ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ದೇಶ ಅತ್ಯಂತ ಸೂಕ್ಷ್ಮ ಪರಿಸ್ಥಿತಿ ಎದುರಿಸುತ್ತಿರುವಾಗ ಮುಖ್ಯಮಂತ್ರಿ ಸಿದ್ಧರಾಮಯ್ಯ #CM Siddaramaiah ಅವರು ಬಾಲಿಶ, ಅಸಂಬದ್ಧ ಹೇಳಿಕೆಗಳನ್ನು ನೀಡುವ ಮೂಲಕ ರಾತ್ರೋರಾತ್ರಿ ಪಾಕಿಸ್ತಾನದಲ್ಲಿ #Pakistan ವರ್ಲ್ಡ್ ಫೇಮಸ್ ಆಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ #R Ashok ವ್ಯಂಗ್ಯವಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಸಿಎಂ ಸಿದ್ಧರಾಮಯ್ಯ ಅವರಿಗೆ ಮುಂದೆಂದಾದರೂ ತಾವು ಪಾಕಿಸ್ತಾನಕ್ಕೆ ಭೇಟಿ ಕೊಟ್ಟರೆ ತಮಗೆ ರಾಜಾತಿಥ್ಯ ಗ್ಯಾರೆಂಟಿ. ಪಾಕಿಸ್ತಾನದ ಪರ ವಕಾಲತ್ತು ವಹಿಸಿದ ಮಹಾನ್ ಶಾಂತಿದೂತ ಎಂದು ಪಾಕಿಸ್ತಾನ ಸರ್ಕಾರ ತಮಗೆ ಅಲ್ಲಿನ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ನಿಶಾನ್-ಎ-ಪಾಕಿಸ್ತಾನ ಪ್ರಶಸ್ತಿ ಕೊಟ್ಟು ಸನ್ಮಾನ ಮಾಡಿದರೂ ಅಚ್ಚರಿಯಿಲ್ಲ ಎಂದು ಕುಟುಕಿದ್ದಾರೆ.
ಗಡಿಯಲ್ಲಿ ಯುದ್ಧದ ಕಾರ್ಮೋಡ ಕವಿದಿರುವಾಗ ಈ ರೀತಿ ಶತ್ರುರಾಷ್ಟ್ರದ ಕೈಗೊಂಬೆಯಂತೆ ವರ್ತಿಸುತ್ತದ್ದೀರಲ್ಲ, ನಿಮ್ಮಂತಹವರು ಸಾರ್ವಜನಿಕ ಬದುಕಿನಲ್ಲಿ ಇರುವುದೇ ನಮ್ಮ ದೇಶದ ಅತ್ಯಂತ ದೊಡ್ಡ ದುರಂತ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

















