ಕಲ್ಪ ಮೀಡಿಯಾ ಹೌಸ್ | ಗೋಕರ್ಣ |
ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರನ್ನು ಗುರುತಿಸಿ ಶ್ರೀರಾಮಚಂದ್ರಾಪುರ ಮಠದಿಂದ #Shri Ramachandrapura Mutt ವಾರ್ಷಿಕವಾಗಿ ಕೊಡಮಾಡುವ ವಿವಿಧ ಪ್ರಶಸ್ತಿಗಳ ಪ್ರದಾನ ಸಮಾರಂಭ ಈ ತಿಂಗಳ 31ರಂದು ಮಧ್ಯಾಹ್ನ 12.30ಕ್ಕೆ ಗೋಕರ್ಣ ಅಶೋಕೆಯ ಗುರುದೃಷ್ಟಿ ಸಭಾಭವನದಲ್ಲಿ ನಡೆಯಲಿದೆ.
ವಿವಿಧ ಕ್ಷೇತ್ರಗಳಲ್ಲಿ ಅನುಪಮ ಸಾಧನೆ ಮಾಡಿದ ಏಳು ಮಂದಿಗೆ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ಆರು ಪ್ರಶಸ್ತಿಗಳನ್ನು ಅನುಗ್ರಹಿಸುವರು ಎಂದು ಶ್ರೀಮಠದ ಸಿಓಓ ಸಂತೋಷ್ ಹೆಗಡೆ ಹೇಳಿದ್ದಾರೆ.

ಪಾಂಡಿತ್ಯದ ಮೂಲಕ ಸನಾತನೆಯನ್ನು ಸಂರಕ್ಷಿಸಿದ ಮಹತ್ವಕ್ಕೆ ಸಾರ್ಥಕ ಗೌರವವಾಗಿ ಪಾಂಡಿತ್ಯ ಪುರಸ್ಕಾರ, ಶ್ರೀಶಂಕರ ಭಗವತ್ಪಾದರ ಜೀವನ ಸಂದೇಶಗಳ ಪ್ರಸಾರಕ್ಕೆ ಕಟಿಬದ್ಧರಾದ ಅನುಪಮತೆಗೆ ಶಂಕರ ಕಿಂಕರ ಪ್ರಶಸ್ತಿ, ಲೋಕದ ಒಳಿತಿಗಾಗಿ ಪರಿಶ್ರಮಿಸಿದ ಹಿರಿತನಕ್ಕೆ ಸಾರ್ಥಕ ಗೌರವವಾಗಿ ಪುರುಷೋತ್ತಮ ಪ್ರಶಸ್ತಿ, ಸತ್ಕಾರ್ಯಗಳ ಮೂಲಕ ಸಮೂಹಕ್ಕೆ ಮಮತೆ ಉಣಿಸಿದ ಸಂವೇದನೆಗೆ ಸಾರ್ಥಕ ಗೌರವವಾಗಿ ಶ್ರೀಮಾತಾ ಪ್ರಶಸ್ತಿ, ಸಮಾಜೋದ್ಧಾರಕ್ಕೆ ಕೊಟ್ಟ ವಿಶಿಷ್ಟ ಕೊಡುಗೆಗೆ ಸಾರ್ಥಕ ಗೌರವವಾಗಿ ಚಾತುರ್ಮಾಸ್ಯ ಪ್ರಶಸ್ತಿ ಹಾಗೂ ಶ್ರೀಗುರುಪೀಠಕ್ಕೆ ಸಲ್ಲಿಸಿದ ಸೇವೆಯ ಆದರ್ಶಕ್ಕೆ ಸಾರ್ಥಕ ಗೌರವವಾಗಿ ಧನ್ಯಸೇವಕ ಪ್ರಶಸ್ತಿ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ನಾಡಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರನ್ನು ಶ್ರೀಮಠದ ಗೌರವ ಪ್ರಶಸ್ತಿಗಳಿಂದ ಪುರಸ್ಕರಿಸುವ ಈ ಅಪೂರ್ವ ಸಮಾರಂಭದಲ್ಲಿ ಶ್ರೀಮಠದ ಶಿಷ್ಯಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹವ್ಯಕ ಮಹಾಮಂಡಲ ಅಧ್ಯಕ್ಷ ಮೋಹನ ಭಾಸ್ಕರ ಹೆಗಡೆ ಹಾಗೂ ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು ಮನವಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post