No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Sunday, August 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕ್ರಿಯಾಶೀಲತೆಯ ಸಂಗಮ ‘ಸಾಹಿತ್ಯ ಗ್ರಾಮ’ ರಾಜ್ಯಕ್ಕೆ ಮಾದರಿ: ಸಚಿವ ಮಧು ಬಂಗಾರಪ್ಪ

ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪ ಸ್ಮಾರಕ ಗ್ರಂಥಾಲಯ ಲೋಕಾರ್ಪಣೆ

kalpa News by kalpa News
May 28, 2025
in ಶಿವಮೊಗ್ಗ
0
ಕ್ರಿಯಾಶೀಲತೆಯ ಸಂಗಮ ‘ಸಾಹಿತ್ಯ ಗ್ರಾಮ’ ರಾಜ್ಯಕ್ಕೆ ಮಾದರಿ: ಸಚಿವ ಮಧು ಬಂಗಾರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಾಹಿತ್ಯಾತ್ಮಕ ಬರವಣಿಗೆ, ಅಧ್ಯಯನದಂತಹ ಕ್ರಿಯಾಶೀಲತೆಯ ಸಂಗಮವಾದ ಸಾಹಿತ್ಯ ಗ್ರಾಮ ಯೋಜನೆಯು ರಾಜ್ಯಕ್ಕೆ ಮಾದರಿಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವ ಮಧು ಬಂಗಾರಪ್ಪ #Minister Madhu Bangarappa ಅಭಿಪ್ರಾಯಪಟ್ಟರು.

ಬುಧವಾರ ನಗರದ ಗೋಪಿಶೆಟ್ಟಿಕೊಪ್ಪದ ಸಾಹಿತ್ಯ ಗ್ರಾಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ರೂಪಿಸಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪ ಅವರ ಸ್ಮಾರಕ ಗ್ರಂಥಾಲಯವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಬಂಗಾರಪ್ಪ ಅವರ ಹೆಸರಿನಲ್ಲಿ ಸಾಹಿತ್ಯ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಗ್ರಂಥಾಲಯದ ಮೂಲಕ, ಕನ್ನಡ ಸಾಹಿತ್ಯ ಪರಿಷತ್ತು ಬಂಗಾರಪ್ಪ ಅವರಿಗೆ ದೊಡ್ಡ ಗೌರವ ನೀಡಿದೆ. ಸಾಹಿತ್ಯ ಗ್ರಾಮ ಯೋಜನೆಯು ಎಲ್ಲ ಜಿಲ್ಲೆಗಳಿಗೆ ವಿಸ್ತರಿಸಲಿ. ಸಾಹಿತಿಗಳು, ಚಿಂತಕರು ಒಂದೆಡೆ ಸೇರಿ ಸಮಾಜದ ಉನ್ನತಿಯ ಕುರಿತಾಗಿ ಚರ್ಚಿಸುವ ಚಿಂತಕರ ಚಾವಡಿಯಾಗಿ ರೂಪಗೊಳ್ಳಲಿ. ಅಂತಹ ಸೃಜನಶೀಲ ಚಿಂತನೆಗಳ ಮೂಲಕ ಯುವ ಸಮೂಹಕ್ಕೆ ಸಾಹಿತ್ಯ ಬರವಣಿಗೆಯ ಮಾರ್ಗದರ್ಶನದ ಕೇಂದ್ರವಾಗಿ, ಪ್ರೇರಣೀಯ ವೇದಿಕೆಯಾಗಲಿ ಎಂದು ಆಶಿಸಿದರು.‌

