ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಹಿಳೆಯರು ಸಾಮಾಜಿಕ, ಆರ್ಥಿಕ ಹಾಗೂ ಕೌಟುಂಬಿಕ ಸ್ಥಿತಿಗತಿಗಳನ್ನು ಉತ್ತಮ ಪಡಿಸಲು ಸರ್ಕಾರ ಹಲವಾರು ಕಾನೂನುಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳುವ ಹೊಣೆಗಾರಿಕೆ ಮಹಿಳೆಯರ ಮೇಲಿದೆ ಎಂದು ಅಸಂಘಟಿತ ಕೂಲಿ ಕಾರ್ಮಿಕರ ಮಹಿಳಾ ಜಿಲ್ಲಾಧ್ಯಕ್ಷೆ ಕವಿತಾ ಥೋರತ್ ಹೇಳಿದರು.
ಅವರು ನಗರದ ಆಲ್ಕೋಳದಲ್ಲಿರುವ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ ಎಸ್.ಎಂ.ಎಸ್.ಎಸ್. ಚೈತನ್ಯದಲ್ಲಿ ಆಯೋಜಿಸಿದ್ದ ಒಕ್ಕೂಟದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪ್ರೇಮ್ ಕುಮಾರ್ ಮಾತನಾಡಿ, ಸಮಾಜದಲ್ಲಿ ಹೆಣ್ಣಿಗೆ ವಿಶೇಷ ಸ್ಥಾನ ಮಾನ ಕಲ್ಪಿಸಲಾಗಿದೆ. ಯಾವುದೇ ಕ್ಷೇತ್ರಗಳಲ್ಲಿ ಹೆಣ್ಣು ಕೆಲಸ ಮಾಡುವುದಕ್ಕೆ ಹಿಂಜರಿಯುವ ಕಾಲ ಈಗಿಲ್ಲ. ಇದೀಗ ಮಹಿಳೆಯರು ಪುರುಷರು ನಿರ್ವಹಿಸಬಹುದಾದ ಎಲ್ಲ ಕೆಲಸ ಕಾರ್ಯಗಳನ್ನು ಸಮರ್ಪಕವಾಗಿ ಮಾಡುತ್ತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷೆ ರೂಪ, ರಾಜ್ಯ ಮಹಿಳಾ ಒಕ್ಕೂಟದ ಪ್ರತಿನಿಧಿ ಶ್ವೇತಾ , ಜನಶಿಕ್ಷಣ ಸಂಸ್ಥೆಯ ಜಗದೀಶ್ ಸೇರಿದಂತೆ ಒಕ್ಕೂಟದ ಪ್ರತಿನಿಧಿಗಳು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post