ಕಲ್ಪ ಮೀಡಿಯಾ ಹೌಸ್ | ಶ್ರೀನಗರ |
ಪೂಂಚ್‌ನ ಸುರನ್‌ಕೋಟ್ ಅರಣ್ಯದಲ್ಲಿ ಭಾರತೀಯ ಸೇನೆ #Indian Army ಮತ್ತು ಜಮ್ಮು ಮತ್ತು ಕಾಶ್ಮೀರ #Jammu and Kashmir ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯ ಸಂದರ್ಭದಲ್ಲಿ ಭಯೋತ್ಪಾದಕರು ಬಳಸುತ್ತಿದ್ದ ಭೂಗತ ಅಡಗುತಾಣವನ್ನು ಸೇನೆ ಭೇದಿಸಿದ್ದು, 5 ಜೀವಂತ ಬಾಂಬ್ ವಶಕ್ಕೆ ಪಡೆದಿದೆ.
ಭಾನುವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಭಯೋತ್ಪಾದಕರು #Terrorist ಬಳಸುತ್ತಿದ್ದ ಭೂಗತ ಅಡಗುತಾಣವನ್ನು ಸೇನೆ ಭೇದಿಸಿದ್ದು, 5 ಸ್ಫೋಟಕಗಳು, ಐಇಡಿಯಿದ್ದ 3 ಟಿಫನ್ ಬಾಕ್ಸ್, 2 ಸ್ಟೀಲ್ ಬಕೆಟ್ ಪತ್ತೆಯಾಗಿವೆ. ಈ ಮೂಲಕ ಭಾರತೀಯ ಸೇನೆಯು ಅತಿದೊಡ್ಡ ದುರಂತವನ್ನು ತಪ್ಪಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post