ಕಲ್ಪ ಮೀಡಿಯಾ ಹೌಸ್ | ರಿಪ್ಪನ್‌ಪೇಟೆ |
ಇಲ್ಲಿನ ಚಿಕ್ಕಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುತ್ತಲ ಸರ್ಕಾರಿ ಶಾಲೆಯ 4ನೇ ತರಗತಿ ವಿದ್ಯಾರ್ಥಿ ಅಭಿನವ (10) ವಾಂತಿ-ಭೇದಿಯಿಂದ ಮೃತಪಟ್ಟಿದ್ದಾನೆ.
ಕಾರಕ್ಕಿ ಗ್ರಾಮದ ಸುಂದರ ಹಾಗೂ ಕೋಮಲ ಪುತ್ರ ಅಭಿನವನಿಗೆ ವಾಂತಿ-ಭೇದಿ ಕಾಣಿಸಿಕೊಂಡ ಕಾರಣ ಗುರುವಾರ ಕೋಡೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಮನೆಗೆ ಕರೆ ತರಲಾಗಿತ್ತು.
ಮತ್ತೆ ಸುಸ್ತು ಕಾಣಿಸಿಕೊಂಡಿದ್ದರಿಂದ ಶುಕ್ರವಾರ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆ ಅಸುನೀಗಿದ್ದಾನೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post