ಕರ್ನಾಟಕ ಸರ್ಕಾರ ಸಾಹಿತಿಗಳಿಗೆ ಹೆಚ್ಚು ಬಲ ತುಂಬುವ ಕೆಲಸ ಮಾಡುತ್ತಿದೆ. ಸೃಜನಶೀಲ ಸಾಹಿತ್ಯ ಚಟುವಟಿಕೆಗಳಿಗೆ ಹೆಚ್ಚು ಪೂರಕ ವಾತಾವರಣ ನಿರ್ಮಾಣ ಮಾಡುವತ್ತ ಕಾಳಜಿ ತೋರುತ್ತಿದೆ. ಈಚೆಗೆ ಸರ್ಕಾರದಿಂದ ಏರ್ಪಡಿಸಿದ್ದ ಗಾಂಧಿ ಭಾರತ ಕಾರ್ಯಕ್ರಮದ ಮೂಲಕ ಮುಂದಿನ ಪೀಳಿಗೆಗೆ ಗಾಂಧೀಜಿಯವರ ಆದರ್ಶ ಕಾರ್ಯಗಳನ್ನು ಬಿತ್ತುವ ಕಾರ್ಯ ಮಾಡುತ್ತಿದ್ದೇವೆ.
ಜಿಲ್ಲೆಯಲ್ಲಿ ರೂಪಗೊಳ್ಳುವ ಯಾವುದೇ ಸಾಹಿತ್ಯಾತ್ಮಕ ಯೋಜನೆಗಳಿಗೆ ನಮ್ಮ ಅಸ್ಮಿತೆಯಾದ ಕುವೆಂಪು ಅವರ ಹೆಸರಿನೊಂದಿಗೆ ಪ್ರಾರಂಭಗೊಳ್ಳುವಂತಿರಲಿ. ಸಾಹಿತ್ಯ ಗ್ರಾಮಕ್ಕೆ ಕುವೆಂಪು ಸಾಹಿತ್ಯ ಗ್ರಾಮ ಎಂಬ ಹೆಸರಿದ್ದರೆ ಮತ್ತಷ್ಟು ಶಕ್ತಿ ಬಂದಂತಾಗುತ್ತದೆ. ಮುಂದಿನ ದಿನಗಳಲ್ಲಿ ಸಾಹಿತ್ಯ ಗ್ರಾಮವನ್ನು ಸರ್ಕಾರ ಮತ್ತು ನಾವೆಲ್ಲರೂ ಕೂಡಿ ಮತ್ತಷ್ಟು ಅಭಿವೃದ್ಧಿ ಪಡಿಸಲು ಶ್ರಮಿಸಲಾಗುವುದು ಎಂದು ತಿಳಿಸಿದರು.

