No Result
View All Result
Bengaluru Banaswadi MEMU Shed GM Inspection
English Articles

SWR : GM Reviews MEMU Operations and Infrastructure at Banaswadi

by kalpa News
September 12, 2026
0

Kalpa Media House  |  Bengaluru  | South Western Railway (SWR) General Manager P. Ananth conducted a detailed review of MEMU...

Read moreDetails
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಒಂದೇ ಮಳೆಗೆ ಬ್ರಾಂಡ್ ಬೆಂಗಳೂರು ನಿಜ ಬಣ್ಣ ಬಯಲು | ಪ್ರತಿಪಕ್ಷದ ನಾಯಕ ಆರ್. ಅಶೋಕ್

kalpa News by kalpa News
May 19, 2025
in ಬೆಂಗಳೂರು ನಗರ
0
ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ | ವಿಪಕ್ಷ ನಾಯಕ ಆರ್‌. ಅಶೋಕ ಆಕ್ರೋಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿರುವ ಮಳೆ ಅನಾಹುತ ಪರಿಹಾರ ಕಾರ್ಯಕ್ಕೆ ತಕ್ಷಣ ಒಂದು ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ #R Ashok ಸರ್ಕಾರವನ್ನು ಆಗ್ರಹಿಸಿದ್ದಾರೆ.

ಭಾನುವಾರ ರಾತ್ರಿ ನಗರದಲ್ಲಿ 103 ರಿಂದ 130 ಮಿಲಿ ಮೀಟರ್ ವರೆಗೆ ಮಳೆ ಬಿದ್ದು ಇಡೀ ನಗರದಲ್ಲಿ ಅವಾಂತರ ಸೃಷ್ಟಿಯಾಗಿದ್ದು, ತ್ವರಿತಗತಿಯಲ್ಲಿ ಪರಿಹಾರ ಕಾರ್ಯ ಕೈಗೆತ್ತಿಕೊಂಡು ಸಂತ್ರಸ್ತರ ನೆರವಿಗೆ ಧಾವಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

https://kalpa.news/wp-content/uploads/2025/03/PES-Video.mp4

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮುಂಗಾರು ಪೂರ್ವದ ಒಂದೇ ಒಂದು ಮಳೆ ಕಾಂಗ್ರೆಸ್ ಸರ್ಕಾರದ “ಬ್ರಾಂಡ್ ಬೆಂಗಳೂರು”ನ #Brand Bangalore ನಿಜ ಬಣ್ಣ ಬಯಲು ಮಾಡಿದೆ. ಇಂತಹ ಸನ್ನಿವೇಶದಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಸಿಎಂ, ಡಿಸಿಎಂ ಮತ್ತು ಸಚಿವರು ಸಾಧನಾ ಸಮಾವೇಶದಲ್ಲಿ ಮೆರೆದಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾನುವಾರ ಮಧ್ಯ ರಾತ್ರಿಯಿಂದಲೇ ನಗರದ ನಾನಾ ಪ್ರದೇಶಗಳಿಂದ ತಮಗೆ ದೂರವಾಣಿ ಕರೆಗಳ ಮಹಾಪೂರ ಹರಿದು ಬರುತ್ತಿದೆ. ಅನೇಕ ಬಡಾವಣೆಗಳು ಜಲಾವೃತವಾಗಿವೆ, ನೂರಾರು ವಾಹನಗಳು ಪ್ರವಾಹದಲ್ಲಿ ತೇಲಿ ಹೋಗಿವೆ, ಅನಾಥಾಶ್ರಮಕ್ಕೂ ನೀರು ನುಗ್ಗಿದೆ, ಇಡೀ ರಾತ್ರಿ ಜನರು ಜಾಗರಣೆ ಮಾಡುತ್ತಿದ್ದಾರೆ, ಅವರಿಗೆ ಊಟದ ವ್ಯವಸ್ಥೆ ಇಲ್ಲ, ಇಷ್ಟಾದರೂ ಬಿಬಿಎಂಪಿ ನೆರವಿಗೆ ಮುಂದಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹೊಣೆಗೇಡಿತನದ ಪರಮಾವಧಿ

