ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜನಗಣತಿ ಜತೆಗೆ ಜಾತಿ ಗಣತಿಗೂ #Caste Census ಮುಂದಾಗಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ತಾವು ಸ್ವಾಗತಿಸುವುದಾಗಿ ಹೇಳಿರುವ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, #Minister Madhu Bangarappa ತಮ್ಮದೇ ಸರ್ಕಾರದ ಯೋಜನೆಯನ್ನು ಕೇಂದ್ರ ಸರ್ಕಾರ ಕಾಪಿ ಮಾಡಿದ್ದಕ್ಕೆ ಧನ್ಯವಾದ ಸಲ್ಲಿಸುವುದಾಗಿ ವ್ಯಂಗ್ಯವಾಡಿದರು.
ಅವರು ಇಂದು ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿ ಮಾತನಾಡಿ, ದೇಶದಲ್ಲಿ ಜನಗಣತಿ ನಡೆಯಬೇಕಿದೆ. ಹಾಗೆಯೇ ಜಾತಿ ಗಣತಿಯೂ ಆಗಬೇಕಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಸ್ವಾಗತಾರ್ಹ ಎಂದರು.

‘ನಾವು ಒಳ್ಳೆಯ ನಿರ್ಧಾರವನ್ನು ಯಾವಾಗಲೂ ಸ್ವಾಗತಿಸುತ್ತೇವೆ. ಆ ಸರ್ಕಾರ, ಈ ಸರ್ಕಾರ ಅಂತ ನೋಡುವುದಿಲ್ಲ, ಆದರೆ ಬಿಜೆಪಿಯವರಿಗೆ ಇಂತಹ ಗುಣವೇ ಇಲ್ಲ, ಅವರಿಗೆ ತಮ್ಮದ್ದಲ್ಲದೂ ಯಾವತ್ತಿಗೂ ಕೆಟ್ಟದ್ದಾಗಿಯೇ ಕಾಣುತ್ತದೆ. ಅದರೆ ವಾಸ್ತವ ಹಾಗಿರುತ್ತಾ? ನಾವು ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಾಗ ಹಾಗಾಯ್ತು, ಹೀಗಾಯ್ತು, ರಾಜ್ಯ ದಿವಾಳಿ ಆಯ್ತು ಅಂದ್ರು, ಕೊನೆಗೆ ದೇಶದ ವಿವಿಧ ರಾಜ್ಯಗಳಲ್ಲಿ ಚುನಾವಣೆ ಬಂದಾಗ ರಾಜ್ಯದ ಗ್ಯಾರೆಂಟಿ ಯೋಜನೆಗಳನ್ನೇ ಕಾಪಿ ಮಾಡಿದರು. ಜಾತಿ ಗಣತಿ ವಿಚಾರದಲ್ಲೂ ಹಾಗೆಯೇ ಆಗಿದೆ ಎಂದು ಕಟುಕಿದರು.
ಬಿಜೆಪಿ ಜಾತಿ ಗಣತಿಗೆ ವಿರುದ್ದವಾಗಿದ್ದರು. ದೇಶದಲ್ಲಿ ಜಾತಿ ಗಣತಿ ಆಗಬೇಕೆಂದು ರಾಹುಲ್ ಗಾಂಧಿ ಅವರು ಹೇಳಿದ್ದಾಗ ಲೇವಡಿ ಮಾಡಿದ್ದರು. ಈಗ ಈಗ ದೇಶದಲ್ಲಿ ಜನಗಣತಿ ಜತೆಗೆ ಜಾತಿ ಗಣತಿ ಮಾಡುವುದಾಗಿ ಹೇಳಿದ್ದಾರೆ. ಅವರ ವಿಲಕ್ಷಣ ಮನಸ್ಥಿತಿಗೆ ಇದು ಸಾಕ್ಷಿ ಎಂದು ಕಿಡಿಕಾರಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್, ಕಾಂಗ್ರೆಸ್ ಮುಖಂಡರಾದ ಕಲ್ಲುಗೋಡು ರತ್ನಾಕರ್, ಚಂದ್ರ ಭೂಪಾಲ್, ಕಲಿಂ ಪಾಶಾ, ಮಧು, ರಮೇಶ್ ಇಕ್ಕೇರಿ, ದೇವಿ ಕುಮಾರ್ ಸೇರಿದಂತೆ ಮತ್ತಿತರರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post