ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) 2024-25ನೇ ಸಾಲಿನ SSLC-1 ವಾರ್ಷಿಕ ಪರೀಕ್ಷೆಯ ಫಲಿತಾಂಶ #SSLC Result ಇಂದು ಪ್ರಕಟವಾಗಿದ್ದು, ಪ್ರಸಕ್ತ ಸಾಲಿನಲ್ಲಿ ಶೇ. 66.14ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ #Minister Madhu Bangarappa ತಿಳಿಸಿದರು.
ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ ವರ್ಷಕ್ಕಿಂತ ಶೇಕಡಾ 8ರಷ್ಟು ಹೆಚ್ಚು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, 16 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಗಳಿಸಿದೆ ಎಂದರು.

ಇಂದು ಮಧ್ಯಾಹ್ನ 12.30ರ ನಂತರ ಇಲಾಖೆಯ ಜಾಲತಾಣ http://karresults.nic.in ದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post