ಕಳೆದ ಮುಳುಗಡೆಯಾಗಿದ್ದ ಸಾಯಿ ಬಡಾವಣೆ, ನಂದಗೋಕುಲ ಬಡಾವಣೆ ಸೇರಿದಂತೆ ಅನೇಕ ಬಡಾವಣೆಗಳಿಗೆ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ಮತ್ತು ಪಾಲಿಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಶಾಶ್ವತ ಪರಿಹಾರದ ಭರವಸೆ ನೀಡಿದ್ದರು. ಆದರೆ, ಅದು ಮಾತಿನಲ್ಲೇ ಉಳಿದು ಈ ಸಲ ಮತ್ತೆ ಆ ಬಡಾವಣೆಗಳು ನೀರಿನಲ್ಲಿ ಮುಳುಗಿವೆ. ಆದರೂ ನಿವಾಸಿಗಳ ಅಳಲು ಕೇಳಲು ಯಾರೂ ಮುಂದಾಗಿಲ್ಲ ಎಂದು ಟೀಕಿಸಿದ್ದಾರೆ.

ಮೂರು ವ್ಯಾಲಿಗಳಲ್ಲೂ ಪ್ರವಾಹ

ಹೆಬ್ಬಾಳ, ಕೋರಮಂಗಲ ಮತ್ತು ವೃಷುಭಾವತಿ ವ್ಯಾಲಿಯಲ್ಲಿ ಪ್ರವಾಹ ಬಂದಿದೆ. ಇನ್ನೂ ಮೂರು – ನಾಲ್ಕು ದಿನ ಭಾರಿ ಮಳೆ ಬೀಳುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಕ್ಷಣ ತುರ್ತು ಪರಿಹಾರ ಕಾರ್ಯಪಡೆ ರಚಿಸಿ, ಸಹಾಯವಾಣಿ ಆರಂಭಿಸಬೇಕು.

ನೀರು ನುಗ್ಗಿರುವ ಮನೆಗಳಿಗೆ ತಲಾ ಕನಿಷ್ಠ ಒಂದು ಲಕ್ಷ ರೂ. ಪರಿಹಾರ ವಿತರಿಸಬೇಕು. ಆ ಮನೆಯವರಿಗೆ ಊಟ, ತಿಂಡಿ ವ್ಯವಸ್ಥೆ ಮಾಡಿ ಎರಡು ತಿಂಗಳಿಗೆ ಆಗುವಷ್ಟು ಪರಿಹಾರ ವಿತರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಜಾಗತಿಕ ಮಟ್ಟದಲ್ಲಿ ಅಪಮಾನ

ಹಿಂದಿನ ವರ್ಷದ ಲೋಪಗಳಿಂದ ಪಾಠ ಕಲಿಯದ ಸರ್ಕಾರದ ಬೇಜವಾಬ್ದಾರಿತನದಿಂದ ನಗರದಲ್ಲಿ ಅನಾಹುತ ಸಂಭವಿಸಿದೆ. ಮುಂಚಿತವಾಗಿ ಮೋರಿ, ಚರಂಡಿ, ರಾಜ ಕಾಲುವೆಗಳಲ್ಲಿ ಹೂಳು ತೆಗೆಸುವ ಕೆಲಸ ಮಾಡಬೇಕಿತ್ತು. ನಗರದ ಅನೇಕ ಕಡೆ ವೈಟ್ ಟಾಫಿಂಗ್ ಮತ್ತು ರಿಪೇರಿ ಕಾಮಗಾರಿ ನಡೆಯುತ್ತಿದ್ದು ಅಲ್ಲಿನ ಅವಶೇಷಗಳನ್ನು ತೆರವು ಮಾಡಿದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ.

ಬಿಬಿಎಂಪಿ ಮುನ್ನೆಚ್ಚರಿಕೆ ವಹಿಸದಿರುವುದೇ ಅನಾಹುತಗಳಿಗೆ ಕಾರಣ ಎಂದು ಖುದ್ದು ಗೃಹ ಸಚಿವ ಪರಮೇಶ್ವರ ಅವರು ಹೇಳಿದ್ದಾರೆ. ಉಸ್ತುವಾರಿ ಸಚಿವ ಡಿಕೆಶಿ ಅವರ ವೈಫಲ್ಯಕ್ಕೆ ಇದಕ್ಕಿಂತ ಇನ್ಯಾವುದೇ ಸರ್ಟಿಫಿಕೇಟ್ ಬೇಕಾ ಎಂದು ಅವರು ವ್ಯಂಗ್ಯವಾಡಿದ್ದಾರೆ.
ಮನೆ ಬಾಗಿಲಿಗೆ ಪರಿಹಾರ ಅಲ್ಲ; ಕೊಳಚೆ ನೀರು

