ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸ್ವತಂತ್ರ ಭಾರತದ ಮೊದಲನೇ ಪ್ರಧಾನಿ ಜವಾಹರ್ ಲಾಲ್ ನೆಹರು #Jawaharlal Nehru ಅವರು ಆಧುನಿಕ ಭಾರತದ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ತಿಳಿಸಿದರು.
ಅವರು ಇಂದು ವಿಧಾನಸೌಧದ ಪೂರ್ವ ದ್ವಾರದ ಬಳಿ ಇರುವ ಮಾಜಿ ಪ್ರಧಾನ ಮಂತ್ರಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರು ರವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೇ ಹಾಗೂ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.

ನೆಹರೂ ಅವರನ್ನು ಗೌರವದಿಂದ ಸ್ಮರಿಸುವ ಕೆಲಸವನ್ನು ಪ್ರತಿಯೊಬ್ಬ ಭಾರತೀಯನೂ ಮಾಡಬೇಕು. ಆಧುನಿಕ ಭಾರತಕ್ಕೆ ನೆಹರೂ ಅಡಿಪಾಯ ಹಾಕಿರದೇ ಹೋಗಿದ್ದರೆ ಇಂದಿನ ಭಾರತ ಇರುತ್ತಿರಲಿಲ್ಲ. ಆರ್ಥಿಕತೆಯಲ್ಲಿ ಜಗತ್ತಿನಲ್ಲಿ 5 ನೇ ಸ್ಥಾನದಲ್ಲಿದ್ದರೆ ಅದಕ್ಕೆ ನೆಹರೂ ಅವರೇ ಕಾರಣ ಎಂದರು.

ಕೋವಿಡ್ ಸಂಬಂಧಿಸಿದಂತೆ ನಿನ್ನೆ ನಡೆದ ಸಭೆಯಲ್ಲಿ ಮುನ್ನೆಚ್ಚರಿಕಾ ಬಗ್ಗೆ ಚರ್ಚಿಸಲಾಗಿದೆ. ನಾವು ಎಲ್ಲದ್ದಕ್ಕೂ ಸಿದ್ಧರಾಗಿರಬೇಕು. ವೆಂಟಿಲೇಟರ್, ಆಮ್ಲಜನಕ, ವಾರ್ಡ್ ಗಳಿಗೆ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ. ಸುಮಾರು 65 ಇದ್ದ ಪ್ರಕರಣಗಳು 80 ಆಗಿವೆ. ಇದು ಗಂಭೀರವಾದ ತಳಿಯಲ್ಲ. ನೆಗಡಿ, ಕೆಮ್ಮು, ಜ್ವರ ಬಂದಿರುವ ಮಕ್ಕಳನ್ನು ಶಾಲೆಗೆ ಕಳುಹಿಸಬಾರದು ಹಾಗೂ ವೃದ್ಧರು, ವಿವಿಧ ಕಾಯಿಲೆಗಳಿಗೆ ತುತ್ತಾಗಿರರುವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಲಸಿಕೆಗಳನ್ನು. ಮುನ್ನೆಚ್ಚರಿಕಾ ಕ್ರಮವಾಗಿ ಸಂಗ್ರಹಿಸಬೇಕು ಎಂದು ಸೂಚಿಸಲಾಗಿದೆ ಎಂದರು.
ಎಲ್ಲರೂ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿಲ್ಲ. ಆದರೆ ವೃದ್ಧರು, ಕಾಯಿಲೆಯಿರುವವರು ಮಾಸ್ಕ್ ಕಡ್ಡಾಯವಾಗಿ ಹಾಕಿಕೊಳ್ಳುವಂತೆ ಸೂಚಿಸಲಾಗಿದೆ ಎಂದರು.
ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಮಾಡಲು ಕೇಂದ್ರದಿಂದ ಸೂಚನೆ ಬಂದಿಲ್ಲ. ಆದರೆ ಎಚ್ಚರಿಕೆ ವಹಿಸಲಾಗುವುದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post