ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಖಾಸಗಿ ಬಸ್ ಮತ್ತು ಕಾರಿನ ನಡುವೆ ಅಪಘಾತವೊಂದು ಸಂಭವಿಸಿದ್ದು ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದರೆ 8 ಮಂದಿಗೆ ಗಾಯಗೊಂಡಿರುವ ಘಟನೆ ನಗರದ ಸಾವರ್ ಲೈನ್ ರಸ್ತೆಯಲ್ಲಿ ನಡೆದಿದೆ.
ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಬರುತ್ತಿದ್ದ ಬಸ್ ನಗರದ ಎಲ್‌ಎಲ್‌ಆರ್ ರಸ್ತೆಗೆ ಬಂದಾಗ ಕಾರಿಗೆ ಡಿಕ್ಕಿ ಹೊಡಿದಿದೆ. ಢಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಪ್ರದೀಪ್ ಎಂಬಾತ ಮೃತಪಟ್ಟಿದ್ದಾನೆ. ಬಸ್‌ನಲ್ಲಿದ್ದ ಎಂಟು ಮಂದಿಗೆ ಗಂಭೀರ ಗಾಯಗಳಾಗಿದ್ದು ಎಲ್ಲರನ್ನೂ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೆಗ್ಗಾನ್ ಆಸ್ಪತ್ರೆಯಲ್ಲಿ ಇಬ್ಬರು ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದರೆ, ಉಳಿದ ಆರು ಜನ ಸರ್ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಶ್ಚಿಮ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















