ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗದ ಸಿಟಿ ಸೆಂಟರ್ ಮಾಲ್ ಪಕ್ಕದ ಬಸ್‌ಸ್ಟಾಪ್ ಬಳಿ ನೋ ಪಾರ್ಕಿಂಗ್ ಜಾಗದಲ್ಲಿ ಆಟೋ ನಿಲ್ಲಿಸದಂತೆ ಸೂಚಿಸಿದ ಹೋಂ ಗಾರ್ಡ್ ಮೇಲೆ ಆಟೋ ಚಾಲಕನೊಬ್ಬ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಲಾಗಿದೆ.
ಪಶ್ಚಿಮ ಸಂಚಾರ ಠಾಣೆಯಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಹೋಂ ಗಾರ್ಡ್ ನಾಗರಾಜ ನಾಯ್ಕ್ ಮೇಲೆ ಹಲ್ಲೆಯಾಗಿದೆ. ಪ್ರಕರಣ ಸಂಬಂಧ ಆಟೋ ಚಾಲಕ ಮನೋಜ್ ಎಂಬಾತನನ್ನು ಬಂಧಿಸಲಾಗಿದೆ.

ಆಟೋ ಚಾಲಕ ಅರೆಸ್ಟ್
ಘಟನೆ ಬೆನ್ನಿಗೆ ಹೋಮ್ ಗಾರ್ಡ್ ನಾಗರಾಜ ನಾಯ್ಕ್‌ನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆದು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆಟೋ ಚಾಲಕ ಮನೋಜ್ ಎಂಬಾತನನ್ನು ಬಂಧಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post