ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಭಾರತ-ಪಾಕಿಸ್ತಾನ #India-Pakistan ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿ #PM Narendra Modi ಅವರು ಮಂಗಳವಾರ ಪಂಜಾಬ್ನ ಆದಂಪುರ ವಾಯುನೆಲೆಗೆ ಭೇಟಿ ನೀಡಿ, ಯೋಧರೊಂದಿಗೆ ಮಾತುಕತೆ ನಡೆಸಿದ್ದಾರೆ.
ಮೋದಿಯವರು ವಾಯುನೆಲೆಗೆ #Airbase ಭೇಟಿ ನೀಡುತ್ತಿದ್ದಂತೆಯೇ ಸೈನಿಕರು ಸಂತಸದಿಂದ ಪ್ರಧಾನಮಂತ್ರಿಗಳನ್ನು ಸ್ವಾಗತಿಸಿದರು. ಮೋದಿಯವರನ್ನು ಸುತ್ತುವರೆದ ಅವರು ಮಾತುಕತೆ ನಡೆಸಿದರು. ಈ ವೇಳೆ ಭಾರತ್ ಮಾತಾ ಕೀ ಜೈ ಘೋಷವಾಕ್ಯ ಮುಗಿಲು ಮುಟ್ಟಿತ್ತು.
ಈ ಕುರಿತ ಫೋಟೋಗಳನ್ನು ಪ್ರಧಾನಮಂತ್ರಿಗಳ ಕಚೇರಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದ್ದು, ಇಂದು ಬೆಳಿಗ್ಗೆ, ಎಎಫ್ಎಸ್ ಆದಂಪುರಕ್ಕೆ ಹೋಗಿ ನಮ್ಮ ವೀರ ಯೋಧರು ಮತ್ತು ಸೈನಿಕರನ್ನು ಭೇಟಿಯಾದೆ. ಧೈರ್ಯ, ದೃಢನಿಶ್ಚಯ ಮತ್ತು ನಿರ್ಭಯತೆಯನ್ನು ಸಾರುವವರೊಂದಿಗೆ ಇರುವುದು ಬಹಳ ವಿಶೇಷ ಅನುಭವವಾಗಿತ್ತು. ನಮ್ಮ ಸಶಸ್ತ್ರ ಪಡೆಗಳು ನಮ್ಮ ರಾಷ್ಟ್ರಕ್ಕಾಗಿ ಮಾಡುತ್ತಿರುವ ಸೇವೆಗೆ ಇಡೀ ದೇಶ ಅವರಿಗೆ ಶಾಶ್ವತವಾಗಿ ಕೃತಜ್ಞವಾಗಿದೆ ಎಂದು ಮೋದಿಯವರು ಹೇಳಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡ ಕೆಲವು ದಿನಗಳ ನಂತರ ಪ್ರಧಾನಿ ಮೋದಿ ಇಂದು ಪಂಜಾಬ್ನ ಅದಮ್ಪುರ ವಾಯುನೆಲೆಗೆ ಭೇಟಿ ನೀಡಿ ಸೈನಿಕರೊಂದಿಗೆ ಸಂವಾದ ನಡೆಸಿದ್ದಾರೆ,
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post