ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಕಡದಕಟ್ಟೆ ರೈಲ್ವೆ ಗೇಟ್ ಬಳಿ ನಿರ್ಮಾಣಗೊಂಡಿರುವ ರೈಲ್ವೆ ಮೇಲ್ಸೇತುವೆ ನಗರದ ಭವಿಷ್ಯದ ಬೆಳವಣಿಗೆಗೆ ಪೂರಕ ವಾಗಲಿದ್ದು, ಸಾರ್ವಜನಿಕರು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ಸಂಸದ ಬಿ.ವೈ ರಾಘವೇಂದ್ರ #MP Raghavendra ಹೇಳಿದರು.
ಅವರು ಶನಿವಾರ ರೈಲ್ವೆ ಮೇಲ್ಸೆ ತುವೆ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಕೇಂದ್ರ ಸರ್ಕಾರದ ಶೇ.60 ಮತ್ತು ರಾಜ್ಯ ಸರ್ಕಾರದ ಶೇ.40 ಅನುದಾನ ದಲ್ಲಿ ಸುಮಾರು ೨೫ ಕೋ. ರು. ವೆಚ್ಚದಲ್ಲಿ ಈ ಸೇತುವೆ ನಿರ್ಮಾಣ ಗೊಳಿಸಲಾಗಿದ್ದು, ಭದ್ರಾವತಿ ಅಭಿವೃದ್ಧಿ ಹೊಂದುತ್ತಿರುವ ನಗರ, ಶಿವಮೊಗ್ಗ ಅಭಿವೃದ್ಧಿ ಹೊಂದಿ ರುವ ಜಿಲ್ಲಾ ಕೇಂದ್ರವಾಗಿದೆ. ಈ ಎರಡು ನಗರಗಳ ಅಭಿವೃದ್ಧಿಗೆ ಪೂರಕವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜೊತೆಯಾಗಿ ಸುಮಾರು 175 ಕೋ. ರು. ವೆಚ್ಚದಲ್ಲಿ ರೈಲ್ವೆ ಸೇತುವೆ ಕಾಮ ಗಾರಿಗಳನ್ನು ಆರಂಭಿಸಲಾಗಿತ್ತು. 2 ವರ್ಷದ ಹಿಂದೆಯೇ 3 ಸೇತುವೆಗಳ ಕಾಮಗಾರಿ ಮುಕ್ತಾಯಗೊಂಡಿದ್ದು, ಈ ಸೇತುವೆ 2.5 ವರ್ಷ ಕಾಲಾ ವಧಿಯಲ್ಲಿ ಮುಕ್ತಾಯಗೊಂಡಿದೆ. ಇದರೊಂದಿಗೆ ಇಂದಿಗೆ ಎಲ್ಲಾ ರೈಲ್ವೆ ಸೇತುವೆ ಕಾಮಗಾರಿಗಳು ಮುಕ್ತಾಯಗೊಂಡಂತಾಗಿದೆ ಎಂದರು.

ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್ ಅರುಣ್, ಬಲ್ಕೀಶ್ ಬಾನು, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಮಣಿ ಎಎನ್‌ಎಸ್, ಮುಖಂಡ ರಾದ ಶಾರದ ಅಪ್ಪಾಜಿ, ಜಗ ದೀಶ್, ಎಸ್. ಕುಮಾರ್, ಜಿ. ಧರ್ಮಪ್ರಸಾದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post