ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿವ ಎಸ್ಎಸ್ಎಲ್ಸಿ ಪರೀಕ್ಷೆ-1 #SSLC Result-1 ಮೌಲ್ಯಮಾಪನ ಮುಕ್ತಾಯಗೊಂಡಿದ್ದು, ಮೇ.2ರ ಶುಕ್ರವಾರ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ #Minister Madhu Bangarappa ತಿಳಿಸಿದ್ದಾರೆ.
ನಗರದಲ್ಲಿ ಇಂದು ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಾಳೆ ಮಧ್ಯಾಹ್ನ 12.30ರ ನಂತರ ವೆಬ್ಸೈಟ್ನಲ್ಲಿ SSLC ಫಲಿತಾಂಶ ಲಭ್ಯವಾಗಲಿದೆ. http://karresults.nic.in ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದರು.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC ಅಥವಾ 10 ನೇ ತರಗತಿಯ ಬೋರ್ಡ್ ಪರೀಕ್ಷಾ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ https://kseab.karnataka.gov.in ಅಥವಾ https://karresults.nic.in ನಲ್ಲಿ ಪ್ರಕಟಿಸಲಿದೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಫಲಿತಾಂಶ ಪಡೆಯಬಹುದಾಗಿದೆ ಎಂದರು.
KAR 10 ಅಂತ ಬರೆದು ಸ್ಪೇಸ್ ಬಿಟ್ಟು ನೋಂದಣಿ ಸಂಖ್ಯೆ ಟೈಪ್ ಮಾಡಿ 56263ಗೆ ಸಂದೇಶ ಕಳುಹಿಸಿ. ಫಲಿತಾಂಶವನ್ನು ವಿದ್ಯಾರ್ಥಿಗಳು ಅದೇ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ.
ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗಿದೆ. 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. 15,881 ಶಾಲೆಗಳ ವಿದ್ಯಾರ್ಥಿಗಳು 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದಾರೆ.
ಈ ವರ್ಷ ಇನ್ನೂ ಎರಡು ಎಸ್ಎಸ್ಎಲ್ಸಿ ಪರೀಕ್ಷೆಗಳು (ಪರೀಕ್ಷೆ-2 ಮತ್ತು ಪರೀಕ್ಷೆ-3) ನಡೆಯಲಿವೆ. ಉತ್ತೀರ್ಣರಾಗದಿದ್ದರೆ ಅಥವಾ ಉತ್ತಮ ಅಂಕ ಲಭಿಸದಿದ್ದರೆ ವಿದ್ಯಾರ್ಥಿಗಳಿಗೆ ಇನ್ನೂ ಎರಡು ಅವಕಾಶಗಳಿವೆ. ಈ ಪರೀಕ್ಷೆಗಳು ಜೂನ್ ಮತ್ತು ಜುಲೈನಲ್ಲಿ ನಡೆಯುವ ಸಾಧ್ಯತೆ ಇದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post