ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ಚಲಿಸುತ್ತಿದ್ದ ಬೈಕ್ ನ್ನು ಏಕಾಏಕಿ ಟ್ರಾಫಿಕ್ ಪೊಲೀಸ್ #Traffic Police ಅಡ್ಡಗಟ್ಟಿದ್ದು, ಪರಿಣಾಮವಾಗಿ ಬೈಕ್ ನಲ್ಲಿದ್ದ ಮಗು ರಸ್ತೆಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಸ್ವರ್ಣಸಂದ್ರದ ಬಳಿ ನಡೆದಿದೆ.
ಮೃತ ಮಗುವನ್ನು ರಿತ್ವಿಕ್ಷಾ(3) ಎಂದು ಗುರುತಿಸಿದ್ದು, ಮಂಡ್ಯದ ಮದ್ದೂರು ತಾಲ್ಲೂಕಿನ ಗೊರವನಹಳ್ಳಿ ಗ್ರಾಮದ ರಿತ್ವಿಕ್ಷಾ ತನ್ನ ತಂದೆ–ತಾಯಿಯ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದನು. ಈ ವೇಳೆ ಸ್ವರ್ಣಸಂದ್ರದ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ಟ್ರಾಫಿಕ್ ಪೊಲೀಸರು ಬೈಕ್ನ್ನು ಅಡ್ಡಗಟ್ಟಲು ಯತ್ನಿಸಿದ್ದಾರೆ. ಬೈಕ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ರಿತ್ವಿಕ್ಷಾ ತಲೆಗೆ ಗಂಭೀರ ಗಾಯವಾದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.
ಘಟನಾ ಸ್ಥಳದಲ್ಲಿ ಸಾರ್ವಜನಿಕರು ಪೊಲೀಸರ ವಿರುದ್ದ ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯದ ಮಿಮ್ಸ್ ಆಸ್ಪತ್ರೆ ಮುಂಭಾಗ ಮಗುವಿನ ಶವವಿಟ್ಟು ಪ್ರತಿಭಟನೆ ನಡೆಸಲಾಗಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















