ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕನ್ನಡ ಚಲನಚಿತ್ರ ನಟ, ನಿರ್ದೇಶಕ ಉಪೇಂದ್ರ #Upendra ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಇಂದು ಮಧ್ಯಾಹ್ನ ಹೊಟ್ಟೆಯುರಿಯಿಂದ (ಓವರ್ ಅಸಿಡಿಟಿಯಿಂದ) ಬಳಲುತ್ತಿದ್ದ ಅವರು ಮನೆಯಲ್ಲೇ ಪ್ರಾಥಮಿಕ ಚಿಕಿತ್ಸೆ ತೆಗೆದುಕೊಂಡಿದ್ದರಾದರೂ ಅದು ಶಮನವಾಗದ ಕಾರಣ, ತಮ್ಮ ನಿವಾಸಕ್ಕೆ ಹತ್ತಿರವಿರುವ ಸ್ಪರ್ಶ್ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ ಎನ್ನಲಾಗಿದೆ.
ಉಪ್ಪಿ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ಅಭಿಮಾನಿಗಳು ಗಾಬರಿಪಡುವ ಅವಶ್ಯಕತೆಯಿಲ್ಲ ಅಂತ ಆಪ್ತ ಮೂಲಗಳು ತಿಳಿಸಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post