ಕಳೆದ ವರ್ಷ ವಿಧಾನಸಭೆ ಕ್ಷೇತ್ರಗಳಲ್ಲಿ ಮನೆ ಬಾಗಿಲಿಗೆ ಪರಿಹಾರ ಹೆಸರಿನಲ್ಲಿ ಜನಸಂಪರ್ಕ ಸಭೆಗಳನ್ನು ನಡೆಸಿದ್ದ ಶಿವಕುಮಾರ್ ಅವರು, ಸಾರ್ವಜನಿಕರಿಗೆ ಭರವಸೆಗಳ ಮಹಾಪೂರವನ್ನೇ ಹರಿಸಿದ್ದರು. ಈಗ ಅದೆಲ್ಲಾ ಏನಾಯಿತು ಎಂಬ ಉತ್ತರ ನೀಡಬೇಕು. ಅವರು ಪರಿಹಾರ ನೀಡಲಿಲ್ಲ, ಪ್ರವಾಹದ ನೀರು ಮತ್ತು ಕಸದ ರಾಶಿಯನ್ನು ಮನೆಬಾಗಿಲಿಗೆ ತಂದು ಹಾಕಿದ್ದಾರೆ ಎಂದು ಗೇಲಿ ಮಾಡಿದ್ದಾರೆ.

ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬಂತೆ ವರ್ತಿಸಿರುವ ಶಿವಕುಮಾರ್ ಅವರು, ಹಿಂದಿನ ಸರ್ಕಾರದ ಲೋಪ ಅನಾಹುತಕ್ಕೆ ಕಾರಣ ಎಂದಿದ್ದಾರೆ. ಆಗಾದರೆ ಎರಡು ವರ್ಷಗಳ ಕಾಲ ಇವರು ಕಡಿದು ಕಟ್ಟೆ ಹಾಕಿದ್ದೇನು? ಇದೇನಾ ಇವರ ಬ್ರಾಂಡ್ ಬೆಂಗಳೂರು? ಹೆಸರಿಗೆ ಮಾತ್ರ ಗ್ರೆಟರ್, ದಿನವೂ ಜನರಿಗೆ ಟಾರ್ಚರ್ ತಪ್ಪಿಲ್ಲ. ಒಂದೇ ಮಳೆಗೆ ಇವರ ಬ್ರಾಂಡ್ ಬೆಂಗಳೂರು ಕೊಚ್ಚಿ ಹೋಯ್ತು. ಜಾಗತಿಕ ಮಟ್ಟದಲ್ಲಿ ಬೆಂಗಳೂರು ಮಾನ ಹರಾಜಾಗಿದೆ ಎಂದು ಅಶೋಕ್ ಕಿಡಿ ಕಾರಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

               

Tags: BangaloreBrand BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaR Ashokಆರ್. ಅಶೋಕ್ಬೆಂಗಳೂರುಬ್ರಾಂಡ್ ಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆ |ಯಾವ ಪುರುಷಾರ್ಥಕ್ಕೆ ಸಮಾವೇಶ | ಸಿ.ಟಿ. ರವಿ ತರಾಟೆ

Next Post

ವಾಯುಭಾರ ಕುಸಿತ | ಈ ದಿನಾಂಕದವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

kalpa News

kalpa News

Next Post
ರಮಣೀಯತೆ ಪಡೆದುಕೊಂಡ ಮಲೆನಾಡಿನ ಮಳೆ | ಶಿವಮೊಗ್ಗ, ಶೃಂಗೇರಿಯಲ್ಲಿ ಹೇಗಿದೆ?

ವಾಯುಭಾರ ಕುಸಿತ | ಈ ದಿನಾಂಕದವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

Leave a Reply Cancel reply

Your email address will not be published. Required fields are marked *

No Result
View All Result
Bengaluru Banaswadi MEMU Shed GM Inspection
English Articles

SWR : GM Reviews MEMU Operations and Infrastructure at Banaswadi

by kalpa News
September 12, 2026
0

Kalpa Media House  |  Bengaluru  | South Western Railway (SWR) General Manager P. Ananth conducted a detailed review of MEMU...

Read moreDetails
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL