾವಿರ ಮಂದಿ ಡೌನ್ ಮಾಡಿಕೊಳ್ಳಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ವಿಷಯದಲ್ಲಿ ಪೋಷಕರು ಕೂಡ ಎಚ್ಚರವಹಿಸಬೇಕು. ಫಲಿತಾಂಶವನ್ನು ಉತ್ತಮ ಪಡಿಸಿಕೊಳ್ಳಲು ಸರ್ಕಾರ ಇನ್ನೂ ಎರಡು ಅವಕಾಶ ನೀಡುತ್ತಿದೆ. ಹೀಗಾಗಿ ಒಮ್ಮೆ ಮಾತ್ರ ನಡೆಯುವ ಸಿಇಟಿ ಪರೀಕ್ಷೆಯಿಂದ ಯಾರೂ ವಿಮುಖರಾಗುವುದು ಬೇಡ ಎಂದೂ ಪ್ರಸನ್ನ ಹಿತವಚನ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 







Discussion about this post