ಕಲ್ಪ ಮೀಡಿಯಾ ಹೌಸ್ | ಪುತ್ತೂರು |
ಪುತ್ತಿಲ ಪರಿವಾರದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ #Arunkumar Puttila ಅವರನ್ನು ಗಡಿಪಾರು ಮಾಡಲು ಸಿದ್ದತೆ ನಡೆದಿದೆ ಎಂದು ಹೇಳಲಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಜೂನ್ 6ರಂದು ವಿಚಾರಣೆಗೆ ಹಾಜರಾಗುವಂತೆ ಪುತ್ತಿಲ ಅವರಿಗೆ ನೊಟೀಸ್ ನೀಡಲಾಗಿದೆ.
ಈ ಕುರಿತಂತೆ ಜೂನ್ 6ರಂದು ವಿಚಾರಣೆಗೆ ಆಗಮಿಸುವಂತೆ ಪುತ್ತಿಲ ಅವರಿಗೆ ಪುತ್ತೂರು ಸಹಾಯಕ ಆಯುಕ್ತರ ಕಚೇರಿಯಿಂದ ನೊಟೀಸ್ ನೀಡಲಾಗಿದೆ ಎಂದು ವರದಿಯಾಗಿದೆ.
ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ನಡುವೆ ಇದೀಗ ಪುತ್ತಿಲ ಪರಿವಾರ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಅವರ ಗಡಿಪಾರಿಗೆ ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.
ಪುತ್ತಿಲ ಅವರನ್ನು ಪೊಲೀಸ್ ಕಾಯ್ದೆ ಕಲಂ 55ರ ಅನ್ವಯ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ ಪೋಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರಿಗೆ ಆದೇಶ ಹೊರಡಿಸುವ ಕುರಿತಂತೆ ಜೂನ್ 6 ರಂದು ವಿಚಾರಣೆ ನಿಗದಿ ಪಡಿಸಲಾಗಿದೆ.
ಜೂನ್ 6ರಂದು ವಿಚಾರಣೆಗೆ ಹಾಜರಾಗದಿದ್ದಲ್ಲಿ ಏಕಪಕ್ಷಿಯವಾಗಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ನೊಟೀಸ್’ನಲ್ಲಿ ತಿಳಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















