ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತಾವರೆಚಟ್ನಹಳ್ಳಿ ವಿ.ವಿ. ಕೇಂದ್ರದ ವ್ಯಾಪ್ತಿಯ ಕಲ್ಲಾಪುರ ಎನ್.ಜೆ.ವೈ. ಮಾರ್ಗದ ನಿರ್ವಹಣೆ ಮತ್ತು ಇನ್ನಿತರೆ ವಾಹಕ ಬದಲಾವಣೆ ಕಾಮಗಾರಿ ಇರುವುದರಿಂದ ಏ.25ರಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಈ ಮಾರ್ಗದಿಂದ ವಿದ್ಯುತ್ ಸರಬರಾಜು ಪಡೆಯುವ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಕುವೆಂಪುನಗರ, ವಿದ್ಯಾಭಾರತಿ ಕಾಲೇಜ್, ಶಿವಕುಮಾರಸ್ವಾಮಿ ಲೇಔಟ್, ಇನ್ಪ್ರಾಲೇಔಟ್, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂದಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ , ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್ಗಳು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post