ಡಾ.ರಾಜ್‌ಕುಮಾರ್‌ ಪುಸ್ತಕ ಮೆಲುಕು ಹಾಕಿದ ಸಚಿವರು

ಗ್ರಂಥಾಲಯದಲ್ಲಿ ಸಂಗ್ರಹಿಸಿದ್ದ ನಟ ಸಾರ್ವಭೌಮ ಡಾ.ರಾಜಕುಮಾರ್‌ ಅವರ ಜೀವನ ಚರಿತ್ರೆ ಪುಸ್ತಕದತ್ತ ಚಿತ್ತ ಹರಿಸಿದ ಸಚಿವ ಮಧು ಬಂಗಾರಪ್ಪ, ಪುಸ್ತಕ ಕೈಗೆತ್ತಿಕೊಂಡು ಪ್ರತಿಗಳನ್ನು ಮೆಲುಕು ಹಾಕುತ್ತ, ಪುಸ್ತಕ ನಿರ್ಮಾಣ ಕಾರ್ಯದಲ್ಲಿ ತಾವು, ಶಿವರಾಜ್‌ಕುಮಾರ್‌, ಪುನಿತ್‌ ರಾಜಕುಮಾರ್‌ ಅವರು ತೊಡಗಿಸಿಕೊಂಡ ಸಂದರ್ಭ ನೆನೆದರು. ಲೇಖಕ ದೊಡ್ಡಹುಲ್ಲೂರು ರುಕ್ಕೋಜಿ ಬರೆದಿರುವ ಈ ಪುಸ್ತಕವು, ಡಾ.ರಾಜ್‌ಕುಮಾರ್‌ ಕುರಿತಾಗಿ ಉನ್ನತ ಅಧ್ಯಯನ ನಡೆಸಲು ನೆರವಾಗಲಿದೆ ಎಂದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಿ.ಮಂಜುನಾಥ ಮಾತನಾಡಿ, ಸಾಹಿತ್ಯ ಗ್ರಾಮ ರಾಜ್ಯದಲ್ಲಿರುವ ಅಪರೂಪದ ಯೋಜನೆ. ಒಂದು ಕಾಲು ಎಕರೆ ಭೂಮಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಯೋಜನೆಗೆ ಸರ್ಕಾರದಿಂದ ಮತ್ತಷ್ಟು ಬಲ ಸಿಗುವ ನಿರೀಕ್ಷೆಯಿದೆ. ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಮಧು ಬಂಗಾರಪ್ಪ ಅವರು ನೀಡಿದ 5 ಲಕ್ಷ ರೂಪಾಯಿ ಆರ್ಥಿಕ‌ ಸಹಕಾರ ಮತ್ತು ಆಶಯದಂತೆ ಬಂಗಾರಪ್ಪ ಅವರ ಹೆಸರಿನಲ್ಲಿ ಗ್ರಂಥಾಲಯ ಪ್ರಾರಂಭಿಸಲಾಗಿದೆ. ಇದರಿಂದ ಸಂಶೋಧನಾರ್ಥಿಗಳಿಗೆ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಈಗಾಗಲೇ ಗ್ರಂಥಾಲಯದಲ್ಲಿ ಸುಮಾರು ಒಂದುವರೆ ಸಾವಿರದಷ್ಟು ಅಮೂಲ್ಯವಾದ ಸಾಹಿತ್ಯ ಕೃತಿಗಳು ಇವೆ. ಹಿರಿಯ ಸಾಹಿತಿಗಳ ಕೃತಿಗಳ ಪ್ರತಿಗಳನ್ನು ಸಂಗ್ರಹಿಸುವ ಕೆಲಸ ನಡೆಯುತ್ತಿದೆ. ಸಾಹಿತ್ಯ ಅಕಾಡೆಮಿ ಹಾಗೂ ವಿವಿಧ ವಿಶ್ವವಿದ್ಯಾಲಯಗಳ ಪ್ರಕಟಣೆಗಳನ್ನು ಸಹ ಸಂಗ್ರಹಿಸಲಾಗುತ್ತಿದೆ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎನ್. ರವಿಕುಮಾರ್, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ, ಸಾಹಿತಿ ಪ್ರೊ. ವಿಜಯಾದೇವಿ, ಕಸಾಪ ಪದಾಧಿಕಾರಿಗಳಾದ ಎಂ.ಎಂ.ಸ್ವಾಮಿ, ಎಂ.ನವೀನ್ ಕುಮಾರ್, ಡಿ.ಗಣೇಶ್, ಮಂಜಪ್ಪ, ಹುಚ್ಚರಾಯಪ್ಪ, ಕೃಷ್ಣಮೂರ್ತಿ ಹಿಳ್ಳೋಡಿ, ತಾಲ್ಲೂಕು ಕಸಾಪ ಅಧ್ಯಕ್ಷರಾದ ಮಹಾದೇವಿ, ರಘು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMinister Madhu BangarappaNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಮಧು ಬಂಗಾರಪ್ಪ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ-ಮೈಸೂರು ರೈಲು ಪ್ರಯಾಣಿಕರಿಗೆ ಇಲ್ಲಿದೆ ಮತ್ತೊಂದು ಲೇಟೆಸ್ಟ್ ಬಿಗ್ ಅಪ್ಡೇಟ್

Next Post

ಓದಿನಲ್ಲಿ ಶಿಸ್ತನ್ನು ಬೆಳೆಸಿಕೊಂಡಾಗ ಮಾತ್ರ ಗುರಿ ಮುಟ್ಟಲು ಸಾಧ್ಯ: ಮೇಘನಾ

kalpa News

kalpa News

Next Post
ಓದಿನಲ್ಲಿ ಶಿಸ್ತನ್ನು ಬೆಳೆಸಿಕೊಂಡಾಗ ಮಾತ್ರ ಗುರಿ ಮುಟ್ಟಲು ಸಾಧ್ಯ: ಮೇಘನಾ

ಓದಿನಲ್ಲಿ ಶಿಸ್ತನ್ನು ಬೆಳೆಸಿಕೊಂಡಾಗ ಮಾತ್ರ ಗುರಿ ಮುಟ್ಟಲು ಸಾಧ್ಯ: ಮೇಘನಾ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL