ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕು ಸಕ್ರೆಬೈಲು ಬಳಿ ಘಟನೆ ಸಂಭವಿಸಿದೆ.
ಶ್ರೀಧರ್ (55 ವರ್ಷ) ಮೃತಪಟ್ಟ ದುರ್ದೈವಿ.
ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ಅಲ್ಲದೆ ರಸ್ತೆಯಿಂದ ಬದಿಗೆ ಇಳಿದಿದೆ. ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಶ್ರೀಧರ್ ಅವರನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ವೈದ್ಯರು ಶ್ರೀಧರ್ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post