ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಜಾರಿ ನಿರ್ದೇಶನಾಲಯ ಗೃಹ ಸಚಿವ ಜಿ.ಪರಮೇಶ್ವರ್ #Home Minister Parameshwar ಅವರಿಗೆ ಶಾಕ್ ನೀಡಿದ್ದು, ಅವರ ಒಡೆತನದ ‘ಸಿದ್ದಾರ್ಥ ಶಿಕ್ಷಣ ಸಂಸ್ಥೆ’ #Siddhartha Educational Institute ಮೇಲೆ ಇಡಿ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿ, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ಹೆಗ್ಗೆರೆ ಬಳಿಯಿರುವ ಸಿದ್ದಾರ್ಥ್ ಮೆಡಿಕಲ್ ಕಾಲೇಜು, ತುಮಕೂರಿನ ಎಸ್ಎಸ್ಐಟಿ ಕಾಲೇಜು ಸೇರಿದಂತೆ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ #ED Raid ನಡೆಸಿದೆ. ಅಲ್ಲದೆ, ನೆಲಮಂಗಲದ ಟಿ. ಬೇಗೂರಿನಲ್ಲಿರುವ ಕಾಲೇಜಿನ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಇಂದು ಬೆಳಗ್ಗೆಯಿಂದಲೇ ಇಡಿ ಅಧಿಕಾರಿಗಳು ಈ ಸಂಸ್ಥೆಗಳಿಗೆ ಆಗಮಿಸಿ ಪರಿಶೀಲನೆ ಪ್ರಕ್ರಿಯೆ ಆರಂಭಿಸಿದ್ದಾರೆ. ಕಾಲೇಜು ಆವರಣದಲ್ಲಿ ದಾಖಲೆಪತ್ರಗಳ ಪರಿಶೀಲನೆ ನಡೆಯುತ್ತಿದೆ. 9 ಕಾರುಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಾಲ್ಕು ವರ್ಷದ ಹಿಂದೆಯೂ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಈ ದಾಳಿ ಸಂದರ್ಭದಲ್ಲಿ ಕೋಟ್ಯಾಂತರ ರೂಪಾಯಿ ವಶಕ್ಕೆ ಪಡೆಯಲಾಗಿತ್ತು. ಬಳಿಕ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post