ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -2ರ ಫಲಿತಾಂಶ ಪ್ರಕಟಗೊಂಡಿದ್ದು ವಿಜ್ಞಾನ ವಿಭಾಗದಲ್ಲಿ ಮೂವರು ವಿದ್ಯಾರ್ಥಿಗಳು ಅಗ್ರ ಹತ್ತರೊಳಗೆ ರ್‍ಯಾಂಕ್‌ಗಳನ್ನು ಪಡೆದುಕೊಂಡಿದ್ದಾರೆ.
ದ್ವಿತೀಯ ವಿಜ್ಞಾನ ವಿಭಾಗದ ಶ್ರೀಯಾ 195 ಅಂಕಗಳೊಂದಿಗೆ ರಾಜ್ಯಮಟ್ಟದಲ್ಲಿ ಆರನೇ ರ್‍ಯಾಂಕ್ ಪಡೆದುಕೊಂಡಿದ್ದಾಳೆ. ಅದೇ ರೀತಿ ವಿಜ್ಞಾನ ವಿಭಾಗದಲ್ಲಿ ರಶ್ಮೀ 591 ಹಾಗೂ ಅಮೂಲ್ಯ 591 ಅಂಕಗಳೊಂದಿಗೆ ರಾಜ್ಯಮಟ್ಟದಲ್ಲಿ ಹತ್ತನೇ ರ್‍ಯಾಂಕ್ ಪಡೆದುಕೊಂಡಿದ್ದಾರೆ.
ಈ ಮೂಲಕ ಸಂಸ್ಥೆಯು ಈ ವರ್ಷದಲ್ಲಿ ವಿಜ್ಞಾನ ವಿಭಾಗದಲ್ಲಿ ನಾಲ್ಕು ಹಾಗೂ ವಾಣಿಜ್ಯ ವಿಭಾಗದಲ್ಲಿ ನಾಲ್ಕು ರ್‍ಯಾಂಕ್‌ಗಳೊಂದಿಗೆ ಒಟ್ಟು ಎಂಟು ರ್‍ಯಾಂಕ್‌ಗಳನ್ನು ತನ್ನದಾಗಿಸಿಕೊಂಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















