ಕಲ್ಪ ಮೀಡಿಯಾ ಹೌಸ್ | ಚೆನ್ನೈ |
ತಮಿಳುನಾಡಿನ ಅಣ್ಣಾ ವಿಶ್ವವಿದ್ಯಾಲಯದಲ್ಲಿ #Anna University of Tamilnadu ನಡೆದಿದ್ದ ಹೈಪ್ರೊಫೈಲ್ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ #Sexual assault Case ಸಂಬಂಧಿಸಿದಂತೆ ಅಪರಾಧಿಗೆ ಜೀವಾವಧಿ ಶಿಕ್ಷೆ #Life imprisonment ವಿಧಿಸಲಾಗಿದೆ.
ಈ ಕುರಿತಂತೆ ನ್ಯಾಯಾಧೀಶರಾದ ರಾಜಲಕ್ಷಿö್ಮ ಅವರು ಆದೇಶ ಹೊರಡಿಸಿದ್ದು, ಶಿಕ್ಷೆಗೆ ಗುರಿಯಾದ ಅಪರಾಧಿ ಬಿರಿಯಾನಿ ಮಾರಾಟಗಾರ ಜ್ಞಾನಶೇಖರ್ ಎಂಬಾತ 30 ವರ್ಷಗಳ ಕಾಲ ಜೈಲಿನಲ್ಲಿ ಇರಬೇಕಾಗುತ್ತದೆ ಎಂದಿದ್ದಾರೆ.

ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಬೆದರಿಕೆ ಮತ್ತು ಅಪಹರಣ ಸೇರಿದಂತೆ ಎಲ್ಲಾ 11 ಆರೋಪಗಳಲ್ಲಿ ಜ್ಞಾನಶೇಖರನ್ ತಪ್ಪಿತಸ್ಥನೆಂದು ನ್ಯಾಯಾಧೀಶರು ಕಳೆದ ವಾರ ಘೋಷಿಸಿದ್ದರು.

ತನ್ನ ವೃದ್ಧ ತಾಯಿ ಮತ್ತು ಎಂಟು ವರ್ಷದ ಮಗಳನ್ನು ನೋಡಿಕೊಳ್ಳಲು ಮನೆಯಲ್ಲಿರಬೇಕಾದ ಅಗತ್ಯವನ್ನು ಉಲ್ಲೇಖಿಸಿ ಕನಿಷ್ಠ ಶಿಕ್ಷೆಗಾಗಿ ಅವರು ಈ ಹಿಂದೆ ಮನವಿ ಮಾಡಿದ್ದರು. ಆದರೆ ಎಲ್ಲಾ ಆರೋಪಗಳ ಮೇಲೆ ಅವನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ, ಆತನಿಗೆ ಗರಿಷ್ಠ ಶಿಕ್ಷೆ ವಿಧಿಸಬೇಕು ಎಂದು ನ್ಯಾಯಾಧೀಶರು ಉಲ್ಲೇಖಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post